AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಬರೋಬ್ಬರಿ 32 ಸ್ಥಾನ ಮೇಲೇರಿದ ಕಿಶನ್; ಜಾರಿದ ಸಂಜು ಸ್ಯಾಮ್ಸನ್

ICC T20 Rankings: ಟಿ20 ವಿಶ್ವಕಪ್‌ಗೆ ತಂಡಗಳು ಸಿದ್ಧಗೊಳ್ಳುತ್ತಿರುವಾಗ, ಐಸಿಸಿ ಹೊಸ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದೆ. ನ್ಯೂಜಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಭರ್ಜರಿ ಮುಂಬಡ್ತಿ ಪಡೆದಿದ್ದಾರೆ. ಅಭಿಷೇಕ್ ಶರ್ಮಾ ಅಗ್ರಸ್ಥಾನದಲ್ಲೇ ಮುಂದುವರಿದಿದ್ದು, ವರುಣ್ ಚಕ್ರವರ್ತಿ ಬೌಲಿಂಗ್‌ನಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ. ಕಳಪೆ ಪ್ರದರ್ಶನ ನೀಡಿದ ಆಟಗಾರರು ಕುಸಿತ ಕಂಡಿದ್ದಾರೆ.

ಪೃಥ್ವಿಶಂಕರ
|

Updated on: Feb 04, 2026 | 3:55 PM

Share
ಟಿ20 ವಿಶ್ವಕಪ್‌ಗೆ ಎಲ್ಲಾ ತಂಡಗಳು ತಯಾರಿ ನಡೆಸುತ್ತಿರುವ ನಡುವೆ ಐಸಿಸಿ ನೂತನ ಟಿ20 ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ಬ್ಯಾಟ್ಸ್‌ಮನ್​ಗಳು ಭರ್ಜರಿ ಮುಂಬಡ್ತಿ ಪಡೆದಿದ್ದರೆ, ಕಳಪೆ ಪ್ರದರ್ಶನ ನೀಡಿದ್ದ ಆಟಗಾರರು ಕುಸಿತ ಕಂಡಿದ್ದಾರೆ.

1 / 5
ತಿಲಕ್ ವರ್ಮಾ ಇಂಜುರಿಯಿಂದಾಗಿ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಡಲು ಅವಕಾಶ ಪಡೆದಿದ್ದ ಇಶಾನ್ ಕಿಶನ್ 1 ಶತಕ ಹಾಗೂ 1 ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇದರ ಫಲವಾಗಿ ಟಿ20 ಬ್ಯಾಟ್ಸ್‌ಮನ್​ಗಳ ರ್ಯಾಂಕಿಂಗ್​ನಲ್ಲಿ ಕಿಶನ್ ಬರೋಬ್ಬರಿ 32 ಸ್ಥಾನ ಮೇಲೇರಿದ್ದು, ಇದೀಗ 32ನೇ ಸ್ಥಾನಕ್ಕೆ ಬಂದಿದ್ದಾರೆ. ಉಳಿದಂತೆ ಅಭಿಷೇಕ್ ಶರ್ಮಾ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ.

2 / 5
ಕಿವೀಸ್ ವಿರುದ್ಧದ ಸರಣಿಯಲ್ಲಿ ತಮ್ಮ ಹಳೆಯ ಫಾರ್ಮ್​ ಕಂಡುಕೊಂಡಿದ್ದ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಟಿ20 ರ್ಯಾಂಕಿಂಗ್​ನಲ್ಲಿ ಮುಂಬಡ್ತಿ ಪಡೆದಿದ್ದರೆ, ಆಡಿದ ಐದು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಸಂಜು ಸ್ಯಾಮ್ಸನ್​ ಕುಸಿತ ಕಂಡಿದ್ದಾರೆ. ಕಳೆದ ವಾರ 51 ನೇ ಸ್ಥಾನದಲ್ಲಿದ್ದ ಸಂಜು ಈಗ 56 ನೇ ಸ್ಥಾನಕ್ಕೆ ಕುಸಿದಿದ್ದಾರೆ.

3 / 5
ಅಭಿಷೇಕ್ ಶರ್ಮಾ ಟಿ20 ಶ್ರೇಯಾಂಕದಲ್ಲಿ ತಮ್ಮ ಪ್ರಾಬಲ್ಯವನ್ನು ಕಾಯ್ದುಕೊಂಡಿದ್ದು, 917 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಆದಾಗ್ಯೂ, ತಿಲಕ್ ವರ್ಮಾ ಒಂದು ಸ್ಥಾನ ಕುಸಿದು ನಾಲ್ಕನೇ ಸ್ಥಾನಕ್ಕೆ ಇಳಿದಿದ್ದಾರೆ. ಸೂರ್ಯಕುಮಾರ್ ಯಾದವ್ ಏಳನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. ಶಿವಂ ದುಬೆ ಕೂಡ 17 ಆಟಗಾರರನ್ನು ಹಿಂದಿಕ್ಕಿ 41 ನೇ ಸ್ಥಾನಕ್ಕೆ ತಲುಪಿದ್ದಾರೆ.

4 / 5
ಬೌಲರ್‌ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ, ವರುಣ್ ಚಕ್ರವರ್ತಿ ನಂ. 1 ಸ್ಥಾನದಲ್ಲಿ ಮುಂದುವರೆದಿದ್ದಾರೆ. ಪಾಕಿಸ್ತಾನಿ ಸ್ಪಿನ್ನರ್ ಅಬ್ರಾರ್ ಅಹ್ಮದ್ ಇಬ್ಬರು ಬೌಲರ್‌ಗಳನ್ನು ಹಿಂದಿಕ್ಕಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಆದಾಗ್ಯೂ ಅಬ್ರಾರ್ ಅಹ್ಮದ್ ಮತ್ತು ವರುಣ್ ಚಕ್ರವರ್ತಿ ಅವರ ರೇಟಿಂಗ್ ಅಂಕಗಳ ನಡುವಿನ ವ್ಯತ್ಯಾಸ ಕೇವಲ 28 ಆಗಿರುವುದರಿಂದ ವರುಣ್ ಮೊದಲ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆಗಳಿವೆ.

5 / 5
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ

ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್

ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ

ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ

ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು

ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು

ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ

ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ

ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್

ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?