ಜಿಂಬಾಬ್ವೆ ವಿರುದ್ಧ ಮಿಂಚಿದ ವೈಷ್ಣವಿ ಶರ್ಮಾಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಗಿಫ್ಟ್

Updated on: Nov 03, 2026 | 6:48 PM

ಭಾರತ ಮಹಿಳಾ ತಂಡ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ಈ ಗೆಲುವಿನ ಬಳಿಕ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭಾರತದ ಆಟಗಾರ್ತಿಯರು ಭರ್ಜರಿ ಪ್ರಗತಿ ಕಂಡಿದ್ದಾರೆ. ಯುವ ಸ್ಪಿನ್ನರ್ ವೈಷ್ಣವಿ ಶರ್ಮಾ 53 ಸ್ಥಾನ ಜಿಗಿದು ಗಮನ ಸೆಳೆದರೆ, ಸಯಾಲಿ ಸತ್ಘರೆ, ಪ್ರತಿಕಾ ರಾವಲ್ ಹಾಗೂ ಶಫಾಲಿ ವರ್ಮಾ ಕೂಡ ತಮ್ಮ ರ‍್ಯಾಂಕಿಂಗ್‌ ಸುಧಾರಿಸಿಕೊಂಡಿದ್ದಾರೆ. ಇದು ಭಾರತ ಮಹಿಳಾ ಕ್ರಿಕೆಟ್‌ಗೆ ಹೆಮ್ಮೆಯ ವಿಷಯ.

1 / 6
ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಮಹಿಳಾ ತಂಡ 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದೆ. ಈ ಭರ್ಜರಿ ಗೆಲುವಿನ ಬೆನ್ನಲ್ಲೇ ಐಸಿಸಿ ಬಿಡುಗಡೆ ಮಾಡಿರುವ ಮಹಿಳಾ ಏಕದಿನ ಆಟಗಾರ್ತಿಯರ ನೂತನ ರ‍್ಯಾಂಕಿಂಗ್‌ನಲ್ಲಿ ಭಾರತದ ಯುವ ಸ್ಪಿನ್ನರ್ ವೈಷ್ಣವಿ ಶರ್ಮಾ ಅತಿ ದೊಡ್ಡ ಜಿಗಿತ ಕಂಡಿದ್ದು, ಬೌಲರ್‌ಗಳ ಪಟ್ಟಿಯಲ್ಲಿ 53 ಸ್ಥಾನ ಮೇಲಕ್ಕೇರಿದ್ದಾರೆ(PC-PTI).

ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಮಹಿಳಾ ತಂಡ 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದೆ. ಈ ಭರ್ಜರಿ ಗೆಲುವಿನ ಬೆನ್ನಲ್ಲೇ ಐಸಿಸಿ ಬಿಡುಗಡೆ ಮಾಡಿರುವ ಮಹಿಳಾ ಏಕದಿನ ಆಟಗಾರ್ತಿಯರ ನೂತನ ರ‍್ಯಾಂಕಿಂಗ್‌ನಲ್ಲಿ ಭಾರತದ ಯುವ ಸ್ಪಿನ್ನರ್ ವೈಷ್ಣವಿ ಶರ್ಮಾ ಅತಿ ದೊಡ್ಡ ಜಿಗಿತ ಕಂಡಿದ್ದು, ಬೌಲರ್‌ಗಳ ಪಟ್ಟಿಯಲ್ಲಿ 53 ಸ್ಥಾನ ಮೇಲಕ್ಕೇರಿದ್ದಾರೆ(PC-PTI).

2 / 6

20 ವರ್ಷದ ಎಡಗೈ ಸ್ಪಿನ್ನರ್ ವೈಷ್ಣವಿ ಶರ್ಮಾ, ಜಿಂಬಾಬ್ವೆ ವಿರುದ್ಧದ ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ಒಟ್ಟು 9 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಅಮೋಘ ಪ್ರದರ್ಶನದ ಫಲವಾಗಿ ಅವರು ಏಕದಿನ ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 53 ಸ್ಥಾನಗಳ ಪ್ರಗತಿ ಸಾಧಿಸಿ 94ನೇ ಸ್ಥಾನಕ್ಕೆ ತಲುಪಿದ್ದಾರೆ(PC-PTI).

3 / 6

ಎರಡನೇ ಏಕದಿನ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದ್ದ ವೈಷ್ಣವಿ, ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಐದು ವಿಕೆಟ್‌ಗಳ ಗೊಂಚಲು ಪಡೆದು ಮಿಂಚಿದ್ದರು. ತಮ್ಮ ವೃತ್ತಿಜೀವನದ ಕೇವಲ ಮೂರನೇ ಏಕದಿನ ಪಂದ್ಯದಲ್ಲೇ 39 ರನ್ ನೀಡಿ 5 ವಿಕೆಟ್ ಪಡೆದಿದ್ದ ಅವರು, ಪಂದ್ಯಶ್ರೇಷ್ಠ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡಿದ್ದರು. ಈ ಮೂಲಕ ಐಸಿಸಿ ಮಹಿಳಾ ಚಾಂಪಿಯನ್‌ಶಿಪ್ ಸರಣಿಯಲ್ಲಿ ಭಾರತ ಕ್ಲೀನ್ ಸ್ವೀಪ್ ಸಾಧಿಸಲು ಪ್ರಮುಖ ಪಾತ್ರ ವಹಿಸಿದ್ದರು(PC-PTI).

4 / 6

ಭಾರತದ ಬೌಲಿಂಗ್ ವಿಭಾಗದ ಮತ್ತೊಬ್ಬ ಆಟಗಾರ್ತಿ ಸಯಾಲಿ ಸತ್ಘರೆ ಕೂಡ ರ‍್ಯಾಂಕಿಂಗ್‌ನಲ್ಲಿ ಮುಂಬಡ್ತಿ ಪಡೆದಿದ್ದಾರೆ. ಅವರು 18 ಸ್ಥಾನ ಮೇಲಕ್ಕೇರಿ 85ನೇ ಸ್ಥಾನ ತಲುಪಿದ್ದಾರೆ. ಜಿಂಬಾಬ್ವೆ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಆರು ಓವರ್‌ಗಳಲ್ಲಿ ಕೇವಲ 11 ರನ್ ನೀಡಿ ಎರಡು ವಿಕೆಟ್ ಪಡೆದಿದ್ದ ಸಯಾಲಿ, 30 ಡಾಟ್ ಬಾಲ್‌ಗಳನ್ನು ಎಸೆದು ಎದುರಾಳಿ ಬ್ಯಾಟರ್‌ಗಳಿಗೆ ಕಡಿವಾಣ ಹಾಕಿದ್ದರು(PC-PTI).

5 / 6

ಬ್ಯಾಟಿಂಗ್ ವಿಭಾಗದಲ್ಲೂ ಭಾರತದ ಆಟಗಾರ್ತಿಯರು ಉತ್ತಮ ಸಾಧನೆ ಮಾಡಿದ್ದಾರೆ. ಆರಂಭಿಕ ಆಟಗಾರ್ತಿ ಪ್ರತಿಕಾ ರಾವಲ್ ಮೂರು ಸ್ಥಾನ ಮೇಲಕ್ಕೇರಿ 18ನೇ ಸ್ಥಾನ ತಲುಪಿದ್ದಾರೆ. ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಸತತ ಮೂರು ಅರ್ಧಶತಕಗಳನ್ನು ದಾಖಲಿಸಿದ್ದು ಅವರ ಈ ಏರಿಕೆಗೆ ಪ್ರಮುಖ ಕಾರಣವಾಗಿದೆ(PC-PTI).

6 / 6

ಮತ್ತೊಂದೆಡೆ, ಸ್ಫೋಟಕ ಬ್ಯಾಟರ್ ಶಫಾಲಿ ವರ್ಮಾ ಕೂಡ ಎಂಟು ಸ್ಥಾನಗಳ ಏರಿಕೆ ಕಂಡು ಜಂಟಿ 65ನೇ ಸ್ಥಾನಕ್ಕೆ ತಲುಪಿದ್ದಾರೆ. ಮೂರನೇ ಏಕದಿನ ಪಂದ್ಯದಲ್ಲಿ ಅವರು ಕೇವಲ 26 ಎಸೆತಗಳಲ್ಲಿ 51 ರನ್ ಸಿಡಿಸಿ ಮಿಂಚಿದ್ದರು(PC-PTI).

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us