ICC Rankings 2023: ಐಸಿಸಿ ರ‍್ಯಾಂಕಿಂಗ್​ನಲ್ಲಿ ಟೀಮ್ ಇಂಡಿಯಾದ ಮೂವರು ನಂಬರ್ 1

| Updated By: ಝಾಹಿರ್ ಯೂಸುಫ್

Updated on: Jan 30, 2023 | 7:22 PM

ICC Rankings 2023: ಐಸಿಸಿ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನದಲ್ಲಿರುವ ಟೀಮ್ ಇಂಡಿಯಾ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 5
ICC Rankings 2023: ಐಸಿಸಿ ಪ್ರಕಟಿಸಿರುವ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಪಾರುಪತ್ಯ ಮುಂದುವರೆದಿದೆ.

2 / 5
ವಿಶೇಷ ಮೂರು ಮಾದರಿಯ ಶ್ರೇಯಾಂಕದಲ್ಲೂ ಟೀಮ್ ಇಂಡಿಯಾದ 8 ಆಟಗಾರರು ಟಾಪ್​ 10 ನಲ್ಲೂ ಕಾಣಿಸಿಕೊಂಡಿದ್ದಾರೆ. ಇವರಲ್ಲಿ ಮೂವರು ಅಗ್ರಸ್ಥಾನಿಗಳಾಗಿ ಹೊರಹೊಮ್ಮಿರುವುದೇ ವಿಶೇಷ. ಐಸಿಸಿ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನದಲ್ಲಿರುವ ಟೀಮ್ ಇಂಡಿಯಾ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

3 / 5
ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಸ್ತುತ ರ್ಯಾಂಕಿಂಗ್​ನಲ್ಲಿ 908 ಅಂಕ ಪಡೆದು ಹೊಸ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ. ಅಂದರೆ ಸೂರ್ಯಕುಮಾರ್ ಹೊರತುಪಡಿಸಿ ಯಾವುದೇ ಬ್ಯಾಟರ್ 900 ಅಂಕಗಳನ್ನು ಗಳಿಸಿಲ್ಲ.

4 / 5
ರವೀಂದ್ರ ಜಡೇಜಾ: ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ ಕಳೆದ 6 ತಿಂಗಳಿಂದ ಮೈದಾನದಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಟೆಸ್ಟ್​ ಆಲ್​ರೌಂಡರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ 369 ಅಂಕ ಪಡೆದಿರುವ ಜಡ್ಡು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಲಿದ್ದಾರೆ.

5 / 5
ಮೊಹಮ್ಮದ್ ಸಿರಾಜ್: : ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಒಟ್ಟು 14 ವಿಕೆಟ್ ಕಬಳಿಸುವ ಮೂಲಕ ಸಿರಾಜ್ ನಂಬರ್ 1 ಬೌಲರ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಐಸಿಸಿ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6ನೇ ಬೌಲರ್ ಎನಿಸಿಕೊಂಡಿದ್ದಾರೆ.