ICC T20 Rankings: 25 ಸ್ಥಾನ ಮೇಲೇರಿದ ಸಂಜು ಸ್ಯಾಮ್ಸನ್! ಜಾರಿದ ಸೂರ್ಯ

Updated on: Mar 04, 2026 | 4:05 PM

ICC T20 Rankings: ಐಸಿಸಿ ನೂತನ ಟಿ20 ರ್ಯಾಂಕಿಂಗ್ ಬಿಡುಗಡೆಗೊಂಡಿದ್ದು, ಭಾರತೀಯ ಆಟಗಾರರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಸಂಜು ಸ್ಯಾಮ್ಸನ್ 25 ಸ್ಥಾನ ಮೇಲೇರಿ 40ನೇ ಸ್ಥಾನಕ್ಕೆ ತಲುಪಿದ್ದಾರೆ. ಇಶಾನ್ ಕಿಶನ್, ತಿಲಕ್ ವರ್ಮಾ, ಜಸ್ಪ್ರೀತ್ ಬುಮ್ರಾ ಮತ್ತು ಅರ್ಶ್‌ದೀಪ್ ಸಿಂಗ್ ಕೂಡ ತಮ್ಮ ಶ್ರೇಯಾಂಕಗಳನ್ನು ಸುಧಾರಿಸಿಕೊಂಡಿದ್ದಾರೆ. ಕಳಪೆ ಪ್ರದರ್ಶನದ ಹೊರತಾಗಿಯೂ ಅಭಿಷೇಕ್ ಶರ್ಮಾ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದಾರೆ.

1 / 5
2026 ರ ಟಿ20 ವಿಶ್ವಕಪ್ ನಡುವೆ ಐಸಿಸಿ, ನೂತನ ಟಿ20 ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳು ಮತ್ತು ಬೌಲರ್‌ಗಳು ಭರ್ಜರಿ ಮುಂಬಡ್ತಿ ಪಡೆದಿದ್ದಾರೆ. ಅದರಲ್ಲೂ ವೆಸ್ಟ್ ಇಂಡೀಸ್ ವಿರುದ್ಧದ ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ 97 ರನ್​ಗಳ ಅಜೇಯ ಇನ್ನಿಂಗ್ಸ್ ಆಡಿದ್ದ ಸಂಜು ಸ್ಯಾಮ್ಸನ್ 25 ಸ್ಥಾನ ಮೇಲೇರಿದ್ದಾರೆ.

2026 ರ ಟಿ20 ವಿಶ್ವಕಪ್ ನಡುವೆ ಐಸಿಸಿ, ನೂತನ ಟಿ20 ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳು ಮತ್ತು ಬೌಲರ್‌ಗಳು ಭರ್ಜರಿ ಮುಂಬಡ್ತಿ ಪಡೆದಿದ್ದಾರೆ. ಅದರಲ್ಲೂ ವೆಸ್ಟ್ ಇಂಡೀಸ್ ವಿರುದ್ಧದ ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ 97 ರನ್​ಗಳ ಅಜೇಯ ಇನ್ನಿಂಗ್ಸ್ ಆಡಿದ್ದ ಸಂಜು ಸ್ಯಾಮ್ಸನ್ 25 ಸ್ಥಾನ ಮೇಲೇರಿದ್ದಾರೆ.

2 / 5

ಸಂಜು ಸ್ಯಾಮ್ಸನ್ ಜೊತೆಗೆ ಇಡೀ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ತಿಲಕ್ ವರ್ಮಾ ಮತ್ತು ಇಶಾನ್ ಕಿಶನ್ ಕೂಡ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಲಾಭ ಗಳಿಸಿದ್ದಾರೆ. ಬೌಲರ್‌ಗಳಲ್ಲಿ, ಸ್ಟಾರ್ ಬೌಲರ್‌ಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಅರ್ಶ್‌ದೀಪ್ ಸಿಂಗ್ ತಮ್ಮ ಶ್ರೇಯಾಂಕಗಳನ್ನು ಸುಧಾರಿಸಿಕೊಂಡಿದ್ದಾರೆ.

3 / 5

ಈ ಮೊದಲು 65ನೇ ಸ್ಥಾನದಲ್ಲಿದ್ದ ಸಂಜು ಸ್ಯಾಮ್ಸನ್ ಇದೀಗ ಬರೋಬ್ಬರಿ 25 ಸ್ಥಾನಗಳನ್ನು ಮೇಲೇರಿ 549 ರೇಟಿಂಗ್ ಪಾಯಿಂಟ್‌ಗಳೊಂದಿಗೆ 40 ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಹಾಗೆಯೇ ಮತ್ತೊಬ್ಬ ಆರಂಭಿಕ ಆಟಗಾರ ಇಶಾನ್ ಕಿಶನ್ ಕೂಡ ಲಾಭ ಪಡೆದಿದ್ದು, ಐದನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ.

4 / 5

ತಿಲಕ್ ವರ್ಮಾ ಕೂಡ ಒಂದು ಸ್ಥಾನ ಮೇಲಕ್ಕೆ ಜಿಗಿದು ಏಳನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಬಂದಿದ್ದಾರೆ. ಆದಾಗ್ಯೂ, ನಾಯಕ ಸೂರ್ಯಕುಮಾರ್ ಯಾದವ್ ಹಿನ್ನಡೆ ಅನುಭವಿಸಿದ್ದು, ಏಳನೇ ಸ್ಥಾನಕ್ಕೆ ಕುಸಿದಿದ್ದಾರೆ. ಒಳ್ಳೆಯ ಸುದ್ದಿ ಏನೆಂದರೆ ಕಳಪೆ ಪ್ರದರ್ಶನದ ಹೊರತಾಗಿಯೂ ಅಭಿಷೇಕ್ ಶರ್ಮಾ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿ ಉಳಿದಿದ್ದು, ಅಗ್ರ ಸ್ಥಾನದಲ್ಲಿ ತಮ್ಮ ಹಿಡಿತವನ್ನು ಕಾಯ್ದುಕೊಂಡಿದ್ದಾರೆ.

5 / 5

ಬೌಲರ್‌ಗಳ ಶ್ರೇಯಾಂಕದಲ್ಲಿ ಭಾರತೀಯ ಬೌಲರ್‌ಗಳು ಕೂಡ ಪ್ರಾಬಲ್ಯ ಸಾಧಿಸಿದ್ದು, ಜಸ್ಪ್ರೀತ್ ಬುಮ್ರಾ ಒಂದು ಸ್ಥಾನ ಜಿಗಿದು 8 ರಿಂದ 7 ನೇ ಸ್ಥಾನಕ್ಕೆ ಏರಿದ್ದಾರೆ. ಅರ್ಷದೀಪ್ ಸಿಂಗ್ ಕೂಡ ಅದ್ಭುತ ಪ್ರದರ್ಶನ ನೀಡಿ ಆರು ಆಟಗಾರರನ್ನು ಹಿಂದಿಕ್ಕಿ 13 ನೇ ಸ್ಥಾನಕ್ಕೆ ತಲುಪಿದ್ದಾರೆ. ಉಳಿದಂತೆ ವರುಣ್ ಚಕ್ರವರ್ತಿ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ.

Loading...
Unable to load recommendations.
Follow Us