ICC T20 Rankings: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಟಿ20 ಬ್ಯಾಟ್ಸ್ಮನ್ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನ ಅಲಂಕರಿಸಿದ್ದಾರೆ. 2022 ರಲ್ಲಿ ಭರ್ಜರಿ ಫಾರ್ಮ್ನಲ್ಲಿದ್ದ ಸೂರ್ಯ ಈ ಬಾರಿ ಮತ್ತಷ್ಟು ಅಂಕಗಳನ್ನು ಪಡೆದಿದ್ದು, ಈ ಮೂಲಕ ದ್ವಿತೀಯ ಸ್ಥಾನಿ ಜೊತೆಗಿನ ಅಂತರವನ್ನು ಹೆಚ್ಚಿಸಿಕೊಂಡಿದ್ದಾರೆ.