- TV9 Kannada Kannada News Photos Cricket Photos ICC Rankings: Rohit Sharma Overtakes Shubman Gill in ODI
ICC Rankings: ಐಸಿಸಿ ರ‍್ಯಾಕಿಂಗ್ ಪ್ರಕಟ: ಟಾಪ್-10 ನಲ್ಲಿ 6 ಭಾರತೀಯರು
ICC Rankings: ಐಸಿಸಿ ಏಕದಿನ ಬ್ಯಾಟರ್ಗಳ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ ಟಿ20 ಬ್ಯಾಟರ್ಗಳ ರ್ಯಾಕಿಂಗ್ನಲ್ಲಿ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಮೊದಲ ಸ್ಥಾನ ಅಲಂಕರಿಸಿದ್ದಾರೆ. ಇನ್ನು ದ್ವಿತೀಯ ಸ್ಥಾನದಲ್ಲಿ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ.
Updated on: Aug 15, 2024 | 10:03 AM

ಐಸಿಸಿ ಏಕದಿನ ಮತ್ತು ಟಿ20 ಬ್ಯಾಟರ್ಗಳ ನೂತನ ರ‍್ಯಾಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿಯ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ 6 ಬ್ಯಾಟರ್ಗಳು ಸ್ಥಾನ ಪಡೆದಿರುವುದು ವಿಶೇಷ. ಅಂದರೆ ಏಕದಿನ ಬ್ಯಾಟರ್ಗಳ ಪಟ್ಟಿಯಲ್ಲಿ ಮೂವರು ಭಾರತೀಯರು ಸ್ಥಾನ ಪಡೆದರೆ, ಟಿ20 ಬ್ಯಾಟ್ಸ್ಮನ್ಗಳ ಅಗ್ರ ಹತ್ತರ ಪಟ್ಟಿಯಲ್ಲಿ ಮೂವರು ಕಾಣಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಜೀವಮಾನದ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಅಂದರೆ ಇದೇ ಮೊದಲ ಬಾರಿಗೆ ಏಕದಿನ ಬ್ಯಾಟರ್ಗಳ ಪಟ್ಟಿಯಲ್ಲಿ ಹಿಟ್ಮ್ಯಾನ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಇನ್ನು ಟಿ20 ರ್ಯಾಕಿಂಗ್ನಲ್ಲಿ ಸೂರ್ಯಕುಮಾರ್ ಯಾದವ್ 2ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಐಸಿಸಿ ಪ್ರಕಟಿಸಿರುವ ಟಾಪ್-10 ಬ್ಯಾಟರ್ಗಳ ಪಟ್ಟಿಯಲ್ಲಿರುವ ಭಾರತೀಯರು....

2- ರೋಹಿತ್ ಶರ್ಮಾ (ಏಕದಿನ): ಏಕದಿನ ಕ್ರಿಕೆಟ್ನ ಬ್ಯಾಟರ್ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಒಟ್ಟು 765 ರೇಟಿಂಗ್ ಪಡೆಯುವ ಮೂಲಕ ಹಿಟ್ಮ್ಯಾನ್ ಶ್ರೇಷ್ಠ ಸಾಧನೆ ಮಾಡಿದ್ದಾರೆ.

3- ಶುಭ್ಮನ್ ಗಿಲ್ (ಏಕದಿನ): ಭಾರತ ತಂಡದ ಉಪನಾಯಕ ಶುಭ್ಮನ್ ಗಿಲ್ ಏಕದಿನ ಬ್ಯಾಟರ್ಗಳ ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಒಟ್ಟು 763 ರೇಟಿಂಗ್ ಹೊಂದಿರುವ ಗಿಲ್ ದ್ವಿತೀಯ ಸ್ಥಾನದಲ್ಲಿರುವ ರೋಹಿತ್ ಶರ್ಮಾಗಿಂತ 2 ಅಂಕಗಳಿಂದ ಹಿಂದಿದ್ದಾರೆ.

4- ವಿರಾಟ್ ಕೊಹ್ಲಿ (ಏಕದಿನ): ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಈ ಬಾರಿಯ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟು 746 ರೇಟಿಂಗ್ ಹೊಂದಿರುವ ಕಿಂಗ್ ಕೊಹ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

2- ಸೂರ್ಯಕುಮಾರ್ ಯಾದವ್ (ಟಿ20): ಟೀಮ್ ಇಂಡಿಯಾ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಟಿ20 ಬ್ಯಾಟರ್ಗಳ ರ್ಯಾಕಿಂಗ್ನಲ್ಲಿ ದ್ವಿತೀಯ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಒಟ್ಟು 805 ರೇಟಿಂಗ್ನೊಂದಿಗೆ ಸೂರ್ಯ 2ನೇ ಸ್ಥಾನದಲ್ಲಿದ್ದಾರೆ.

4- ಯಶಸ್ವಿ ಜೈಸ್ವಾಲ್ (ಟಿ20): ಭಾರತ ತಂಡದ ಎಡಗೈ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಟಿ20 ಬ್ಯಾಟರ್ಗಳ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ್ದಾರೆ. ಒಟ್ಟು 757 ರೇಟಿಂಗ್ ಹೊಂದಿರುವ ಜೈಸ್ವಾಲ್ ಮುಂಬರುವ ಸರಣಿಗಳ ಮೂಲಕ ಶ್ರೇಯಾಂಕ ಪಟ್ಟಿಯಲ್ಲಿ ಮೇಲೇರುವ ವಿಶ್ವಾಸದಲ್ಲಿದ್ದಾರೆ.

8- ರುತುರಾಜ್ ಗಾಯಕ್ವಾಡ್ (ಟಿ20): ಟೀಮ್ ಇಂಡಿಯಾದ ಯುವ ಬ್ಯಾಟ್ಸ್ಮನ್ ರುತುರಾಜ್ ಗಾಯಕ್ವಾಡ್ ಟಿ20 ಶ್ರೇಯಾಂಕ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಲಂಕಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗದೇ ಇದ್ದರೂ ಐಸಿಸಿ ಶ್ರೇಯಾಂಕದಲ್ಲಿ 664 ರೇಟಿಂಗ್ ಪಡೆಯುವಲ್ಲಿ ರುತುರಾಜ್ ಯಶಸ್ವಿಯಾಗಿದ್ದಾರೆ.

6- ರೋಹಿತ್ ಶರ್ಮಾ (ಟೆಸ್ಟ್): ಐಸಿಸಿ ಟೆಸ್ಟ್ ಬ್ಯಾಟರ್ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 6ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಈ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ 8ನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 10ನೇ ಸ್ಥಾನವನ್ನು ಅಲಂಕರಿಸಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



