ICC Rankings: ನಂ.1 ಸ್ಥಾನದಲ್ಲಿ ಸೂರ್ಯ ಭದ್ರ; ಕಿಶನ್, ಹೂಡಾ, ಹಾರ್ದಿಕ್ಗೂ ಬಂಪರ್ ಲಾಭ..!
TV9 Web | Updated By: ಪೃಥ್ವಿಶಂಕರ
Updated on:
Jan 05, 2023 | 3:06 PM
ICC Rankings: ಪ್ರಸ್ತುತ ಲಂಕಾ ವಿರುದ್ಧ ಟಿ20 ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾ ಇಂದು ಸರಣಿಯ ಎರಡನೇ ಪಂದ್ಯಕ್ಕಾಗಿ ಕಣಕ್ಕಿಳಿಯಲಿದೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾದ 3 ಆಟಗಾರರಿಗೆ ಐಸಿಸಿ ಭರ್ಜರಿ ಗಿಫ್ಟ್ ನೀಡಿದೆ.
1 / 8
ಪ್ರಸ್ತುತ ಲಂಕಾ ವಿರುದ್ಧ ಟಿ20 ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾ ಇಂದು ಸರಣಿಯ ಎರಡನೇ ಪಂದ್ಯಕ್ಕಾಗಿ ಕಣಕ್ಕಿಳಿಯಲಿದೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾದ 3 ಆಟಗಾರರಿಗೆ ಐಸಿಸಿ ಭರ್ಜರಿ ಗಿಫ್ಟ್ ನೀಡಿದೆ. ಅದೆನೆಂದರೆ ಐಸಿಸಿ ಬಿಡುಗಡೆ ಮಾಡಿರುವ ಟಿ20 ಶ್ರೇಯಾಂಕದಲ್ಲಿ ಭಾರತ ತಂಡದ ಮೂವರು ಆಟಗಾರರ ಮುಂಬಡ್ತಿ ಪಡೆದಿದ್ದಾರೆ.
2 / 8
ಗುರುವಾರ ಬಿಡುಗಡೆ ಮಾಡಿರುವ ಐಸಿಸಿಯ ನೂತನ ಟಿ20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಇಶಾನ್ ಕಿಶನ್ 10 ಸ್ಥಾನ ಮೇಲೇರಿ 23ನೇ ಸ್ಥಾನಕ್ಕೆ ತಲುಪಿದ್ದಾರೆ.
3 / 8
ಮುಂಬೈನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ 2 ರನ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಇದರಲ್ಲಿ ಟೀಂ ಇಂಡಿಯಾ ಪರ ಅಮೋಘ ಇನ್ನಿಂಗ್ಸ್ ಆಡಿದ್ದ ಹೂಡಾ ಪಂದ್ಯದ ಆಟಗಾರನಾಗಿ ಆಯ್ಕೆಯಾಗಿದ್ದರು. ಈಗ ಐಸಿಸಿಯಿಂದ ಗಿಫ್ಟ್ ಪಡೆದಿರುವ ದೀಪಕ್ ಹೂಡಾ ಟಿ20 ಶ್ರೇಯಾಂಕದಲ್ಲಿ ಅಗ್ರ 100ರೊಳಗೆ ಸ್ಥಾನ ಪಡೆದಿದ್ದು 97ನೇ ಸ್ಥಾನಕ್ಕೆ ಎಂಟ್ರಿಕೊಟ್ಟಿದ್ದಾರೆ.
4 / 8
ಇವರಿಬ್ಬರ ಹೊರತಾಗಿ ಸೂರ್ಯಕುಮಾರ್ ಯಾದವ್ ಮೊದಲ ಟಿ20 ಪಂದ್ಯದಲ್ಲಿ ವಿಫಲರಾಗಿಯೂ ಸಹ ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
5 / 8
ಬೌಲಿಂಗ್ ವಿಭಾಗದಲ್ಲಿ ಶ್ರೀಲಂಕಾ ವಿರುದ್ಧದ ಮೊದಲ ಟಿ20ಯಲ್ಲಿ 13 ಡಾಟ್ ಬಾಲ್ಗಳನ್ನು ಎಸೆದಿದ್ದ ಹಾರ್ದಿಕ್ ಪಾಂಡ್ಯ ಅವರ ರ‍್ಯಾಂಕಿಂಗ್ 9 ಸ್ಥಾನ ಸುಧಾರಿಸಿದ್ದು, ಇದೀಗ ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ 76ನೇ ಸ್ಥಾನಕ್ಕೆ ತಲುಪಿದ್ದಾರೆ.
6 / 8
ಇನ್ನುಳಿದಂತೆ ಶ್ರೀಲಂಕಾದ ವನಿಂದು ಹಸರಂಗ ಭಾರತ ವಿರುದ್ಧದ ಮೊದಲ ಟಿ20ಯಲ್ಲಿ ಒಂದು ವಿಕೆಟ್ ಪಡೆಯುವ ಮೂಲಕ ಅಗ್ರ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಹಾಗೆಯೇ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿಯೂ 5 ನೇ ಸ್ಥಾನಕ್ಕೆ ಏರಿದ್ದಾರೆ.
7 / 8
ಇನ್ನು ಬ್ಯಾಟ್ಸ್‌ಮನ್‌ಗಳ ಟೆಸ್ಟ್ ಶ್ರೇಯಾಂಕದಲ್ಲಿ ಮಾರ್ನಸ್ ಲ್ಯಾಬುಸ್ಚಾಗ್ನೆ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.
8 / 8
ಹಾಗೆಯೇ ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಮತ್ತು ಇಂಗ್ಲೆಂಡ್‌ನ ಜೇಮ್ಸ್ ಆಂಡರ್ಸನ್ ಅಗ್ರ ಎರಡು ಸ್ಥಾನದಲ್ಲಿ ಮುಂದುವರಿದಿದ್ದಾರೆ.
Published On - 3:02 pm, Thu, 5 January 23