
ಐಸಿಸಿ ನೂತನ ಟಿ20 ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಪಾಕಿಸ್ತಾನ್ ನಾಯಕ ಬಾಬರ್ ಆಜಂ ಅವರನ್ನು ಹಿಂದಿಕ್ಕಿ ಇಂಗ್ಲೆಂಡ್ ಬ್ಯಾಟರ್ ಡೇವಿಡ್ ಮಲಾನ್ ಅವರು ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ. ಇನ್ನು ಟಾಪ್ 10 ನಲ್ಲಿ ಈ ಬಾರಿ ಟೀಮ್ ಇಂಡಿಯಾದ ಏಕೈಕ ಆಟಗಾರ ಮಾತ್ರ ಸ್ಥಾನ ಪಡೆದಿದ್ದಾರೆ.
ಇನ್ನು ಟಿ20 ವಿಶ್ವಕಪ್ನಲ್ಲಿಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಪಾಕ್ ಬಾಬರ್ ಆಜಂ ಈ ಬಾರಿ ರ್ಯಾಂಕಿಂಗ್ನಲ್ಲಿ ಕುಸಿತ ಕಂಡಿದ್ದು, ಅದರಂತೆ ಮೂರನೇ ಸ್ಥಾನ ಅಲಂಕರಿಸಿದ್ದಾರೆ.
ಹಾಗೆಯೇ ಕಳೆದ ಬಾರಿ 8ನೇ ಸ್ಥಾನದಲ್ಲಿದ್ದ ಟೀಮ್ ಇಂಡಿಯಾ ಆರಂಭಿಕ ಆಟಗಾರ ಕೆಎಲ್ ರಾಹುಲ್ ಈ ಬಾರಿ ಮೂರು ಸ್ಥಾನ ಮೇಲೇರಿದ್ದಾರೆ. ಆದರೆ ನ್ಯೂಜಿಲೆಂಡ್ ವಿರುದ್ದದ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ ಟಾಪ್- 10 ನಿಂದ ಹೊರಬಿದ್ದಿದ್ದಾರೆ. ಹಾಗಿದ್ರೆ ನೂತನ ಟಿ20 ರ‍್ಯಾಂಕಿಂಗ್ ನಲ್ಲಿ ಯಾರು ಯಾವ ಸ್ಥಾನದಲ್ಲಿದ್ದಾರೆ ನೋಡೋಣ.
10- ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್)
9- ರಸ್ಸಿ ವಂಡರ್ ಡುಸ್ಸೆನ್ (ದಕ್ಷಿಣ ಆಫ್ರಿಕಾ)
8- ಜೋಸ್ ಬಟ್ಲರ್ (ಇಂಗ್ಲೆಂಡ್)
7- ಡೆವೊನ್ ಕಾನ್ವೇ (ನ್ಯೂಜಿಲೆಂಡ್)
6- ಆರೋನ್ ಫಿಂಚ್ (ಆಸ್ಟ್ರೇಲಿಯಾ)
5- ಕೆಎಲ್ ರಾಹುಲ್ (ಭಾರತ)
4- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್)
3- ಬಾಬರ್ ಆಜಂ (ಪಾಕಿಸ್ತಾನ್)
2- ಐಡೆನ್ ಮಾರ್ಕ್ರಾಮ್ (ದಕ್ಷಿಣ ಆಫ್ರಿಕಾ)
1- ಡೇವಿಡ್ ಮಲಾನ್ (ಇಂಗ್ಲೆಂಡ್)