ICC Rankings: 6 ಸ್ಥಾನ ಕುಸಿದ ಬಾಬರ್; ಅಗ್ರ 10ರೊಳಗೆ ಮೂವರು ಭಾರತೀಯರು
ICC Men’s Test Player Rankings: ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಹಾಗೂ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ಟೆಸ್ಟ್ ಸರಣಿ ನಡೆಯುತ್ತಿದೆ. ಈ ನಡುವೆ ಐಸಿಸಿ ಹೊಸ ಟೆಸ್ಟ್ ರ್ಯಾಂಕಿಂಗ್ ಪ್ರಕಟಿಸಿದೆ. ಈ ಬಾರಿಯ ಶ್ರೇಯಾಂಕದಲ್ಲಿ ಭಾರಿ ಬದಲಾವಣೆಗಳಾಗಿದ್ದು, ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ರ‍್ಯಾಂಕಿಂಗ್‌ನಲ್ಲಿ ಕುಸಿತ ಕಂಡಿದ್ದರೆ, ಇಂಗ್ಲೆಂಡ್‌ನ ಯುವ ಆಟಗಾರ ಹ್ಯಾರಿ ಬ್ರೂಕ್ ಭರ್ಜರಿ ಲಾಭ ಗಳಿಸಿದ್ದಾರೆ.
1 / 7
ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಹಾಗೂ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ಟೆಸ್ಟ್ ಸರಣಿ ನಡೆಯುತ್ತಿದೆ. ಈ ನಡುವೆ ಐಸಿಸಿ ಹೊಸ ಟೆಸ್ಟ್ ರ್ಯಾಂಕಿಂಗ್ ಪ್ರಕಟಿಸಿದೆ. ಈ ಬಾರಿಯ ಶ್ರೇಯಾಂಕದಲ್ಲಿ ಭಾರಿ ಬದಲಾವಣೆಗಳಾಗಿದ್ದು, ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ರ‍್ಯಾಂಕಿಂಗ್‌ನಲ್ಲಿ ಕುಸಿತ ಕಂಡಿದ್ದರೆ, ಇಂಗ್ಲೆಂಡ್‌ನ ಯುವ ಆಟಗಾರ ಹ್ಯಾರಿ ಬ್ರೂಕ್ ಭರ್ಜರಿ ಲಾಭ ಗಳಿಸಿದ್ದಾರೆ.
2 / 7
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ರನ್ ಕಲೆಹಾಕಲು ವಿಫಲರಾಗಿದ್ದ ಬಾಬರ್ ಆಝಂ, ಬರೋಬ್ಬರಿ 6 ಸ್ಥಾನ ಕುಸಿತ ಕಂಡಿದ್ದಾರೆ. ಕಳೆದ ವಾರದ ರ‍್ಯಾಂಕಿಂಗ್‌ನಲ್ಲಿ 3ನೇ ಸ್ಥಾನದಲ್ಲಿದ್ದ ಬಾಬರ್, ಇದೀಗ 6 ಸ್ಥಾನ ಕುಸಿತ ಕಂಡಿದ್ದು, 9ನೇ ಸ್ಥಾನಕ್ಕೆ ಬಂದು ನಿಂತಿದ್ದಾರೆ. ಇದೇ ಕಳಪೆ ಫಾರ್ಮ್ ಮುಂದುವರೆದರೆ ಬಾಬರ್ ಟಾಪ್ 10 ರಿಂದಲೂ ಹೊರಬೀಳಲಿದ್ದಾರೆ.
3 / 7
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ 171 ಮತ್ತು ಎರಡನೇ ಇನ್ನಿಂಗ್ಸ್ನಲ್ಲಿ 51 ರನ್ ಸಿಡಿಸಿದ್ದ ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಮೊಹಮ್ಮದ್ ರಿಜ್ವಾನ್ ಮುಂಬಡ್ತಿ ಪಡೆದಿದ್ದು, 7 ಸ್ಥಾನ ಮೇಲೇರಿ ಜಂಟಿ 10ನೇ ಸ್ಥಾನವನ್ನು ಆಲಂಕರಿಸಿದ್ದಾರೆ.
4 / 7
ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್‌ನಲ್ಲಿ 56 ಮತ್ತು 32 ರನ್‌ಗಳ ಇನ್ನಿಂಗ್ಸ್ ಆಡಿದ್ದ ಇಂಗ್ಲೆಂಡ್‌ನ ಹ್ಯಾರಿ ಬ್ರೂಕ್ 3 ಸ್ಥಾನ ಮೇಲೇರಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಅದೇ ಸಮಯದಲ್ಲಿ, ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 191 ರನ್‌ಗಳ ಇನ್ನಿಂಗ್ಸ್ ಆಡಿದ್ದ ಬಾಂಗ್ಲಾದೇಶದ ಮುಶ್ಫಿಕರ್ ರಹೀಮ್ 7 ಸ್ಥಾನ ಮೇಲೇರಿ 17ನೇ ಸ್ಥಾನಕ್ಕೆ ತಲುಪಿದ್ದಾರೆ.
5 / 7
ಇನ್ನು ಹಲವು ದಿನಗಳಿಂದ ಯಾವುದೇ ಟೆಸ್ಟ್ ಪಂದ್ಯವನ್ನೂ ಆಡದಿದ್ದರೂ, ಟೀಂ ಇಂಡಿಯಾದ ಮೂವರು ಬ್ಯಾಟ್ಸ್ಮನ್ಗಳು ಅಗ್ರ 10ರೊಳಗೆ ಸ್ಥಾನಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಾಯಕ ರೋಹಿತ್ ಶರ್ಮಾ ಆರನೇ ಸ್ಥಾನದಲ್ಲಿದ್ದರೆ, ಯಶಸ್ವಿ ಜೈಸ್ವಾಲ್ ಕೂಡ ಒಂದು ಸ್ಥಾನ ಮೇಲೇರಿದ್ದು, ಇದೀಗ ಏಳನೇ ಸ್ಥಾನಕ್ಕೆ ತಲುಪಿದ್ದಾರೆ. ವಿರಾಟ್ ಕೊಹ್ಲಿ ಇದೀಗ 2 ಸ್ಥಾನಗಳ ಏರಿಕೆಯೊಂದಿಗೆ 8ನೇ ಸ್ಥಾನದಲ್ಲಿದ್ದಾರೆ.
6 / 7
ಉಳಿದಂತೆ ಇಂಗ್ಲೆಂಡ್‌ನ ಬ್ಯಾಟ್ಸ್‌ಮನ್ ಜೋ ರೂಟ್ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದರೆ, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಎರಡನೇ ಸ್ಥಾನದಲ್ಲಿದ್ದಾರೆ. ಡ್ಯಾರೆಲ್ ಮಿಚೆಲ್ ಮೂರನೇ ಸ್ಥಾನದಲ್ಲಿದ್ದು, ಹ್ಯಾರಿ ಬ್ರೂಕ್ ಮೂರು ಸ್ಥಾನಗಳನ್ನು ಜಿಗಿದು ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ.
7 / 7
ಸ್ಟೀವ್ ಸ್ಮಿತ್ ಐದನೇ ಸ್ಥಾನದಲ್ಲಿದ್ದು, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಆರನೇ ಸ್ಥಾನ. ಯಶಸ್ವಿ ಜೈಸ್ವಾಲ್ 7 ನೇ ಸ್ಥಾನ, ವಿರಾಟ್ ಕೊಹ್ಲಿ 8 ನೇ ಸ್ಥಾನದಲ್ಲಿದ್ದಾರೆ. ಬಾಬರ್ ಅಜಮ್ 9 ನೇ ಸ್ಥಾನದಲ್ಲಿದ್ದು, ಮೊಹಮ್ಮದ್ ರಿಜ್ವಾನ್ 10ನೇ ಸ್ಥಾನಕ್ಕೆ ತಲುಪಿದ್ದಾರೆ. ಈ ಮೂಲಕ ಮೊಹಮ್ಮದ್ ರಿಜ್ವಾನ್ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ 10 ರೊಳಗೆ ತಲುಪಿದ ಪಾಕಿಸ್ತಾನದ ಮೊದಲ ವಿಕೆಟ್ ಕೀಪರ್ ಆಗಿದ್ದಾರೆ.
Published On - 3:37 pm, Wed, 28 August 24