- Kannada News Photo gallery Cricket photos ICC Ranking: Joe Root Comes Back On Top Of Test Batters Rankings
ICC Ranking: ಬ್ರೂಕ್ನ ಹಿಂದಿಕ್ಕಿ ಮತ್ತೆ ಅಗ್ರಸ್ಥಾನಕ್ಕೇರಿದ ಜೋ ರೂಟ್
ICC Test Rankings: ಇಂಗ್ಲೆಂಡ್ ತಂಡದ ಯುವ ದಾಂಡಿಗ ಜೋ ರೂಟ್ ಈವರೆಗೆ ಕೇವಲ 39 ಟೆಸ್ಟ್ ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಈ ವೇಳೆ 8 ಭರ್ಜರಿ ಶತಕಗಳು ಹಾಗೂ 10 ಅರ್ಧಶತಕಗಳನ್ನು ಬಾರಿಸುವ ಮೂಲಕ ಮಿಂಚಿದ್ದಾರೆ. ಈ ಭರ್ಜರಿ ಪ್ರದರ್ಶನದೊಂದಿಗೆ ಟೆಸ್ಟ್ ಬ್ಯಾಟರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದ ಬ್ರೂಕ್, ಈ ಬಾರಿ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.
Updated on: Dec 19, 2024 | 7:17 AM

ICC Men's test Batting rankings: ಐಸಿಸಿ ಟೆಸ್ಟ್ ಬ್ಯಾಟರ್ಗಳ ನೂತನ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಇಂಗ್ಲೆಂಡ್ ಬ್ಯಾಟರ್ ಹ್ಯಾರಿ ಬ್ರೂಕ್ ಅವರನ್ನು ಹಿಂದಿಕ್ಕಿ ಜೋ ರೂಟ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಕಳೆದ ಬಾರಿ 898 ಅಂಕಗಳನ್ನು ಪಡೆದಿದ್ದ ಹ್ಯಾರಿ ಬ್ರೂಕ್ ಈ ಬಾರಿ 22 ಅಂಕಗಳನ್ನು ಕಳೆದುಕೊಂಡಿದ್ದಾರೆ. ಅತ್ತ ನ್ಯೂಝಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಜೋ ರೂಟ್ (895) ಕಳೆದ ಬಾರಿಯ ಅಂಕಗಳನ್ನು ಕಾಯ್ದುಕೊಳ್ಳುವ ಮೂಲಕ ಮೊದಲ ಸ್ಥಾನಕ್ಕೇರಿದ್ದಾರೆ.

ಇನ್ನು ಇಂಗ್ಲೆಂಡ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿ ಅಬ್ಬರಿಸಿದ್ದ ನ್ಯೂಝಿಲೆಂಡ್ನ ಕೇನ್ ವಿಲಿಯಮ್ಸನ್ 867 ಅಂಕಗಳೊಂದಿಗೆ 3ನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

4ನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದಾರೆ. ಒಟ್ಟು 811 ಅಂಕಗಳನ್ನು ಹೊಂದಿರುವ ಜೈಸ್ವಾಲ್, ಟಾಪ್-5 ನಲ್ಲಿ ಕಾಣಿಸಿಕೊಂಡ ಏಕೈಕ ಭಾರತೀಯ ಬ್ಯಾಟ್ಸ್ಮನ್ ಎಂಬುದು ವಿಶೇಷ.

ಇನ್ನು ಅಡಿಲೇಡ್ ಟೆಸ್ಟ್ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ಟ್ರಾವಿಸ್ ಹೆಡ್ ಈ ಬಾರಿ 6 ಸ್ಥಾನ ಮೇಲೇರಿದ್ದಾರೆ. ಅದರಂತೆ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ 781 ಅಂಕಗಳೊಂದಿಗೆ 5ನೇ ಸ್ಥಾನ ಅಲಂಕರಿಸಿದ್ದಾರೆ.

ಆರನೇ ಸ್ಥಾನದಲ್ಲಿ ಶ್ರೀಲಂಕಾದ ಕಮಿಂದು ಮೆಂಡಿಸ್ (759) ಇದ್ದರೆ, ಏಳನೇ ಸ್ಥಾನದಲ್ಲಿ ಸೌತ್ ಆಫ್ರಿಕಾದ ಟೆಂಬಾ ಬವುಮಾ (753) ಕಾಣಿಸಿಕೊಂಡಿದ್ದಾರೆ. ಇನ್ನು ನ್ಯೂಝಿಲೆಂಡ್ನ ಡೇರಿಲ್ ಮಿಚೆಲ್ (729) ಎಂಟನೇ ಸ್ಥಾನದಲ್ಲಿದ್ದಾರೆ.

ಒಂಬತ್ತನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕಾಣಿಸಿಕೊಂಡಿದ್ದಾರೆ. ಒಟ್ಟು 724 ಅಂಕಗಳನ್ನು ಹೊಂದಿರುವ ಪಂತ್ ಟಾಪ್-10 ನಲ್ಲಿ ಕಾಣಿಸಿಕೊಂಡ ಎರಡನೇ ಭಾರತೀಯ ಆಟಗಾರ. ಇನ್ನು ಹತ್ತನೇ ಸ್ಥಾನ ಅಲಂಕರಿಸುವಲ್ಲಿ ಪಾಕಿಸ್ತಾನದ ಸೌದ್ ಶಕೀಲ್ (724) ಯಶಸ್ವಿಯಾಗಿದ್ದಾರೆ.
