- Kannada News Photo gallery Cricket photos ICC Rankings Ravindra Jadeja lost 1 spot in latest ICC test bowling rankings
ICC Rankings: ಮೊದಲೆರಡು ಸ್ಥಾನಗಳಲ್ಲಿ ಬುಮ್ರಾ, ಅಶ್ವಿನ್; ಜಾರಿದ ಜಡೇಜಾ..!
ICC Rankings: ಐಸಿಸಿ ಇಂದು ಬಿಡುಗಡೆ ಮಾಡಿರುವ ಟೆಸ್ಟ್ ಬೌಲರ್ಗಳ ಶ್ರೇಯಾಂಕದಲ್ಲಿ ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ 1 ಸ್ಥಾನ ಕುಸಿತಕಂಡಿದ್ದಾರೆ. ಕಳೆದ ರ್ಯಾಂಕಿಂಗ್ನಲ್ಲಿ 6ನೇ ಸ್ಥಾನದಲ್ಲಿದ್ದ ಜಡೇಜಾ, ಇದೀಗ 7ನೇ ಸ್ಥಾನಕ್ಕೆ ಜಾರಿದ್ದಾರೆ.
Updated on:Mar 06, 2024 | 3:58 PM

ಐಸಿಸಿ ಇಂದು ಬಿಡುಗಡೆ ಮಾಡಿರುವ ಟೆಸ್ಟ್ ಬೌಲರ್ಗಳ ಶ್ರೇಯಾಂಕದಲ್ಲಿ ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ 1 ಸ್ಥಾನ ಕುಸಿತಕಂಡಿದ್ದಾರೆ. ಕಳೆದ ರ್ಯಾಂಕಿಂಗ್ನಲ್ಲಿ 6ನೇ ಸ್ಥಾನದಲ್ಲಿದ್ದ ಜಡೇಜಾ, ಇದೀಗ 7ನೇ ಸ್ಥಾನಕ್ಕೆ ಜಾರಿದ್ದಾರೆ.

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 4 ವಿಕೆಟ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 1 ವಿಕೆಟ್ ಕಬಳಿಸಿದ್ದ ರವೀಂದ್ರ ಜಡೇಜಾ ಚೆಂಡಿನೊಂದಿಗೆ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಅದಾಗ್ಯೂ ಜಡೇಜಾ ಇದೀಗ ಒಂದು ಸ್ಥಾನ ಕುಸಿದು ಏಳನೇ ಸ್ಥಾನಕ್ಕೆ ತಲುಪಿದ್ದಾರೆ.

ಇನ್ನು ನಾವು ಟೆಸ್ಟ್ ಬೌಲಿಂಗ್ ಶ್ರೇಯಾಂಕದ ಬಗ್ಗೆ ಮಾತನಾಡುವುದಾದರೆ, ಮೊದಲೆರಡು ಸ್ಥಾನಗಳಲ್ಲಿ ಟೀಂ ಇಂಡಿಯಾ ವೇಗಿಗಳ ಪಾರುಪತ್ಯ ಮೆರೆದಿದ್ದಾರೆ. ಅದರಲ್ಲಿ 867 ರೇಟಿಂಗ್ ಪಾಯಿಂಟ್ ಹೊಂದಿರುವ ಜಸ್ಪ್ರೀತ್ ಬುಮ್ರಾ ಮೊದಲ ಸ್ಥಾನದಲ್ಲಿದ್ದಾರೆ.

ಹಾಗೆಯೇ ಎರಡನೇ ಸ್ಥಾನದಲ್ಲಿರುವ ಸ್ಪಿನ್ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ 846 ರೇಟಿಂಗ್ ಪಾಯಿಂಟ್ ಪಡೆದುಕೊಂಡಿದ್ದಾರೆ.

ಇದರ ನಂತರ, ಕಗಿಸೊ ರಬಾಡ ಮೂರನೇ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ ವಿರುದ್ಧದ ವೆಲ್ಲಿಂಗ್ಟನ್ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹ್ಯಾಜಲ್ವುಡ್ ಈಗ ನಾಲ್ಕನೇ ಸ್ಥಾನಕ್ಕೆ ಬಂದಿದ್ದಾರೆ.

ಈ ಹಿಂದೆ ನಾಲ್ಕನೇ ಸ್ಥಾನದಲ್ಲಿದ್ದ ಕಾಂಗರೂ ಟೆಸ್ಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಇದೀಗ 811 ರೇಟಿಂಗ್ ಅಂಕಗಳೊಂದಿಗೆ ಐದನೇ ಸ್ಥಾನಕ್ಕೆ ತಲುಪಿದ್ದಾರೆ. ಇವರಲ್ಲದೇ ನಾಥನ್ ಲಿಯಾನ್ ಕೂಡ 2 ಸ್ಥಾನ ಜಿಗಿದು 797 ರೇಟಿಂಗ್ ಅಂಕಗಳೊಂದಿಗೆ ಆರನೇ ಸ್ಥಾನ ಗಳಿಸಿದ್ದಾರೆ.

ಇಂಗ್ಲೆಂಡ್ ತಂಡದ ಲೆಜೆಂಡರಿ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಐಸಿಸಿ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಒಂದು ಸ್ಥಾನ ಜಿಗಿದು, 742 ರೇಟಿಂಗ್ ಪಾಯಿಂಟ್‌ಗಳೊಂದಿಗೆ 9 ನೇ ಸ್ಥಾನಕ್ಕೆ ತಲುಪಿದ್ದಾರೆ.

ಭಾರತದ ಬೌಲರ್ಗಳ ಕುರಿತು ಮಾತನಾಡುವುದಾದರೆ ಮೊಹಮ್ಮದ್ ಸಿರಾಜ್ ಒಂದು ಸ್ಥಾನ ಕಳೆದುಕೊಂಡು, ಇದೀಗ 608 ರೇಟಿಂಗ್ ಪಾಯಿಂಟ್‌ಗಳೊಂದಿಗೆ 20 ನೇ ಸ್ಥಾನಕ್ಕೆ ತಲುಪಿದ್ದಾರೆ. ಮತ್ತೊಬ್ಬ ವೇಗಿ ಮೊಹಮ್ಮದ್ ಶಮಿ 604 ರೇಟಿಂಗ್ ಪಾಯಿಂಟ್‌ಗಳೊಂದಿಗೆ 22 ನೇ ಸ್ಥಾನದಲ್ಲಿದ್ದಾರೆ.
Published On - 3:58 pm, Wed, 6 March 24




