AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 Ranking: ಬರೋಬ್ಬರಿ 230 ಸ್ಥಾನ ಮೇಲೇರಿದ ವೈಭವ್ ಸೂರ್ಯವಂಶಿ

ICC T20 Rankings: ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ರ್ಯಾಂಕಿಂಗ್‌ನಲ್ಲಿ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ 230 ಸ್ಥಾನ ಮೇಲೇರಿ 48ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿ ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದಿದ್ದ ವೈಭವ್, ಕೇವಲ 15ರ ಹರೆಯದಲ್ಲಿ ಈ ಸಾಧನೆ ಮಾಡಿದ್ದಾರೆ. ಭವಿಷ್ಯದಲ್ಲಿ ಟಾಪ್ 10 ಪ್ರವೇಶಿಸುವ ಸಾಮರ್ಥ್ಯ ಹೊಂದಿದ್ದು, ಭಾರತೀಯ ಕ್ರಿಕೆಟ್‌ನ ಹೊಸ ಭರವಸೆಯಾಗಿದ್ದಾರೆ.

ಪೃಥ್ವಿಶಂಕರ
|

Updated on: Jul 29, 2026 | 4:32 PM

Share
ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಬ್ಯಾಟ್ಸ್‌ಮನ್​ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾದ ಯುವ ಆರಂಭಿಕ ಬ್ಯಾಟರ್ ವೈಭವ್ ಸೂರ್ಯವಂಶಿ ದಾಖಲೆಯ 230 ಸ್ಥಾನಗಳನ್ನು ಮೇಲೇರಿ 48ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿ ಸರಣಿ ಶ್ರೇಷ್ಠ ಗೆದ್ದಿದ್ದ ವೈಭವ್​ಗೆ ಇದೀಗ ಐಸಿಸಿ ಕಡೆಯಿಂದಲೂ ಬಹುಮಾನ ಸಿಕ್ಕಿದೆ(PC-PTI).

1 / 5
 ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೂ ಮೊದಲು ವೈಭವ್ ಸೂರ್ಯವಂಶಿ 278 ನೇ ಸ್ಥಾನದಲ್ಲಿದ್ದರು. ಆದರೆ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳಲ್ಲಿ ವೈಭವ್ ಎರಡು ಅರ್ಧಶತಕಗಳು ಸೇರಿದ್ದಂತೆ ಬರೋಬ್ಬರಿ 151 ರನ್‌ ಕಲೆಹಾಕಿದ್ದರು. ಇದರ ಫಲವಾಗಿ ವೈಭವ್ 536 ರೇಟಿಂಗ್ ಪಾಯಿಂಟ್‌ಗಳೊಂದಿಗೆ 48ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ(PC-PTI).

2 / 5
ವೈಭವ್ ಸೂರ್ಯವಂಶಿ ಇದುವರೆಗೆ ಕೇವಲ ಎರಡು ಟಿ20 ಸರಣಿಗಳನ್ನು ಆಡಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಹೆಚ್ಚಿನ ಪಂದ್ಯಗಳನ್ನು ಆಡಿದರೆ ಶೀಘ್ರದಲ್ಲೇ ಟಾಪ್ 10 ರೊಳಗೆ ಪ್ರವೇಶಿಸುತ್ತಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಆದಾಗ್ಯೂ, ಈ 15 ವರ್ಷದ ಆಟಗಾರ ಫಿಟ್ನೆಸ್ ಸೇರಿದಂತೆ ನಂಬರ್ 1 ಆಟಗಾರನಾಗಲು ಶ್ರಮಿಸಬೇಕಾಗುತ್ತದೆ(PC-PTI).

3 / 5
ವೈಭವ್ ಸೂರ್ಯವಂಶಿ ಕೂಡ ಐಸಿಸಿ ಶ್ರೇಯಾಂಕದಲ್ಲಿ ಪ್ರಮುಖ ದಾಖಲೆಯನ್ನು ಮುರಿಯುವ ಅವಕಾಶವನ್ನು ಹೊಂದಿದ್ದಾರೆ. ಐಸಿಸಿ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್​ಗಳ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. 1994 ರಲ್ಲಿ ಟೆಸ್ಟ್ ಶ್ರೇಯಾಂಕದಲ್ಲಿ ಸಚಿನ್ ಅಗ್ರಸ್ಥಾನವನ್ನು ತಲುಪಿದಾಗ ಅವರಿಗೆ  ಕೇವಲ 21 ವರ್ಷ ಮತ್ತು 7 ತಿಂಗಳುಗಳಾಗಿತ್ತು(PC-PTI).

4 / 5
ವೈಭವ್ ಕೇವಲ 15 ವರ್ಷ ವಯಸ್ಸಿನವರಾಗಿದ್ದಾರೆ ಮತ್ತು ನಂಬರ್ ಒನ್ ಸ್ಥಾನವನ್ನು ತಲುಪಲು ಇನ್ನೂ ಸಾಕಷ್ಟು ಸಮಯವಿದೆ. ಈಗ, ಅವರು ಅದನ್ನು ಸಾಧಿಸಬಹುದೇ ಎಂದು ಕಾದು ನೋಡಬೇಕಾಗಿದೆ. ಟೀಂ ಇಂಡಿಯಾ ಟಿ20 ಮಾದರಿಯಲ್ಲಿ ಏಷ್ಯನ್ ಕ್ರೀಡಾಕೂಟದಲ್ಲಿ ಕಣಕ್ಕಿಳಿಯಲಿದೆ. ಅದಕ್ಕೂ ಮೊದಲು ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದ ವಿರುದ್ಧ ಟಿ20 ಸರಣಿ ಆಡುವ ಅವಕಾಶವಿದೆ. ಆ ಸರಣಿಯಲ್ಲಿ ವೈಭವ್ ಮಿಂಚಿದರೆ ಅವರ ಸ್ಥಾನ ಮತ್ತಷ್ಟು ಸುಧಾರಿಸಲಿದೆ(PC-PTI).

5 / 5
Follow Us
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ

ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ

ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ

ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!

ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು

ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ

ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ

ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ