AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ಟಿ20 ರ‍್ಯಾಂಕಿಂಗ್: 18 ಸ್ಥಾನ ಮೇಲೇರಿದ ಶ್ರೇಯಸ್ ಅಯ್ಯರ್..!

ಐಸಿಸಿ ಟಿ20 ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು, ಭಾರತೀಯ ಪಾರುಪತ್ಯ ಮುಂದುವರೆದಿದೆ. ವೆಸ್ಟ್ ಇಂಡೀಸ್ ವಿರುದ್ಧ ಶತಕ ಬಾರಿಸಿದ ಶ್ರೇಯಸ್ ಅಯ್ಯರ್ 18 ಸ್ಥಾನಗಳ ಜಿಗಿತದೊಂದಿಗೆ 7ನೇ ಸ್ಥಾನಕ್ಕೇರಿದ್ದಾರೆ. ಇಶಾನ್ ಕಿಶನ್ ತಮ್ಮ ಅಗ್ರಸ್ಥಾನವನ್ನು ಉಳಿಸಿಕೊಂಡಿದ್ದು, ಅಭಿಷೇಕ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಬೌಲರ್‌ಗಳ ವಿಭಾಗದಲ್ಲಿ ರಶೀದ್ ಖಾನ್ ಅಗ್ರಸ್ಥಾನಕ್ಕೇರಿದ್ದು, ಅಕ್ಷರ್ ಪಟೇಲ್ 7ನೇ ಸ್ಥಾನ ಪಡೆದಿದ್ದಾರೆ.

ಪೃಥ್ವಿಶಂಕರ
|

Updated on: Oct 07, 2026 | 10:38 PM

Share
ಐಸಿಸಿ ಇಂದು ಬಿಡುಗಡೆ ಮಾಡಿದ ಟಿ20 ಬ್ಯಾಟರ್​​ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾದ ನಾಯಕ ಶ್ರೇಯಸ್ ಅಯ್ಯರ್ ಭರ್ಜರಿ ಮುಂಬಡ್ತಿ ಪಡೆದಿದ್ದಾರೆ. ಲಕ್ನೋದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಬ್ಬರದ ಶತಕ ಬಾರಿಸಿದ್ದ ಶ್ರೇಯಸ್ ಅಯ್ಯರ್ ತಂಡವನ್ನು ಸುಲಭವಾಗಿ ಗೆಲುವಿನ ದಡ ಮುಟ್ಟಿಸಿದ್ದರು. ಇದೀಗ ಅವರಿಗೆ ಐಸಿಸಿಯಿಂದಲೂ ಬಹುಮಾನ ಸಿಕ್ಕಿದೆ(PC-PTI).

1 / 5
ಐಸಿಸಿ ಬಿಡುಗಡೆ ಮಾಡಿರುವ ಟಿ20 ಬ್ಯಾಟರ್​ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಇಶಾನ್ ಕಿಶನ್ ತಮ್ಮ ಅಗ್ರ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಹಾಗೆಯೇ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೂಡ ಎರಡನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಆದರೆ ನಾಯಕ ಶ್ರೇಯಸ್ ಅಯ್ಯರ್ ಶತಕದೊಂದಿಗೆ 18 ಸ್ಥಾನಗಳ ಜಿಗಿತ ಕಂಡಿದ್ದು, ಇದೀಗ ಅಗ್ರ 10 ರಲ್ಲಿ ಸ್ಥಾನ ಪಡೆದಿದ್ದಾರೆ(PC-PTI).

2 / 5
ವೆಸ್ಟ್ ಇಂಡೀಸ್ ವಿರುದ್ಧ ಶ್ರೇಯಸ್ ಅಯ್ಯರ್ ಬಾರಿಸಿದ ಶತಕ ಅವರ ಅಂತರರಾಷ್ಟ್ರೀಯ ಟಿ20 ವೃತ್ತಿಜೀವನವದ ಮೊದಲ ಶತಕವೂ ಆಗಿದೆ. ತಮ್ಮ ಇನ್ನಿಂಗ್ಸ್​ನಲ್ಲಿ 43 ಎಸೆತಗಳನ್ನು ಎದುರಿಸಿದ ಅಯ್ಯರ್ ಅಜೇಯ 102 ರನ್ ಕಲೆಹಾಕಿದರು. ಇದರ ಫಲವಾಗಿ ಅಯ್ಯರ್ 18 ಸ್ಥಾನಗಳ ಏರಿಕೆ ಕಂಡು ಏಳನೇ ಸ್ಥಾನಕ್ಕೆ ತಲುಪಿದ್ದಾರೆ. ಅವರು ಪ್ರಸ್ತುತ 786 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ(PC-PTI).

3 / 5
ಮತ್ತೊಂದೆಡೆ, ಇಶಾನ್ ಕಿಶನ್ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಕಿಶನ್ ಪ್ರಸ್ತುತ 902 ರೇಟಿಂಗ್ ಪಾಯಿಂಟ್ಸ್ ಹೊಂದಿದ್ದಾರೆ. ಅಭಿಷೇಕ್ ಶರ್ಮಾ 887 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಟಿ20 ತಂಡದ ನಾಯಕಸಾಹಿಬ್ಜಾದಾ ಫರ್ಹಾನ್ ಪ್ರಸ್ತುತ 818 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ(PC-PTI).

4 / 5
ಬೌಲರ್​ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ರಶೀದ್ ಖಾನ್ ಅಗ್ರಸ್ಥಾನ ತಲುಪಿದ್ದು, ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ಹಿಂದಿಕ್ಕಿದ್ದಾರೆ. ರಶೀದ್ 720 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಅಬ್ರಾರ್ 718 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಅಗ್ರ ಐದರಲ್ಲಿ ಯಾವುದೇ ಭಾರತೀಯ ಬೌಲರ್ ಇಲ್ಲ. ಆದಾಗ್ಯೂ, ಆಲ್‌ರೌಂಡರ್ ಅಕ್ಷರ್ ಪಟೇಲ್ 16 ಸ್ಥಾನ ಜಿಗಿದು ಏಳನೇ ಸ್ಥಾನಕ್ಕೆ ತಲುಪಿದ್ದಾರೆ.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!

ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?

‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ

ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ

ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ

ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ