AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ; ಮೂರು ಮಾದರಿಯಲ್ಲೂ ಭಾರತವೇ ನಂ.1..!

ICC Rankings: ಟೀಂ ಇಂಡಿಯಾ ಈ ಹಿಂದೆ ಏಕದಿನ ಮತ್ತು ಟಿ20 ಮಾದರಿಯಲ್ಲಿ ನಂ. 1 ಆಗಿತ್ತು. ಈಗ ರೋಹಿತ್ ಬಳಗ ಟೆಸ್ಟ್‌ನಲ್ಲೂ ನಂ. 1 ಆಗಿದೆ. ಅಂದರೆ ಈಗ ಟೀಂ ಇಂಡಿಯಾ ಎಲ್ಲಾ ಮೂರು ಸ್ವರೂಪಗಳಲ್ಲಿ ನಂಬರ್ 1 ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

TV9 Web
| Edited By: |

Updated on:Feb 15, 2023 | 2:27 PM

Share
ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಹೀನಾಯವಾಗಿ ಸೋಲಿಸಿದ ಟೀಂ ಇಂಡಿಯಾ ಐಸಿಸಿ ಟೆಸ್ಟ್ ರ್ಯಾಂಕಿಂಗ್​ನಲ್ಲಿ ದೊಡ್ಡ ಮೈಲಿಗಲ್ಲು ಸಾಧಿಸಿದೆ. ಮೊದಲ ಟೆಸ್ಟ್‌ನಲ್ಲಿ ಭರ್ಜರಿ ಜಯ ಸಾಧಿಸಿದ ಭಾರತ ಕ್ರಿಕೆಟ್ ತಂಡ ಇದೀಗ ವಿಶ್ವದ ನಂಬರ್ 1 ಟೆಸ್ಟ್ ತಂಡ ಎನಿಸಿಕೊಂಡಿದೆ.

1 / 6
ಟೀಂ ಇಂಡಿಯಾ ಈ ಹಿಂದೆ ಏಕದಿನ ಮತ್ತು ಟಿ20 ಮಾದರಿಯಲ್ಲಿ ನಂ. 1 ಆಗಿತ್ತು. ಈಗ ರೋಹಿತ್ ಬಳಗ ಟೆಸ್ಟ್‌ನಲ್ಲೂ ನಂ. 1 ಆಗಿದೆ. ಅಂದರೆ ಈಗ ಟೀಂ ಇಂಡಿಯಾ ಎಲ್ಲಾ ಮೂರು ಸ್ವರೂಪಗಳಲ್ಲಿ ನಂಬರ್ 1 ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

2 / 6
ಇತ್ತೀಚಿಗೆ ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್ ಶ್ರೇಯಾಂಕದ ಪ್ರಕಾರ, ಭಾರತ 115 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಂಬರ್ 1 ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ತಂಡ 111 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದೆ. ಇಂಗ್ಲೆಂಡ್ ತಂಡ ಮೂರನೇ ಸ್ಥಾನದಲ್ಲಿದೆ.

3 / 6
ಐಸಿಸಿ ರ್ಯಾಂಕಿಂಗ್ ಪ್ರಿಡಿಕ್ಟರ್ ಪ್ರಕಾರ, ಭಾರತವು ದೀರ್ಘಕಾಲದವರೆಗೆ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನದಲ್ಲಿ ಉಳಿಯಲು ತನ್ನ ಗೆಲುವಿನ ಸರಣಿಯನ್ನು ಮುಂದುವರಿಸಬೇಕಾಗಿದೆ. ಭಾರತ ಈ ಟೆಸ್ಟ್ ಸರಣಿಯನ್ನು 4-0 ಅಂತರದಿಂದ ಗೆದ್ದರೆ, ಅದು ನಂಬರ್ 1 ಸ್ಥಾನದಲ್ಲಿ ಉಳಿಯುತ್ತದೆ. ಹಾಗೆಯೇ ಆಸ್ಟ್ರೇಲಿಯಾ ಮೂರನೇ ಸ್ಥಾನಕ್ಕೆ ಕುಸಿಯಲಿದೆ.

4 / 6
ಅದೇ ಸಮಯದಲ್ಲಿ ಆಸ್ಟ್ರೇಲಿಯ ಮತ್ತೆ ನಂಬರ್ 1 ಸ್ಥಾನಕ್ಕೆ ಬರಲು ಸರಣಿ ಗೆಲ್ಲಲೇಬೇಕು. ಈ ಸರಣಿಯಲ್ಲಿ ಆಸ್ಟ್ರೇಲಿಯ 2-1 ಅಂತರದಲ್ಲಿ ಗೆದ್ದರೆ ಮತ್ತೊಮ್ಮೆ ಟೆಸ್ಟ್ ತಂಡವಾಗಿ ನಂ.1 ಸ್ಥಾನಕ್ಕೇರಲಿದೆ. ಮತ್ತೊಂದೆಡೆ, ಈ ಸರಣಿ ಡ್ರಾಗೊಂಡರೆ, ಭಾರತ ಇನ್ನೂ ನಂಬರ್ 1 ಸ್ಥಾನವನ್ನು ಉಳಿಸಿಕೊಳ್ಳಲಿದೆ.

5 / 6
ಇನ್ನು ಏಕದಿನ ಮಾದರಿಯಲ್ಲಿ 114 ರೇಟಿಂಗ್ ಹೊಂದಿರುವ ಟೀಂ ಇಂಡಿಯಾ 3572 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಟಿ20 ರ್ಯಾಂಕಿಂಗ್​ನಲ್ಲೂ 267 ರೇಟಿಂಗ್ ಹೊಂದಿರುವ ರೋಹಿತ್ ಪಡೆ 18,445 ಅಂಕಗಳೊಂದಿಗೆ ನಂ.1 ಪಟ್ಟವನ್ನು ಅಲಂಕರಿಸಿದೆ.

6 / 6

Published On - 2:14 pm, Wed, 15 February 23

TV9 Web
TV9 Web

TV9 Kannada

Read More
Follow Us
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!

ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್

ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ

ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ

ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್

ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್

‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ

ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್

ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು

ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ