ICC Rankings: 6 ಸ್ಥಾನ ಕುಸಿದ ಬಾಬರ್; ಅಗ್ರ 10ರೊಳಗೆ ಮೂವರು ಭಾರತೀಯರು

ICC Men’s Test Player Rankings: ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಹಾಗೂ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ಟೆಸ್ಟ್ ಸರಣಿ ನಡೆಯುತ್ತಿದೆ. ಈ ನಡುವೆ ಐಸಿಸಿ ಹೊಸ ಟೆಸ್ಟ್ ರ್ಯಾಂಕಿಂಗ್ ಪ್ರಕಟಿಸಿದೆ. ಈ ಬಾರಿಯ ಶ್ರೇಯಾಂಕದಲ್ಲಿ ಭಾರಿ ಬದಲಾವಣೆಗಳಾಗಿದ್ದು, ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ರ‍್ಯಾಂಕಿಂಗ್‌ನಲ್ಲಿ ಕುಸಿತ ಕಂಡಿದ್ದರೆ, ಇಂಗ್ಲೆಂಡ್‌ನ ಯುವ ಆಟಗಾರ ಹ್ಯಾರಿ ಬ್ರೂಕ್ ಭರ್ಜರಿ ಲಾಭ ಗಳಿಸಿದ್ದಾರೆ.

|

Updated on:Aug 28, 2024 | 3:58 PM

ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಹಾಗೂ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ಟೆಸ್ಟ್ ಸರಣಿ ನಡೆಯುತ್ತಿದೆ. ಈ ನಡುವೆ ಐಸಿಸಿ ಹೊಸ ಟೆಸ್ಟ್ ರ್ಯಾಂಕಿಂಗ್ ಪ್ರಕಟಿಸಿದೆ. ಈ ಬಾರಿಯ ಶ್ರೇಯಾಂಕದಲ್ಲಿ ಭಾರಿ ಬದಲಾವಣೆಗಳಾಗಿದ್ದು, ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ರ‍್ಯಾಂಕಿಂಗ್‌ನಲ್ಲಿ ಕುಸಿತ ಕಂಡಿದ್ದರೆ, ಇಂಗ್ಲೆಂಡ್‌ನ ಯುವ ಆಟಗಾರ ಹ್ಯಾರಿ ಬ್ರೂಕ್ ಭರ್ಜರಿ ಲಾಭ ಗಳಿಸಿದ್ದಾರೆ.

1 / 7
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ರನ್ ಕಲೆಹಾಕಲು ವಿಫಲರಾಗಿದ್ದ ಬಾಬರ್ ಆಝಂ, ಬರೋಬ್ಬರಿ 6 ಸ್ಥಾನ ಕುಸಿತ ಕಂಡಿದ್ದಾರೆ. ಕಳೆದ ವಾರದ ರ್ಯಾಂಕಿಂಗ್​ನಲ್ಲಿ 3ನೇ ಸ್ಥಾನದಲ್ಲಿದ್ದ ಬಾಬರ್, ಇದೀಗ 6 ಸ್ಥಾನ ಕುಸಿತ ಕಂಡಿದ್ದು, 9ನೇ ಸ್ಥಾನಕ್ಕೆ ಬಂದು ನಿಂತಿದ್ದಾರೆ. ಇದೇ ಕಳಪೆ ಫಾರ್ಮ್​ ಮುಂದುವರೆದರೆ ಬಾಬರ್ ಟಾಪ್ 10 ರಿಂದಲೂ ಹೊರಬೀಳಲಿದ್ದಾರೆ.

2 / 7
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್​ನಲ್ಲಿ 171 ಮತ್ತು ಎರಡನೇ ಇನ್ನಿಂಗ್ಸ್​ನಲ್ಲಿ 51 ರನ್ ಸಿಡಿಸಿದ್ದ ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಮೊಹಮ್ಮದ್ ರಿಜ್ವಾನ್ ಮುಂಬಡ್ತಿ ಪಡೆದಿದ್ದು, 7 ಸ್ಥಾನ ಮೇಲೇರಿ ಜಂಟಿ 10ನೇ ಸ್ಥಾನವನ್ನು ಆಲಂಕರಿಸಿದ್ದಾರೆ.

3 / 7
ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್​ನಲ್ಲಿ 56 ಮತ್ತು 32 ರನ್​ಗಳ ಇನ್ನಿಂಗ್ಸ್ ಆಡಿದ್ದ ಇಂಗ್ಲೆಂಡ್‌ನ ಹ್ಯಾರಿ ಬ್ರೂಕ್ 3 ಸ್ಥಾನ ಮೇಲೇರಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಅದೇ ಸಮಯದಲ್ಲಿ, ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 191 ರನ್‌ಗಳ ಇನ್ನಿಂಗ್ಸ್ ಆಡಿದ್ದ ಬಾಂಗ್ಲಾದೇಶದ ಮುಶ್ಫಿಕರ್ ರಹೀಮ್ 7 ಸ್ಥಾನ ಮೇಲೇರಿ 17ನೇ ಸ್ಥಾನಕ್ಕೆ ತಲುಪಿದ್ದಾರೆ.

4 / 7
ಇನ್ನು ಹಲವು ದಿನಗಳಿಂದ ಯಾವುದೇ ಟೆಸ್ಟ್ ಪಂದ್ಯವನ್ನೂ ಆಡದಿದ್ದರೂ, ಟೀಂ ಇಂಡಿಯಾದ ಮೂವರು ಬ್ಯಾಟ್ಸ್‌ಮನ್​ಗಳು ಅಗ್ರ 10ರೊಳಗೆ ಸ್ಥಾನಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಾಯಕ ರೋಹಿತ್ ಶರ್ಮಾ ಆರನೇ ಸ್ಥಾನದಲ್ಲಿದ್ದರೆ, ಯಶಸ್ವಿ ಜೈಸ್ವಾಲ್ ಕೂಡ ಒಂದು ಸ್ಥಾನ ಮೇಲೇರಿದ್ದು, ಇದೀಗ ಏಳನೇ ಸ್ಥಾನಕ್ಕೆ ತಲುಪಿದ್ದಾರೆ. ವಿರಾಟ್ ಕೊಹ್ಲಿ ಇದೀಗ 2 ಸ್ಥಾನಗಳ ಏರಿಕೆಯೊಂದಿಗೆ 8ನೇ ಸ್ಥಾನದಲ್ಲಿದ್ದಾರೆ.

5 / 7
ಉಳಿದಂತೆ ಇಂಗ್ಲೆಂಡ್‌ನ ಬ್ಯಾಟ್ಸ್‌ಮನ್ ಜೋ ರೂಟ್ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದರೆ, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಎರಡನೇ ಸ್ಥಾನದಲ್ಲಿದ್ದಾರೆ. ಡ್ಯಾರೆಲ್ ಮಿಚೆಲ್ ಮೂರನೇ ಸ್ಥಾನದಲ್ಲಿದ್ದು, ಹ್ಯಾರಿ ಬ್ರೂಕ್ ಮೂರು ಸ್ಥಾನಗಳನ್ನು ಜಿಗಿದು ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ.

6 / 7
ಸ್ಟೀವ್ ಸ್ಮಿತ್ ಐದನೇ ಸ್ಥಾನದಲ್ಲಿದ್ದು, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಆರನೇ ಸ್ಥಾನ. ಯಶಸ್ವಿ ಜೈಸ್ವಾಲ್ 7 ನೇ ಸ್ಥಾನ, ವಿರಾಟ್ ಕೊಹ್ಲಿ 8 ನೇ ಸ್ಥಾನದಲ್ಲಿದ್ದಾರೆ. ಬಾಬರ್ ಅಜಮ್ 9 ನೇ ಸ್ಥಾನದಲ್ಲಿದ್ದು, ಮೊಹಮ್ಮದ್ ರಿಜ್ವಾನ್ 10ನೇ ಸ್ಥಾನಕ್ಕೆ ತಲುಪಿದ್ದಾರೆ. ಈ ಮೂಲಕ ಮೊಹಮ್ಮದ್ ರಿಜ್ವಾನ್ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ 10 ರೊಳಗೆ ತಲುಪಿದ ಪಾಕಿಸ್ತಾನದ ಮೊದಲ ವಿಕೆಟ್ ಕೀಪರ್ ಆಗಿದ್ದಾರೆ.

7 / 7

Published On - 3:37 pm, Wed, 28 August 24

Follow us