- Kannada News Photo gallery Cricket photos ICC ODI Rankings: Shaheen Afridi and Babar Azam top latest ODI rankings
ಐಸಿಸಿ ರ‍್ಯಾಂಕಿಂಗ್ಸ್ ಪ್ರಕಟ: ಪಾಕ್ ಆಟಗಾರರು ನಂಬರ್ 1
ICC ODI Rankings: ಐಸಿಸಿ ಪ್ರಕಟಿಸಿರುವ ನೂತನ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಆರು ಆಟಗಾರರು ಕಾಣಿಸಿಕೊಂಡಿದ್ದಾರೆ. ಇಲ್ಲಿ ಮೂವರು ಬ್ಯಾಟರ್ಗಳು ಟಾಪ್-10 ಪಟ್ಟಿಯಲ್ಲಿ ಕಾಣಿಸಿಕೊಂಡರೆ, ಮತ್ತೆ ಮೂವರು ಬೌಲರ್ಗಳ ವಿಭಾಗದಲ್ಲಿ ಅಗ್ರ ಹತ್ತರಲ್ಲಿ ಸ್ಥಾನ ಪಡೆದಿದ್ದಾರೆ.
Updated on: Nov 14, 2024 | 8:35 AM

ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಒಡಿಐ ಬ್ಯಾಟರ್ಗಳ ರ‍್ಯಾಂಕಿಂಗ್ಸ್ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ ಅಗ್ರಸ್ಥಾನ ಅಲಂಕರಿಸಿದ್ದಾರೆ. ಹಾಗೆಯೇ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮೂವರು ದಾಂಡಿಗರು ಕಾಣಿಸಿಕೊಂಡಿದ್ದಾರೆ.

ಇಲ್ಲಿ ಬಾಬರ್ ಆಝಂ 825 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದರೆ, ರೋಹಿತ್ ಶರ್ಮಾ 765 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಹಾಗೆಯೇ 763 ಅಂಕಗಳನ್ನು ಹೊಂದಿರುವ ಶುಭ್ಮನ್ ಗಿಲ್ ಮೂರನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 746 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಅತ್ತ ಬೌಲಿಂಗ್ ವಿಭಾಗದಲ್ಲಿ ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಮೂವರು ಬೌಲರ್ಗಳು ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡದ ಎಡಗೈ ವೇಗಿ ಶಾಹೀನ್ ಶಾ ಅಫ್ರಿದಿ ಅಗ್ರಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

696 ಅಂಕಗಳೊಂದಿಗೆ ಶಾಹೀನ್ ಶಾ ಅಫ್ರಿದಿ ಮೊದಲ ಸ್ಥಾನದಲ್ಲಿದ್ದರೆ, 687 ಪಾಯಿಂಟ್ಸ್ ಹೊಂದಿರುವ ಅಫ್ಘಾನಿಸ್ತಾನದ ರಶೀದ್ ಖಾನ್ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಸೌತ್ ಆಫ್ರಿಕಾದ ಕೇಶವ್ ಮಹಾರಾಜ್ (674) ಹಾಗೂ ಭಾರತದ ಕುಲ್ದೀಪ್ ಯಾದವ್ (665) ನಂತರದ ಸ್ಥಾನಗಳಲ್ಲಿದ್ದಾರೆ.

ಹಾಗೆಯೇ ಟೀಮ್ ಇಂಡಿಯಾ ವೇಗಿಗಳಾದ ಜಸ್ಪ್ರೀತ್ ಬುಮ್ರಾ 645 ಅಂಕಗಳೊಂದಿಗೆ ಈ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿ ಕಾಣಿಸಿಕೊಂಡರೆ, ಮೊಹಮ್ಮದ್ ಸಿರಾಜ್ 643 ಅಂಕಗಳೊಂದಿಗೆ 8ನೇ ಸ್ಥಾನವನ್ನು ಅಲಂಕರಿಸಿದ್ದಾರೆ.

ಇನ್ನು ಏಕದಿನ ಕ್ರಿಕೆಟ್ ಆಲ್ರೌಂಡರ್ಗಳ ಪಟ್ಟಿಯಲ್ಲಿ ಅಫ್ಘಾನಿಸ್ತಾನದ ಮೊಹಮ್ಮದ್ ನಬಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಒಟ್ಟು 318 ಅಂಕಗಳೊಂದಿಗೆ ನಬಿ ಮೊದಲ ಸ್ಥಾನವನ್ನು ಅಲಂಕರಿಸಿದರೆ, ಝಿಂಬಾಬ್ವೆಯ ಸಿಕಂದರ್ ರಾಝ (288) ದ್ವಿತೀಯ ಸ್ಥಾನದಲ್ಲಿದ್ದಾರೆ. ಹಾಗೆಯೇ ಅಫ್ಘಾನ್ ಆಲ್ರೌಂಡರ್ ರಶೀದ್ ಖಾನ್ (254) ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ. ಇದಾಗ್ಯೂ ಟೀಮ್ ಇಂಡಿಯಾದ ಯಾವುದೇ ಆಲ್ರೌಂಡರ್ ಟಾಪ್-10 ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ.
