- Kannada News Photo gallery Cricket photos ICC T20 Rankings: SuryaKumar Yadav touches 900 Ratings for 1st time Kannada News zp
ICC T20 Rankings: ಐಸಿಸಿ ರ್ಯಾಂಕಿಂಗ್ನಲ್ಲೂ ಸರ್ವಶ್ರೇಷ್ಠ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
Surykumar Yadav ICC T20 Rankings: ಐಸಿಸಿ ಟಿ20 ರ್ಯಾಂಕಿಂಗ್ನಲ್ಲಿ ಅತೀ ಹೆಚ್ಚು ಅಂಕ ಪಡೆದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 915 ಪಾಯಿಂಟ್ ಕಲೆಹಾಕಿದ್ದ ಇಂಗ್ಲೆಂಡ್ನ ಡೇವಿಡ್ ಮಲಾನ್ ಅಗ್ರಸ್ಥಾನದಲ್ಲಿದ್ದಾರೆ.
Updated on: Jan 11, 2023 | 4:41 PM

ICC T20 Rankings: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಟಿ20 ಬ್ಯಾಟ್ಸ್ಮನ್ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.

1- ಸೂರ್ಯಕುಮಾರ್ ಯಾದವ್ (ಭಾರತ)- 906 ಅಂಕಗಳು

ಅಂದರೆ ಐಸಿಸಿ ಟಿ20 ರ‍್ಯಾಂಕಿಂಗ್ ಇತಿಹಾಸದಲ್ಲೇ ಅತ್ಯಧಿಕ ಪಾಯಿಂಟ್ ಕಲೆಹಾಕಿದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಸೂರ್ಯಕುಮಾರ್ ಯಾದವ್ ಪಾತ್ರರಾಗಿದ್ದಾರೆ. ಹಾಗೆಯೇ ಟಿ20 ಶ್ರೇಯಾಂಕ ಪಟ್ಟಿಯಲ್ಲಿ 900 ಕ್ಕೂ ಅಧಿಕ ಪಾಯಿಂಟ್ ಪಡೆದ ವಿಶ್ವದ ಮೂರನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.

ಒಂದು ವೇಳೆ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ರೆ ಅಂಕ ಪಟ್ಟಿಯಲ್ಲಿ ಮತ್ತಷ್ಟು ಮೇಲೆಳೆಬಹುದು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಅಂಕ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನೂ ಬರೆಯಬಹುದು. ಸದ್ಯ ಈ ದಾಖಲೆ ಇಂಗ್ಲೆಂಡ್ ಆಟಗಾರ ಡೇವಿಡ್ ಮಲಾನ್ ಹೆಸರಿನಲ್ಲಿದೆ.

ಡೇವಿಡ್ ಮಲಾನ್ ಒಟ್ಟು 915 ಪಾಯಿಂಟ್ ಕಲೆಹಾಕುವ ಮೂಲಕ ಟಿ20 ಕ್ರಿಕೆಟ್ ರ‍್ಯಾಂಕಿಂಗ್ ಇತಿಹಾಸದಲ್ಲೇ ಅತೀ ಹೆಚ್ಚು ಅಂಕ ಪಡೆದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಸದ್ಯ 910 ಪಾಯಿಂಟ್ಗಳಿಸಿರುವ ಸೂರ್ಯಕುಮಾರ್ 6 ಅಂಕಗಳನ್ನು ಗಳಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಈ ಮೂಲಕ ಡೇವಿಡ್ ಮಲಾನ್ ಹೆಸರಿನಲ್ಲಿರುವ ವಿಶ್ವ ದಾಖಲೆಯನ್ನು ಮುರಿಯುವ ನಿರೀಕ್ಷೆಯಿದೆ.

ಐಸಿಸಿ ಪ್ರಕಟಿಸಿರುವ ನೂತನ ಟಿ20 ಬ್ಯಾಟರ್ಗಳ ಶ್ರೇಯಾಂಕ ಪಟ್ಟಿಯಲ್ಲಿರುವ ಅಗ್ರ 10 ಆಟಗಾರರು ಯಾರೆಲ್ಲಾ ಎಂದು ನೋಡೋಣ...

10- ಅಲೆಕ್ಸ್ ಹೇಲ್ (ಇಂಗ್ಲೆಂಡ್)- 655 ಅಂಕಗಳು

8- ಆರೋನ್ ಫಿಂಚ್ (ಆಸ್ಟ್ರೇಲಿಯಾ) - 680 ಅಂಕಗಳು

7- ರಿಲೀ ರೊಸ್ಸೊ (ಸೌತ್ ಆಫ್ರಿಕಾ)- 693 ಅಂಕಗಳು

9- ಗ್ಲೆನ್ ಫಿಲಿಪ್ಸ್ (ನ್ಯೂಜಿಲೆಂಡ್)- 662 ಅಂಕಗಳು

6- ಡೇವಿಡ್ ಮಲಾನ್ (ಇಂಗ್ಲೆಂಡ್) - 719 ಅಂಕಗಳು

5- ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ) - 748 ಅಂಕಗಳು

3- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕಗಳು

4- ಡೆವೊನ್ ಕಾನ್ವೇ (ನ್ಯೂಜಿಲೆಂಡ್)- 768 ಅಂಕಗಳು

2- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್) - 836 ಅಂಕಗಳು

1- ಸೂರ್ಯಕುಮಾರ್ ಯಾದವ್ (ಭಾರತ)- 910 ಅಂಕಗಳು




