ಐಸಿಸಿ ರ‍್ಯಾಂಕಿಂಗ್ಸ್ ಪ್ರಕಟ: ಪಾಕ್ ಆಟಗಾರರು ನಂಬರ್ 1

|

Updated on: Nov 14, 2024 | 8:35 AM

ICC ODI Rankings: ಐಸಿಸಿ ಪ್ರಕಟಿಸಿರುವ ನೂತನ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಆರು ಆಟಗಾರರು ಕಾಣಿಸಿಕೊಂಡಿದ್ದಾರೆ. ಇಲ್ಲಿ ಮೂವರು ಬ್ಯಾಟರ್​ಗಳು ಟಾಪ್-10 ಪಟ್ಟಿಯಲ್ಲಿ ಕಾಣಿಸಿಕೊಂಡರೆ, ಮತ್ತೆ ಮೂವರು ಬೌಲರ್​ಗಳ ವಿಭಾಗದಲ್ಲಿ ಅಗ್ರ ಹತ್ತರಲ್ಲಿ ಸ್ಥಾನ ಪಡೆದಿದ್ದಾರೆ.

1 / 6
ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಒಡಿಐ ಬ್ಯಾಟರ್​ಗಳ ರ‍್ಯಾಂಕಿಂಗ್ಸ್ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ ಅಗ್ರಸ್ಥಾನ ಅಲಂಕರಿಸಿದ್ದಾರೆ. ಹಾಗೆಯೇ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮೂವರು ದಾಂಡಿಗರು ಕಾಣಿಸಿಕೊಂಡಿದ್ದಾರೆ.

2 / 6
ಇಲ್ಲಿ ಬಾಬರ್ ಆಝಂ 825 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದರೆ, ರೋಹಿತ್ ಶರ್ಮಾ 765 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಹಾಗೆಯೇ 763 ಅಂಕಗಳನ್ನು ಹೊಂದಿರುವ ಶುಭ್​ಮನ್ ಗಿಲ್ ಮೂರನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 746 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

3 / 6
ಅತ್ತ ಬೌಲಿಂಗ್ ವಿಭಾಗದಲ್ಲಿ ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಮೂವರು ಬೌಲರ್​ಗಳು ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡದ ಎಡಗೈ ವೇಗಿ ಶಾಹೀನ್ ಶಾ ಅಫ್ರಿದಿ ಅಗ್ರಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

4 / 6
696 ಅಂಕಗಳೊಂದಿಗೆ ಶಾಹೀನ್ ಶಾ ಅಫ್ರಿದಿ ಮೊದಲ ಸ್ಥಾನದಲ್ಲಿದ್ದರೆ, 687 ಪಾಯಿಂಟ್ಸ್ ಹೊಂದಿರುವ ಅಫ್ಘಾನಿಸ್ತಾನದ ರಶೀದ್ ಖಾನ್ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಸೌತ್ ಆಫ್ರಿಕಾದ ಕೇಶವ್ ಮಹಾರಾಜ್ (674) ಹಾಗೂ ಭಾರತದ ಕುಲ್ದೀಪ್ ಯಾದವ್ (665) ನಂತರದ ಸ್ಥಾನಗಳಲ್ಲಿದ್ದಾರೆ.

5 / 6
ಹಾಗೆಯೇ ಟೀಮ್ ಇಂಡಿಯಾ ವೇಗಿಗಳಾದ ಜಸ್​ಪ್ರೀತ್ ಬುಮ್ರಾ 645 ಅಂಕಗಳೊಂದಿಗೆ ಈ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿ ಕಾಣಿಸಿಕೊಂಡರೆ, ಮೊಹಮ್ಮದ್ ಸಿರಾಜ್ 643 ಅಂಕಗಳೊಂದಿಗೆ 8ನೇ ಸ್ಥಾನವನ್ನು ಅಲಂಕರಿಸಿದ್ದಾರೆ.

6 / 6
ಇನ್ನು ಏಕದಿನ ಕ್ರಿಕೆಟ್ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಅಫ್ಘಾನಿಸ್ತಾನದ ಮೊಹಮ್ಮದ್ ನಬಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಒಟ್ಟು 318 ಅಂಕಗಳೊಂದಿಗೆ ನಬಿ ಮೊದಲ ಸ್ಥಾನವನ್ನು ಅಲಂಕರಿಸಿದರೆ, ಝಿಂಬಾಬ್ವೆಯ ಸಿಕಂದರ್ ರಾಝ (288) ದ್ವಿತೀಯ ಸ್ಥಾನದಲ್ಲಿದ್ದಾರೆ. ಹಾಗೆಯೇ ಅಫ್ಘಾನ್ ಆಲ್​ರೌಂಡರ್ ರಶೀದ್ ಖಾನ್ (254) ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ. ಇದಾಗ್ಯೂ ಟೀಮ್ ಇಂಡಿಯಾದ ಯಾವುದೇ ಆಲ್​ರೌಂಡರ್ ಟಾಪ್-10 ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ.