ICC ODI Ranking: ಪಾಕ್ ನಾಯಕ ಬಾಬರ್ ನಂ.1! ಕುಸಿತ ಕಂಡ ಕೊಹ್ಲಿ, ಪಾಕ್ ತಂಡದ್ದೇ ಕಾರುಬಾರು

ICC ODI Ranking: ಮಾರ್ಚ್ 6 ರಂದು ಬುಧವಾರ ಬಿಡುಗಡೆಯಾದ ಇತ್ತೀಚಿನ ಶ್ರೇಯಾಂಕದಲ್ಲಿ ಬಾಬರ್ ಅಜಮ್ ODIಗಳಲ್ಲಿ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿ ಉಳಿದಿದ್ದಾರೆ.

ಪೃಥ್ವಿಶಂಕರ
|

Updated on:Apr 06, 2022 | 5:09 PM

ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್  ಎಲ್ಲಾ ಮೂರು ಮಾದರಿಗಳಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಬಾಬರ್ ನಿರಂತರವಾಗಿ ದಾಖಲೆಗಳನ್ನು ಮಾಡುತ್ತಿದ್ದಾರೆ. ಐಸಿಸಿ ಶ್ರೇಯಾಂಕದಲ್ಲೂ ಈ ಸಾಧನೆಯ ಪ್ರತಿಫಲ ಪಡೆಯುತ್ತಿದ್ದಾರೆ. ಬಾಬರ್ ಆಸ್ಟ್ರೇಲಿಯಾ ವಿರುದ್ಧದ ODI ಸರಣಿಯಲ್ಲಿ ಅವರ ಅದ್ಭುತ ಪ್ರದರ್ಶನದ ಆಧಾರದ ಮೇಲೆ ನಂಬರ್ ಒನ್ ಸ್ಥಾನವನ್ನು ಬಲಪಡಿಸಿದ್ದಾರೆ.

1 / 4
ಮಾರ್ಚ್ 6 ರಂದು ಬುಧವಾರ ಬಿಡುಗಡೆಯಾದ ಇತ್ತೀಚಿನ ಶ್ರೇಯಾಂಕದಲ್ಲಿ ಬಾಬರ್ ಅಜಮ್ ODIಗಳಲ್ಲಿ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿ ಉಳಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 2 ಶತಕಗಳನ್ನು ಬಾರಿಸಿದ ನಂತರ, ಬಾಬರ್ ಎರಡನೇ ಶ್ರೇಯಾಂಕದ ಭಾರತೀಯ ಸ್ಟಾರ್ ವಿರಾಟ್ ಕೊಹ್ಲಿಗಿಂತ ದೊಡ್ಡ ಮುನ್ನಡೆ ಸಾಧಿಸಿದ್ದಾರೆ. ಇತ್ತೀಚಿನ ಶ್ರೇಯಾಂಕದಲ್ಲಿ ಬಾಬರ್ 891 ರೇಟಿಂಗ್ ಅಂಕಗಳನ್ನು ಹೊಂದಿದ್ದರೆ, ವಿರಾಟ್ ಕೊಹ್ಲಿ ಕೇವಲ 811 ಅಂಕಗಳನ್ನು ಹೊಂದಿದ್ದಾರೆ.

2 / 4
ಬಾಬರ್ ಮಾತ್ರವಲ್ಲ, ಪಾಕಿಸ್ತಾನದ ಆರಂಭಿಕ ಆಟಗಾರ ಇಮಾಮ್-ಉಲ್-ಹಕ್ ಕೂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿ 2 ಶತಕ, 1 ಅರ್ಧಶತಕದ ಸಹಾಯದಿಂದ ಸುಮಾರು 300 ರನ್ ಗಳಿಸಿದರು. ಇದರ ಲಾಭ ಪಡೆದ ಅವರು 7 ಸ್ಥಾನ ಜಿಗಿತದೊಂದಿಗೆ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದಾರೆ.

3 / 4
ಬೌಲರ್‌ಗಳ ಮಟ್ಟಿಗೆ ಹೇಳುವುದಾದರೆ ಅದರಲ್ಲಿ ಹೆಚ್ಚಿನ ಬದಲಾವಣೆ ಆಗಿಲ್ಲ. ನ್ಯೂಜಿಲೆಂಡ್ ನ ಟ್ರೆಂಟ್ ಬೌಲ್ಟ್ ಮೊದಲ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಕ್ರಿಸ್ ವೋಕ್ಸ್ ಒಂದು ಸ್ಥಾನ ಮೇಲೇರಿ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ. ಪಾಕಿಸ್ತಾನದ ವೇಗಿ ಶಾಹೀನ್ ಅಫ್ರಿದಿ 8 ಸ್ಥಾನ ಮೇಲೇರಿ ಏಳನೇ ಸ್ಥಾನಕ್ಕೆ ತಲುಪಿದ್ದಾರೆ. ODI ಬೌಲರ್‌ಗಳ ಶ್ರೇಯಾಂಕದಲ್ಲಿ, ಆರನೇ ಸ್ಥಾನದಲ್ಲಿ ಭಾರತದ ಜಸ್ಪ್ರೀತ್ ಬುಮ್ರಾ ಮಾತ್ರ ಇದ್ದಾರೆ.

4 / 4

Published On - 4:54 pm, Wed, 6 April 22

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ