AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC ODI Rankings: ಟಾಪ್ 10 ರಲ್ಲಿ ಭಾರತದ ನಾಲ್ವರು; ಗಿಲ್​ಗೆ ಅಗ್ರಸ್ಥಾನ, ಜಾರಿದ ಬಾಬರ್ ಆಝಂ

ICC ODI Rankings: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ನಂತರ ಬಿಡುಗಡೆಯಾದ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಗಮನಾರ್ಹ ಬದಲಾವಣೆಗಳಾಗಿವೆ. ಬಾಬರ್ ಆಝಂ ಅವರ ಕಳಪೆ ಪ್ರದರ್ಶನದಿಂದಾಗಿ ಅವರು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ರೋಹಿತ್ ಶರ್ಮಾ ಎರಡನೇ ಸ್ಥಾನಕ್ಕೆ ಏರಿದ್ದಾರೆ, ಶುಭ್ಮನ್ ಗಿಲ್ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ನಾಲ್ವರು ಆಟಗಾರರು ಟಾಪ್ 10 ರಲ್ಲಿ ಸ್ಥಾನ ಪಡೆದಿದ್ದಾರೆ.

ಪೃಥ್ವಿಶಂಕರ
|

Updated on: Aug 13, 2025 | 4:12 PM

Share
ವೆಸ್ಟ್ ಇಂಡೀಸ್ ಹಾಗೂ ಪಾಕಿಸ್ತಾನ ನಡುವಿನ ಏಕದಿನ ಸರಣಿಯ ನಂತರ ಇದೀಗ ಬಿಡುಗಡೆಯಾಗಿರುವ ಐಸಿಸಿ ನೂತನ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಇತ್ತೀಚೆಗೆ ಮುಕ್ತಾಯಗೊಂಡ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಕಿಸ್ತಾನದ ಅನುಭವಿ ಬ್ಯಾಟ್ಸ್‌ಮನ್ ಬಾಬರ್ ಆಝಂ ಅವರ ಪ್ರದರ್ಶನವು ತುಂಬಾ ಕಳಪೆಯಾಗಿತ್ತು.

1 / 7
ಆಡಿದ ಮೂರು ಪಂದ್ಯಗಳಲ್ಲಿ ಕೇವಲ 56 ರನ್‌ಗಳನ್ನು ಕಲೆಹಾಕಿದ್ದ ಬಾಬರ್ ಒಂದು ಸ್ಥಾನವನ್ನು ಕಳೆದುಕೊಂಡಿದ್ದರೆ, ಇತ್ತ ಯಾವುದೇ ಪಂದ್ಯವನ್ನಾಡದ ಕಳಪೆ ಭಾರತ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಮುಂಬಡ್ತಿ ಪಡೆದುಕೊಂಡಿದ್ದಾರೆ. ಅಂದರೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ರೋಹಿತ್ ಶರ್ಮಾ ಎರಡನೇ ಸ್ಥಾನಕ್ಕೆ ತಲುಪಿದ್ದರೆ, ಬಾಬರ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

2 / 7
ಭಾರತ ಟೆಸ್ಟ್ ತಂಡದ ನಾಯಕ ಶುಭ್​ಮನ್ ಗಿಲ್, ಏಕದಿನ ರ್ಯಾಂಕಿಂಗ್​ನಲ್ಲಿ 784 ರೇಟಿಂಗ್‌ನೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ನಾಯಕ ರೋಹಿತ್ ಶರ್ಮಾ 756 ರೇಟಿಂಗ್‌ನೊಂದಿಗೆ ಇದೀಗ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಾಸ್ತವವಾಗಿ ಚಾಂಪಿಯನ್ಸ್ ಟ್ರೋಫಿ ಬಳಿಕ ಶುಭ್​ಮನ್ ಗಿಲ್ ಆಗಲಿ ರೋಹಿತ್ ಆಗಲಿ ಯಾವುದೇ ಏಕದಿನ ಪಂದ್ಯವನ್ನಾಡಿಲ್ಲ.

3 / 7
ಆದಾಗ್ಯೂ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಶುಭ್​ಮನ್ ಗಿಲ್ 5 ಪಂದ್ಯಗಳಲ್ಲಿ 47 ರ ಸರಾಸರಿಯಲ್ಲಿ 188 ರನ್ ಗಳಿಸಿದರೆ, ರೋಹಿತ್ ಶರ್ಮಾ ಐದು ಪಂದ್ಯಗಳಲ್ಲಿ 36 ರ ಸರಾಸರಿಯಲ್ಲಿ 180 ರನ್ ಗಳಿಸಿದ್ದರು.

4 / 7
ವಾಸ್ತವವಾಗಿ ಬಾಬರ್ ಆಝಂ ಈ ಹಿಂದಿನ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿದ್ದರು, ಆದರೆ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಅವರ ಪ್ರದರ್ಶನ ತುಂಬಾ ಕಳಪೆಯಾಗಿತ್ತು. ಹೀಗಾಗಿ ಬಾಬರ್ ಅವರ ಸರಾಸರಿ ಕುಸಿದಿರುವುದು ಮಾತ್ರವಲ್ಲದೆ, ಶ್ರೇಯಾಂಕದಲ್ಲಿಯೂ ಕುಸಿದಿದ್ದಾರೆ. ಬಾಬರ್ ಅವರ ರೇಟಿಂಗ್ ಈಗ 751 ಕ್ಕೆ ಇಳಿದಿದೆ. ಬಾಬರ್ ಇದೇ ರೀತಿಯ ಪ್ರದರ್ಶನವನ್ನು ಮುಂದುವರಿಸಿದರೆ, ವಿರಾಟ್ ಕೊಹ್ಲಿ ಕೂಡ ಅವರನ್ನು ಹಿಂದಿಕ್ಕುತ್ತಾರೆ.

5 / 7
ಇದೀಗ ಶ್ರೇಯಾಂಕದಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿರುವ ಪಾಕಿಸ್ತಾನದ ಬಾಬರ್ ಆಝಂ 751 ರೇಟಿಂಗ್ ಪಾಯಿಂಟ್ಸ್ ಪಡೆದಿದ್ದರೆ, ನಾಲ್ಕನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 736 ರೇಟಿಂಗ್ ಪಾಯಿಂಟ್ಸ್ ಹೊಂದಿದ್ದಾರೆ. ಶ್ರೇಯಸ್ ಅಯ್ಯರ್ ಕೂಡ ಅಗ್ರ 10 ರಲ್ಲಿ ಸ್ಥಾನ ಪಡೆದಿದ್ದು, 704 ರೇಟಿಂಗ್‌ನೊಂದಿಗೆ ಎಂಟನೇ ಸ್ಥಾನದಲ್ಲಿದ್ದಾರೆ. ಒಟ್ಟಾರೆ ಟಾಪ್ 10 ರಲ್ಲಿ ಭಾರತದ ನಾಲ್ವರು ಬ್ಯಾಟ್ಸ್‌ಮನ್‌ಗಳು ಸ್ಥಾನ ಪಡೆದಿದ್ದಾರೆ.

6 / 7
ಉಳಿದಂತೆ ಡ್ಯಾರಿಲ್ ಮಿಚೆಲ್ ಐದನೇ ಸ್ಥಾನದಲ್ಲಿದ್ದರೆ, ಚರಿತ್ ಅಸ್ಲಂಕಾ ಆರನೇ ಸ್ಥಾನದಲ್ಲಿದ್ದಾರೆ. ಐರ್ಲೆಂಡ್‌ನ ಹ್ಯಾರಿ ಟೆಕ್ಟರ್ ಏಳನೇ ಸ್ಥಾನ, ಭಾರತದ ಶ್ರೇಯಸ್ ಅಯ್ಯರ್ ಎಂಟನೇ ಸ್ಥಾನದಲ್ಲಿದ್ದಾರೆ. ಅಫ್ಘಾನಿಸ್ತಾನದ ಇಬ್ರಾಹಿಂ ಜದ್ರಾನ್ ಒಂಬತ್ತನೇ ಸ್ಥಾನದಲ್ಲಿದ್ದರೆ, ಶ್ರೀಲಂಕಾದ ಕುಶಾಲ್ ಮೆಂಡಿಸ್ ಹತ್ತನೇ ಸ್ಥಾನದಲ್ಲಿದ್ದಾರೆ. ಅಂದರೆ, ಬಾಬರ್ ಅಜಮ್ ಮತ್ತು ರೋಹಿತ್ ಶರ್ಮಾ ಹೊರತುಪಡಿಸಿ, ಟಾಪ್ 10 ರಲ್ಲಿ ಯಾರ ಶ್ರೇಯಾಂಕದಲ್ಲೂ ಯಾವುದೇ ಬದಲಾವಣೆಯಾಗಿಲ್ಲ.

7 / 7