ICC Rankings: ನಂ.1 ಸ್ಥಾನಕ್ಕೇರುವ ಸನಿಹದಲ್ಲಿ ಹಾರ್ದಿಕ್; ರ್ಯಾಂಕಿಂಗ್ನಲ್ಲಿ ಭಾರತೀಯರದ್ದೇ ಪಾರುಪತ್ಯ
ICC Rankings: ಐಸಿಸಿ ನೂತನ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇತ್ತೀಚಿನ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ ಆಟಗಾರರು ಬಂಪರ್ ಲಾಭ ಗಳಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಹಾರ್ದಿಕ್ ಪಾಂಡ್ಯ ಆಲ್‌ರೌಂಡರ್‌ಗಳ ಶ್ರೇಯಾಂಕ ಪಟ್ಟಿಯಲ್ಲಿ ಭರ್ಜರಿ ಏರಿಕೆ ಕಂಡಿದ್ದಾರೆ.
1 / 6
ಐಸಿಸಿ ನೂತನ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇತ್ತೀಚಿನ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ ಆಟಗಾರರು ಬಂಪರ್ ಲಾಭ ಗಳಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಹಾರ್ದಿಕ್ ಪಾಂಡ್ಯ ಆಲ್‌ರೌಂಡರ್‌ಗಳ ಶ್ರೇಯಾಂಕ ಪಟ್ಟಿಯಲ್ಲಿ ಭರ್ಜರಿ ಏರಿಕೆ ಕಂಡಿದ್ದಾರೆ.
2 / 6
ಬಾಂ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 39 ರನ್ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದ ಹಾರ್ದಿಕ್ ಬೌಲಿಂಗ್ನಲ್ಲೂ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ತಮ್ಮ ಆಟದ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟಿದ್ದ ಪಾಂಡ್ಯ, ಇದೀಗ ಟಿ20 ಆಲ್‌ರೌಂಡರ್‌ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಬರೋಬ್ಬರಿ 4 ಸ್ಥಾನ ಮೇಲೇರಿದ್ದು, 3ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
3 / 6
ಬಾಂಗ್ಲಾದೇಶ ವಿರುದ್ಧ ಉಳಿದಿರುವ ಇನ್ನೇರಡು ಪಂದ್ಯಗಳಲ್ಲಿ ಹಾರ್ದಿಕ್ ತಮ್ಮ ಇದೇ ಆಟವನ್ನು ಮುಂದುವರೆಸಿದರೆ ನಂಬರ್ 1ಸ್ಥಾನಕ್ಕೇರುವ ಅವಕಾಶ ಹೊಂದಿದ್ದಾರೆ. ಹಾರ್ದಿಕ್ ಇದೀಗ 216 ರೇಟಿಂಗ್ ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್‌ನ ಲಿಯಾಮ್ ಲಿವಿಂಗ್‌ಸ್ಟನ್ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇವರಲ್ಲದೇ ನೇಪಾಳದ ದೀಪೇಂದ್ರ ಸಿಂಗ್ ಐರಿ ಎರಡನೇ ಸ್ಥಾನದಲ್ಲಿದ್ದಾರೆ.
4 / 6
ಇದಲ್ಲದೆ ಬಾಂಗ್ಲಾದೇಶದ ವಿರುದ್ಧ ಆಡಿದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ರವೀಂದ್ರ ಜಡೇಜಾ ಅದ್ಭುತ ಪ್ರದರ್ಶನ ನೀಡಿದ್ದರು.ಅದರ ಲಾಭ ಪಡೆದಿರುವ ಜಡೇಜಾ ಟೆಸ್ಟ್ ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದಾರೆ. 468 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಜಡೇಜಾ ಮೊದಲ ಸ್ಥಾನದಲ್ಲಿದ್ದರೆ, 358 ರೇಟಿಂಗ್ ಅಂಕ ಹೊಂದಿರುವ ಆರ್ ಅಶ್ವಿನ್ ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.
5 / 6
ಹಾಗೆಯೇ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ಭರ್ಜರಿ ಲಾಭ ಪಡೆದಿದ್ದು ಪ್ರಸ್ತುತ, ಬುಮ್ರಾ 870 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
6 / 6
ಇವರೊಂದಿಗೆ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಯಶಸ್ವಿ ಜೈಸ್ವಾಲ್, ಐಸಿಸಿ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ 2 ಸ್ಥಾನಗಳನ್ನು ಮೇಲೇರಿದ್ದಾರೆ. ಪ್ರಸ್ತುತ, ಜೈಸ್ವಾಲ್ 792 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.