ICC T20 Rankings: ಹ್ಯಾಟ್ರಿಕ್ ಸೊನ್ನೆಯ ನಡುವೆಯೂ ಅಭಿಷೇಕ್ ಅಗ್ರಸ್ಥಾನಕ್ಕಿಲ್ಲ ಭಂಗ

Updated on: Feb 25, 2026 | 5:26 PM

ICC T20 Rankings Update: ICC Rankings: ಟಿ20 ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನ ನೀಡಿದರೂ ಟೀಂ ಇಂಡಿಯಾದ ಅಭಿಷೇಕ್ ಶರ್ಮಾ ಐಸಿಸಿ ಟಿ20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಫಿಲ್ ಸಾಲ್ಟ್ ಅಂತರದಿಂದಾಗಿ ಅವರ ಸ್ಥಾನಕ್ಕೆ ತೊಂದರೆಯಾಗಿಲ್ಲ. ಸ್ಫೋಟಕ ಬ್ಯಾಟಿಂಗ್‌ನಿಂದ ಇಶಾನ್ ಕಿಶನ್ ಐದನೇ ಸ್ಥಾನಕ್ಕೇರಿದರೆ, ಜಸ್ಪ್ರೀತ್ ಬುಮ್ರಾ ಬೌಲಿಂಗ್‌ನಲ್ಲಿ ಎಂಟನೇ ಸ್ಥಾನ ತಲುಪಿದ್ದಾರೆ. ಇತ್ತೀಚಿನ ಶ್ರೇಯಾಂಕಗಳು ಹಲವು ಭಾರತೀಯ ಆಟಗಾರರ ಸ್ಥಾನಪಲ್ಲಟವನ್ನು ತೋರಿಸಿವೆ.

1 / 7
ಟೀಂ ಇಂಡಿಯಾದ ಸ್ಟಾರ್ ಓಪನರ್ ಅಭಿಷೇಕ್ ಶರ್ಮಾಗೆ 2026 ರ ಟಿ20 ವಿಶ್ವಕಪ್ ದುಃಸ್ವಪ್ನಕ್ಕಿಂತ ಕಡಿಮೆ ಇಲ್ಲ. ಏಕೆಂದರೆ ಆಡಿರುವ 4 ಪಂದ್ಯಗಳಲ್ಲಿ ಅಭಿಷೇಕ್ ಖಾತೆ ತೆರೆದಿರುವುದು ಏಕೈಕ ಪಂದ್ಯದಲ್ಲಿ ಮಾತ್ರ. ಅಂದರೆ ಉಳಿದಿರುವ ಮೂರು ಪಂದ್ಯಗಳಲ್ಲಿ ಅಭಿಷೇಕ್ ಸೊನ್ನೆ ಸುತ್ತಿದ್ದಾರೆ. ಆದಾಗ್ಯೂ ಐಸಿಸಿ ಟಿ20 ಬ್ಯಾಟ್ಸ್‌ಮನ್​ಗಳ ರ್ಯಾಂಕಿಂಗ್​ನಲ್ಲಿ ಅಭಿಷೇಕ್ ಸ್ಥಾನಕ್ಕೆ ಯಾವುದೇ ಕುತ್ತು ಬಂದಿಲ್ಲ.

ಟೀಂ ಇಂಡಿಯಾದ ಸ್ಟಾರ್ ಓಪನರ್ ಅಭಿಷೇಕ್ ಶರ್ಮಾಗೆ 2026 ರ ಟಿ20 ವಿಶ್ವಕಪ್ ದುಃಸ್ವಪ್ನಕ್ಕಿಂತ ಕಡಿಮೆ ಇಲ್ಲ. ಏಕೆಂದರೆ ಆಡಿರುವ 4 ಪಂದ್ಯಗಳಲ್ಲಿ ಅಭಿಷೇಕ್ ಖಾತೆ ತೆರೆದಿರುವುದು ಏಕೈಕ ಪಂದ್ಯದಲ್ಲಿ ಮಾತ್ರ. ಅಂದರೆ ಉಳಿದಿರುವ ಮೂರು ಪಂದ್ಯಗಳಲ್ಲಿ ಅಭಿಷೇಕ್ ಸೊನ್ನೆ ಸುತ್ತಿದ್ದಾರೆ. ಆದಾಗ್ಯೂ ಐಸಿಸಿ ಟಿ20 ಬ್ಯಾಟ್ಸ್‌ಮನ್​ಗಳ ರ್ಯಾಂಕಿಂಗ್​ನಲ್ಲಿ ಅಭಿಷೇಕ್ ಸ್ಥಾನಕ್ಕೆ ಯಾವುದೇ ಕುತ್ತು ಬಂದಿಲ್ಲ.

2 / 7

ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭರ್ಜರಿ ಫಾರ್ಮ್​ನಲ್ಲಿದ್ದ ಅಭಿಷೇಕ್ ಐಸಿಸಿ ಟಿ20 ಬ್ಯಾಟ್ಸ್‌ಮನ್​ಗಳ ರ್ಯಾಂಕಿಂಗ್​ನಲ್ಲಿ ಅಗ್ರಸ್ಥಾನದಲ್ಲಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನದ ಹೊರತಾಗಿಯೂ ಅಭಿಷೇಕ್ ನಂಬರ್ 1 ಸ್ಥಾನದಲ್ಲಿಯೇ ಮುಂದುವರೆದಿದ್ದಾರೆ. ಅವರ ಜೊತೆಗೆ ಇಶಾನ್ ಕಿಶನ್ ಮತ್ತು ಜಸ್ಪ್ರಿತ್ ಬುಮ್ರಾ ಕೂಡ ತಮ್ಮ ಅತ್ಯುತ್ತಮ ಪ್ರದರ್ಶನಕ್ಕಾಗಿ ಬಹುಮಾನ ಪಡೆದಿದ್ದಾರೆ.

3 / 7

ಫೆಬ್ರವರಿ 25 ರ ಬುಧವಾರದಂದು ಐಸಿಸಿ ಇತ್ತೀಚಿನ ಟಿ20 ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಬ್ಯಾಟಿಂಗ್‌ ವಿಭಾಗದಲ್ಲಿ ಟೀಂ ಇಂಡಿಯಾ ಆರಂಭಿಕ ಅಭಿಷೇಕ್ ಆಡಿರುವ ನಾಲ್ಕು ಪಂದ್ಯಗಳಲ್ಲಿ ಕೇವಲ 15 ರನ್ ಗಳಿಸಿದ್ದರೂ ತಮ್ಮ ನಂಬರ್ 1 ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆದಾಗ್ಯೂ ಅಭಿಷೇಕ್ ಅವರ ರೇಟಿಂಗ್ ಪಾಯಿಂಟ್ 877 ಕ್ಕೆ ಕುಸಿದಿದೆ.

4 / 7

ಎರಡನೇ ಸ್ಥಾನದಲ್ಲಿರುವ ಫಿಲ್ ಸಾಲ್ಟ್ 815 ರೇಟಿಂಗ್ ಪಾಯಿಂಟ್ ಹೊಂದಿರುವುದರಿಂದ ಕೆಲವು ದಿನಗಳವರೆಗೆ ಅಭಿಷೇಕ್ ನಂಬರ್ 1 ಸ್ಥಾನಕ್ಕೆ ಯಾವುದೇ ತೊಂದರೆ ಇಲ್ಲ. ಇನ್ನು ವಿಶ್ವಕಪ್​ನಲ್ಲಿ ಪಾಕಿಸ್ತಾನದ ಪರ ಅಮೋಘ ಪ್ರದರ್ಶನ ನೀಡುತ್ತಿರುವ ಆರಂಭಿಕ ಆಟಗಾರ ಸಾಹಿಬ್‌ಜಾದಾ ಫರ್ಹಾನ್ ಎರಡು ಸ್ಥಾನ ಮೇಲಕ್ಕೇರಿ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ.

5 / 7

ಏತನ್ಮಧ್ಯೆ, ವಿಶ್ವಕಪ್‌ನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ಸಂಚಲನ ಸೃಷ್ಟಿಸಿ ಟೀಂ ಇಂಡಿಯಾ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿರುವ ಇಶಾನ್ ಕಿಶನ್ ಮೂರು ಸ್ಥಾನಗಳ ಜಿಗಿತದೊಂದಿಗೆ ಐದನೇ ಸ್ಥಾನವನ್ನು ತಲುಪಿದ್ದಾರೆ. ಈ ವಿಷಯದಲ್ಲಿ ಇಶಾನ್ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಅವರನ್ನು ಹಿಂದಿಕ್ಕಿದ್ದಾರೆ.

6 / 7

ಉಳಿದಂತೆ ಸೂರ್ಯಕುಮಾರ್ ಯಾದವ್ ಆರನೇ ಸ್ಥಾನದಲ್ಲಿ ಮುಂದುವರಿದಿದ್ದರೆ, ತಿಲಕ್ ವರ್ಮಾ ಎರಡು ಸ್ಥಾನಗಳ ಕುಸಿತದೊಂದಿಗೆ ಏಳನೇ ಸ್ಥಾನಕ್ಕೆ ಇಳಿದಿದ್ದಾರೆ. ಹಾಗೆಯೇ ದಕ್ಷಿಣ ಆಫ್ರಿಕಾದ ಡೆವಾಲ್ಡ್ ಬ್ರೆವಿಸ್ 10 ಸ್ಥಾನಗಳ ಜಿಗಿತದೊಂದಿಗೆ ಬ್ಯಾಟಿಂಗ್‌ನಲ್ಲಿ ಒಂಬತ್ತನೇ ಸ್ಥಾನವನ್ನು ತಲುಪಿದ್ದಾರೆ.

7 / 7

ಬೌಲಿಂಗ್ ಬಗ್ಗೆ ಹೇಳುವುದಾದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಕಳಪೆ ಪ್ರದರ್ಶನದ ಹೊರತಾಗಿಯೂ ವರುಣ್ ಚಕ್ರವರ್ತಿ ನಂಬರ್ 1 ಸ್ಥಾನದಲ್ಲಿ ಮುಂದುವರೆದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ನಾಲ್ಕು ವಿಕೆಟ್ ಕಬಳಿಸಿದ್ದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಏಳು ಸ್ಥಾನಗಳನ್ನು ಮೇಲೇರಿ ಎಂಟನೇ ಸ್ಥಾನವನ್ನು ತಲುಪಿದ್ದಾರೆ.

Loading...
Unable to load recommendations.
Follow Us