- Kannada News Photo gallery Cricket photos ICC Rankings 2023: Mohammed Siraj, Jadeja, Suryakumar In Top Spot Kannada News zp
ICC Rankings 2023: ಐಸಿಸಿ ರ್ಯಾಂಕಿಂಗ್ನಲ್ಲಿ ಟೀಮ್ ಇಂಡಿಯಾದ ಮೂವರು ನಂಬರ್ 1
ICC Rankings 2023: ಐಸಿಸಿ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನದಲ್ಲಿರುವ ಟೀಮ್ ಇಂಡಿಯಾ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...
Updated on: Jan 30, 2023 | 7:22 PM

ICC Rankings 2023: ಐಸಿಸಿ ಪ್ರಕಟಿಸಿರುವ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಪಾರುಪತ್ಯ ಮುಂದುವರೆದಿದೆ.

ವಿಶೇಷ ಮೂರು ಮಾದರಿಯ ಶ್ರೇಯಾಂಕದಲ್ಲೂ ಟೀಮ್ ಇಂಡಿಯಾದ 8 ಆಟಗಾರರು ಟಾಪ್ 10 ನಲ್ಲೂ ಕಾಣಿಸಿಕೊಂಡಿದ್ದಾರೆ. ಇವರಲ್ಲಿ ಮೂವರು ಅಗ್ರಸ್ಥಾನಿಗಳಾಗಿ ಹೊರಹೊಮ್ಮಿರುವುದೇ ವಿಶೇಷ. ಐಸಿಸಿ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನದಲ್ಲಿರುವ ಟೀಮ್ ಇಂಡಿಯಾ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ರ್ಯಾಂಕಿಂಗ್ನಲ್ಲಿ 908 ಅಂಕ ಪಡೆದು ಹೊಸ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ. ಅಂದರೆ ಸೂರ್ಯಕುಮಾರ್ ಹೊರತುಪಡಿಸಿ ಯಾವುದೇ ಬ್ಯಾಟರ್ 900 ಅಂಕಗಳನ್ನು ಗಳಿಸಿಲ್ಲ.

ರವೀಂದ್ರ ಜಡೇಜಾ: ಟೀಮ್ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ಕಳೆದ 6 ತಿಂಗಳಿಂದ ಮೈದಾನದಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಟೆಸ್ಟ್ ಆಲ್ರೌಂಡರ್ಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ 369 ಅಂಕ ಪಡೆದಿರುವ ಜಡ್ಡು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ.

ಮೊಹಮ್ಮದ್ ಸಿರಾಜ್: : ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಒಟ್ಟು 14 ವಿಕೆಟ್ ಕಬಳಿಸುವ ಮೂಲಕ ಸಿರಾಜ್ ನಂಬರ್ 1 ಬೌಲರ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಐಸಿಸಿ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6ನೇ ಬೌಲರ್ ಎನಿಸಿಕೊಂಡಿದ್ದಾರೆ.
