Updated on: Mar 22, 2023 | 6:33 PM
ಐಸಿಸಿ ನೂತನ ಏಕದಿನ ಬೌಲರ್ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್ವುಡ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇತ್ತ ಕಳೆದ ಒಂದು ತಿಂಗಳಿಂದ ನಂಬರ್ 1 ಸ್ಥಾನ ಕಾಯ್ದುಕೊಂಡಿದ್ದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 2 ಸ್ಥಾನ ಕುಸಿತ ಕಂಡಿದ್ದಾರೆ.
ಜನವರಿ 25 ರಂದು ಐಸಿಸಿ ಪ್ರಕಟಿಸಿದ್ದ ಏಕದಿನ ಬೌಲರ್ ರ್ಯಾಂಕಿಂಗ್ನಲ್ಲಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಪಡೆದಿದ್ದರು. ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಸಿರಾಜ್ 5 ಪಂದ್ಯಗಳಿಂದ ಒಟ್ಟು 14 ವಿಕೆಟ್ ಕಬಳಿಸಿದ್ದರು.
ಆದರೆ ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಸಿರಾಜ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಆಸೀಸ್ ವಿರುದ್ಧದ ಮೂರು ಏಕದಿನ ಪಂದ್ಯಗಳಿಂದ ಟೀಮ್ ಇಂಡಿಯಾ ವೇಗಿ ಪಡೆದಿದ್ದು ಕೇವಲ 5 ವಿಕೆಟ್ಗಳು ಮಾತ್ರ. ಪರಿಣಾಮ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ 2 ಸ್ಥಾನಗಳ ಕುಸಿತ ಕಂಡಿದ್ದಾರೆ. ಅದರಂತೆ ಪ್ರಸ್ತುತ ಏಕದಿನ ಬೌಲರ್ಗಳ ಶ್ರೇಯಾಂಕ ಪಟ್ಟಿಯಲ್ಲಿ ಟಾಪ್-10 ಸ್ಥಾನ ಅಲಂಕರಿಸಿರುವ ಬೌಲರ್ಗಳ ಪಟ್ಟಿ ಈ ಕೆಳಗಿನಂತಿದೆ.
2- ಜೋಶ್ ಹ್ಯಾಝಲ್ವುಡ್ (ಆಸ್ಟ್ರೇಲಿಯಾ): ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಹ್ಯಾಝಲ್ವುಡ್ ಈ ಬಾರಿ ಒಟ್ಟು 678 ರೇಟಿಂಗ್ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.
3- ಟ್ರೆಂಟ್ ಬೌಲ್ಟ್ (ನ್ಯೂಝಿಲೆಂಡ್): ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದು, ಒಟ್ಟು 677 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
3- ಮೊಹಮ್ಮದ್ ಸಿರಾಜ್ (ಭಾರತ)- 702 ಅಂಕಗಳು
6- ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ): ಕಳೆದ ಬಾರಿ 3ನೇ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಈ ಬಾರಿ 652 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದ್ದಾರೆ.
5- ರಶೀದ್ ಖಾನ್ (ಅಫ್ಘಾನಿಸ್ತಾನ್): ಅಫ್ಘಾನಿಸ್ತಾನದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ 655 ಅಂಕಗಳೊಂದಿಗೆ 5ನೇ ಸ್ಥಾನ ಅಲಂಕರಿಸಿದ್ದಾರೆ.
6- ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ್)- 648 ಅಂಕಗಳು
10- ಶಾಹೀನ್ ಅಫ್ರಿದಿ (ಪಾಕಿಸ್ತಾನ್): ಪಾಕ್ ತಂಡದ ಎಡಗೈ ವೇಗಿ ಶಾಹೀನ್ ಅಫ್ರಿದಿ ಒಟ್ಟು 632 ಅಂಕಗಳೊಂದಿಗೆ ಟಾಪ್-10 ನಲ್ಲಿ ಕೊನೆಯ ಸ್ಥಾನ ಅಲಂಕರಿಸಿದ್ದಾರೆ.
4- ಮುಜೀಬ್ ಉರ್ ರೆಹಮಾನ್ (ಅಫ್ಘಾನಿಸ್ತಾನ್): ಅಫ್ಘಾನ್ ಸ್ಪಿನ್ನರ್ ಮುಜೀಬ್ ಒಟ್ಟು 657 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
8- ಆ್ಯಡಂ ಝಂಪಾ (ಆಸ್ಟ್ರೇಲಿಯಾ): ಸ್ಪಿನ್ನರ್ ಆ್ಯಡಂ ಝಂಪಾ ಒಟ್ಟು 642 ಅಂಕಗಳೊಂದಿಗೆ ಈ ಬಾರಿ 8ನೇ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.
10- ಮೊಹಮ್ಮದ್ ನಬಿ (ಅಫ್ಘಾನಿಸ್ತಾನ್)- 631 ಅಂಕಗಳು