- TV9 Kannada Photo gallery Cricket photos ICC ODI Rankings: Gill no.1, Kohli Climbs to 2nd; Kuldeep Jumps to 5th in Bowling
ಐಸಿಸಿ ರ್‍ಯಾಂಕಿಂಗ್; ಅಗ್ರಸ್ಥಾನಕ್ಕಾಗಿ ರಾಜ- ಯುವರಾಜನ ನಡುವೆ ಪೈಪೋಟಿ
ಸೆಪ್ಟೆಂಬರ್ 30, 2026 ರಂದು ಐಸಿಸಿ ಏಕದಿನ ಶ್ರೇಯಾಂಕಗಳನ್ನು ಪ್ರಕಟಿಸಿದೆ. ಬ್ಯಾಟಿಂಗ್‌ನಲ್ಲಿ ಶುಭ್‌ಮನ್ ಗಿಲ್ ಅಗ್ರಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 2ನೇ ಸ್ಥಾನಕ್ಕೆ ಏರಿದ್ದಾರೆ. ಉತ್ತಮ ಪ್ರದರ್ಶನ ಮುಂದುವರಿಸಿದರೆ ಕೊಹ್ಲಿಗೆ ಅಗ್ರಸ್ಥಾನಕ್ಕೆ ಏರುವ ಅವಕಾಶವಿದೆ. ಬೌಲಿಂಗ್ ವಿಭಾಗದಲ್ಲಿ ಕುಲ್ದೀಪ್ ಯಾದವ್ 5ನೇ ಸ್ಥಾನಕ್ಕೆ ಜಿಗಿದಿದ್ದು, ಅಫ್ಘಾನಿಸ್ತಾನದ ರಶೀದ್ ಖಾನ್ ಅಗ್ರಸ್ಥಾನದಲ್ಲಿದ್ದಾರೆ.
Updated on:Sep 30, 2026 | 5:04 PM

ಸೆಪ್ಟೆಂಬರ್ 30, 2026 ರಂದು ಐಸಿಸಿ ಇತ್ತೀಚಿನ ಏಕದಿನ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಈ ಹಿಂದಿನಂತೆ ಟೀಂ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ಇತ್ತ ತಿರುವನಂತಪುರದಲ್ಲಿ ಬಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 88 ಎಸೆತಗಳಲ್ಲಿ 139 ರನ್ ಬಾರಿಸಿದ್ದ ವಿರಾಟ್ ಕೊಹ್ಲಿ ಒಂದು ಸ್ಥಾನ ಏರಿಕೆ ಕಂಡಿದ್ದು, ಡ್ಯಾರಿಲ್ ಮಿಚೆಲ್ ಅವರನ್ನು ಹಿಂದಿಕ್ಕಿ 2 ನೇ ಸ್ಥಾನಕ್ಕೆ ತಲುಪಿದ್ದಾರೆ(PC-PTI).

ಐಸಿಸಿ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ 796 ರೇಟಿಂಗ್ ಅಂಕಗಳನ್ನು ಹೊಂದಿದ್ದರೆ, ಶುಭ್‌ಮನ್ ಗಿಲ್ 816 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್‌ನ ಡ್ಯಾರಿಲ್ ಮಿಚೆಲ್ ಈಗ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಭಾರತದ ಅನುಭವಿ ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದಾರೆ(PC-PTI).

ಈಗ, ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಉಳಿದ ಎರಡು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಒಂದು ಶತಕ ಮತ್ತು ಅರ್ಧಶತಕ ಗಳಿಸಿದರೆ, ಮತ್ತು ಶುಭ್‌ಮನ್ ಒಂದೇ ಒಂದು ಪಂದ್ಯದಲ್ಲಿ ವಿಫಲವಾದರೆ, ವಿರಾಟ್ ತಮ್ಮ ನಂಬರ್ 1 ಸ್ಥಾನವನ್ನು ಮರಳಿ ಪಡೆಯುವ ಅವಕಾಶ ಹೊಂದಿದ್ದಾರೆ(PC-PTI).

ಉಳಿದಂತೆ ಶ್ರೀಲಂಕಾದ ನಾಯಕ ಕುಸಲ್ ಮೆಂಡಿಸ್ ಮೂರು ಸ್ಥಾನಗಳನ್ನು ಏರಿ 7 ನೇ ಸ್ಥಾನಕ್ಕೆ ತಲುಪಿದ್ದಾರೆ. ಇಂಗ್ಲೆಂಡ್‌ನ ಜೋ ರೂಟ್ ಎರಡು ಸ್ಥಾನಗಳನ್ನು ಕುಸಿದು 7 ನೇ ಸ್ಥಾನದಿಂದ 9 ನೇ ಸ್ಥಾನಕ್ಕೆ ಮತ್ತು ಐರ್ಲೆಂಡ್‌ನ ಹ್ಯಾರಿ ಟೆಕ್ಟರ್ 9 ನೇ ಸ್ಥಾನದಿಂದ 10 ನೇ ಸ್ಥಾನಕ್ಕೆ ಕುಸಿದಿದ್ದಾರೆ(PC-PTI).

ಬೌಲರ್‌ಗಳ ಶ್ರೇಯಾಂಕದ ವಿಚಾರಕ್ಕೆ ಬರುವುದಾದರೆ.. ಕುಲ್ದೀಪ್ ಯಾದವ್ ಏಕದಿನ ಬೌಲರ್‌ಗಳ ಶ್ರೇಯಾಂಕದಲ್ಲಿ ಜಿಗಿತ ಕಂಡಿದ್ದಾರೆ. ಅವರು ಈಗ 9 ರಿಂದ 5 ನೇ ಸ್ಥಾನಕ್ಕೆ ಏರಿದ್ದಾರೆ. ಅಫ್ಘಾನಿಸ್ತಾನದ ರಶೀದ್ ಖಾನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ಕೇಶವ್ ಮಹಾರಾಜ್ 6 ರಿಂದ 3 ನೇ ಸ್ಥಾನಕ್ಕೆ ಏರಿದ್ದಾರೆ(PC-PTI).

ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್‌ವುಡ್ 15 ರಿಂದ 10 ನೇ ಸ್ಥಾನಕ್ಕೆ ಐದು ಸ್ಥಾನ ಜಿಗಿದು ಟಾಪ್ 10 ರೊಳಗೆ ಪ್ರವೇಶಿಸಿದ್ದಾರೆ. ಅಫ್ಘಾನಿಸ್ತಾನದ ಅಜ್ಮತುಲ್ಲಾ ಒಮರ್‌ಜೈ ಏಕದಿನ ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದರೆ, ಭಾರತದ ಅಕ್ಷರ್ ಪಟೇಲ್ 9 ನೇ ಸ್ಥಾನದಲ್ಲಿದ್ದಾರೆ(PC-PTI).
Published On - 5:02 pm, Wed, 30 September 26

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More



