ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಎಲ್ಲರನ್ನು ಹಿಂದಿಕ್ಕಿದ ಬಾಬರ್
T20 World Cup 2021: ಟಿ20 ವಿಶ್ವಕಪ್ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಪಾಕ್ ಆಟಗಾರ ಮೊಹಮ್ಮದ್ ರಿಜ್ವಾನ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ 4ನೇ ಸ್ಥಾನ ಅಲಂಕರಿಸಿದ್ದಾರೆ.
Updated on:Nov 03, 2021 | 4:57 PM

ಐಸಿಸಿ ನೂತನ ಟಿ20 ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಇಂಗ್ಲೆಂಡ್ ಬ್ಯಾಟರ್ ಡೇವಿಡ್ ಮಲಾನ್ ಅವರನ್ನು ಹಿಂದಿಕ್ಕಿ ಪಾಕಿಸ್ತಾನ್ ನಾಯಕ ಬಾಬರ್ ಆಜಂ ಅಗ್ರಸ್ಥಾನಕ್ಕೇರಿದ್ದಾರೆ. ಇನ್ನು ಟಾಪ್ 10 ನಲ್ಲಿ ಈ ಬಾರಿ ಕೂಡ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಮಾತ್ರ ಸ್ಥಾನ ಪಡೆದಿದ್ದಾರೆ.

ಅದರಲ್ಲೂ ಟಿ20 ವಿಶ್ವಕಪ್ನಲ್ಲಿಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಪಾಕ್ ಆಟಗಾರ ಮೊಹಮ್ಮದ್ ರಿಜ್ವಾನ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ 4ನೇ ಸ್ಥಾನ ಅಲಂಕರಿಸಿದ್ದಾರೆ.

ಹಾಗೆಯೇ ಶ್ರೀಲಂಕಾ ವಿರುದ್ದ ಭರ್ಜರಿ ಶತಕ ಸಿಡಿಸಿ ಮುಂಚಿದ್ದ ಇಂಗ್ಲೆಂಡ್ ಬ್ಯಾಟ್ಸ್ಮನ್ ಜೋಸ್ ಬಟ್ಲರ್ ಈ ಸಲ ಟಾಪ್-10 ರಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಕಳೆದ ಬಾರಿ ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದ ಅಫ್ಘಾನಿಸ್ತಾನ್ ತಂಡದ ಹಝ್ರತುಲ್ಲಾ ಝಝೈ ಈ ಬಾರಿ ಟಾಪ್ 10ನಿಂದ ಹೊರಬಿದ್ದಿದ್ದಾರೆ. ನೂತನ ಟಿ20 ರ‍್ಯಾಂಕಿಂಗ್ ಪಟ್ಟಿ ಹೀಗಿದೆ...

10- ಎವಿನ್ ಲೂಯಿಸ್ (ವೆಸ್ಟ್ ಇಂಡೀಸ್)

9- ಜೋಸ್ ಬಟ್ಲರ್ (ಇಂಗ್ಲೆಂಡ್)

8- ಕೆಎಲ್ ರಾಹುಲ್ (ಟೀಮ್ ಇಂಡಿಯಾ)

7- ಡೆವೊನ್ ಕಾನ್ವೆ (ನ್ಯೂಜಿಲೆಂಡ್)

6- ಏಡೆನ್ ಮಾರ್ಕ್ರಮ್ (ದಕ್ಷಿಣ ಆಫ್ರಿಕಾ)

5- ವಿರಾಟ್ ಕೊಹ್ಲಿ ( ಟೀಮ್ ಇಂಡಿಯಾ)

4- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್)

3- ಆರೋನ್ ಫಿಂಚ್ (ಆಸ್ಟ್ರೇಲಿಯಾ)

2- ಡೇವಿಡ್ ಮಲಾನ್ ( ಇಂಗ್ಲೆಂಡ್)

1- ಬಾಬರ್ ಆಜಂ (ಪಾಕಿಸ್ತಾನ್)
Published On - 4:53 pm, Wed, 3 November 21
