ICC T20I Rankings: ಐಸಿಸಿ ಟಿ20 ಬ್ಯಾಟರ್​ಗಳ ರ‍್ಯಾಂಕಿಂಗ್‌ ಪ್ರಕಟ

Updated on: Mar 12, 2026 | 9:26 AM

ICC T20I Rankings: ಟಿ20 ಕ್ರಿಕೆಟ್​ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಬ್ಯಾಟರ್​ಗಳ ನೂತನ ರ್ಯಾಂಕಿಂಗ್ ಪಟ್ಟಿ ಪ್ರಕಟವಾಗಿದೆ. ಈ ಬಾರಿ ಕೂಡ ಅಭಿಷೇಕ್ ಶರ್ಮಾ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದಾಗ್ಯೂ ಅವರಿಗೆ ಪೈಪೋಟಿ ನೀಡಲು ಇಶಾನ್ ಕಿಶನ್ ಎಂಟ್ರಿ ಕೊಟ್ಟಿದ್ದಾರೆ. ಅದರಂತೆ ನೂತನ ಶ್ರೇಯಾಂಕ ಪಟ್ಟಿಯಲ್ಲಿರುವ 10 ಬ್ಯಾಟರ್​ಗಳ ಪಟ್ಟಿ ಈ ಕೆಳಗಿನಂತಿದೆ...

1 / 7
ICC T20I Rankings: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟಿ20 ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್‌ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿಯ ಟಾಪ್-10 ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು ಸ್ಥಾನ ಪಡೆದಿದ್ದಾರೆ. ಅವರಲ್ಲಿರಿಬ್ಬರು ಅಗ್ರಸ್ಥಾನಗಳಲ್ಲಿರುವುದು ವಿಶೇಷ. ಐಸಿಸಿ ಟಿ20 ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ...

ICC T20I Rankings: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟಿ20 ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್‌ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿಯ ಟಾಪ್-10 ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್​ಗಳು ಸ್ಥಾನ ಪಡೆದಿದ್ದಾರೆ. ಅವರಲ್ಲಿರಿಬ್ಬರು ಅಗ್ರಸ್ಥಾನಗಳಲ್ಲಿರುವುದು ವಿಶೇಷ. ಐಸಿಸಿ ಟಿ20 ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ...

2 / 7

1- ಅಭಿಷೇಕ್ ಶರ್ಮಾ: ಟೀಮ್ ಇಂಡಿಯಾದ ಯುವ ದಾಂಡಿಗ ಅಭಿಷೇಕ್ ಶರ್ಮಾ ಈ ಬಾರಿ ಕೂಡ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಟಿ20 ವಿಶ್ವಕಪ್​ನಲ್ಲಿನ ಕಳಪೆ ಪ್ರದರ್ಶನದ ಕಾರಣ ರೇಟಿಂಗ್​ನಲ್ಲಿ ಕುಸಿತ ಕಂಡಿದ್ದು, ಇದಾಗ್ಯೂ 875 ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

3 / 7

2- ಇಶಾನ್ ಕಿಶನ್: ಭಾರತ ತಂಡದ ಯುವ ಎಡಗೈ ಬ್ಯಾಟರ್ ಇಶಾನ್ ಕಿಶನ್ ಈ ಬಾರಿ 2 ಸ್ಥಾನ ಮೇಲೇರಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಪ್ರಚಂಡ ಪ್ರದರ್ಶನದ ಫಲವಾಗಿ ಇದೀಗ 871 ಅಂಕಗಳೊಂದಿಗೆ ದ್ವಿತೀಯ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಅಂದರೆ ಅಭಿಷೇಕ್ ಹಾಗೂ ಇಶಾನ್ ನಡುವಣ ಅಂಕಗಳ ವ್ಯತ್ಯಾಸ ಕೇವಲ 4 ಮಾತ್ರ.

4 / 7

3- ಸಾಹಿಬ್​ಝಾದ ಫರ್ಹಾನ್: ಟಿ20 ವಿಶ್ವಕಪ್​ನಲ್ಲಿ 381 ರನ್​ ಕಲೆಹಾಕುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದ ಪಾಕಿಸ್ತಾನ್ ಬ್ಯಾಟರ್ ಸಾಹಿಬ್​ಝಾದ ಫರ್ಹಾನ್ 848 ಅಂಕಗಳೊಂದಿಗೆ ಈ ಬಾರಿಯ ಶ್ರೇಯಾಂಕದಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ. 

5 / 7

4- ಫಿಲ್ ಸಾಲ್ಟ್: ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಫಿಲ್ ಸಾಲ್ಟ್ ನೂತನ ಶ್ರೇಯಾಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಒಟ್ಟು 792 ಅಂಕಗಳನ್ನು ಪಡೆದಿರುವ ಸಾಲ್ಟ್ ಕಳೆದ ಬಾರಿಗಿಂತ ಒಂದು ಸ್ಥಾನ ಕುಸಿತ ಕಂಡಿದ್ದಾರೆ.

6 / 7

5- ಪಾತುಮ್ ನಿಸ್ಸಂಕಾ: ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದ ಶ್ರೀಲಂಕಾ ತಂಡದ ಒಪನರ್ ಪಾತುಮ್ ನಿಸ್ಸಂಕಾ ಈ ಬಾರಿ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ನಿಸ್ಸಂಕಾ ಒಟ್ಟು 766 ಅಂಕಗಳೊಂದಿಗೆ ಟಾಪ್-5 ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

7 / 7

ಇನ್ನು 6ನೇ ಸ್ಥಾನದಲ್ಲಿ ನ್ಯೂಝಿಲೆಂಡ್​ನ ಟಿಮ್ ಸೈಫರ್ಟ್ (749) ಇದ್ದು, 7ನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ತಿಲಕ್ ವರ್ಮಾ (742) ಕಾಣಿಸಿಕೊಂಡಿದ್ದಾರೆ. ಹಾಗೆಯೇ 8ನೇ ಸ್ಥಾನದಲ್ಲಿ ಸೌತ್ ಆಫ್ರಿಕಾದ ಡೆವಾಲ್ಡ್ ಬ್ರೆವಿಸ್ (738) ಇದ್ದರೆ, 9ನೇ ಸ್ಥಾನದಲ್ಲಿ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (722) ಕಾಣಿಸಿಕೊಂಡಿದ್ದಾರೆ. ಇನ್ನು ಇಂಗ್ಲೆಂಡ್​ನ ಜೋಸ್ ಬಟ್ಲರ್ (716)  10ನೇ ಸ್ಥಾನ ಪಡೆದುಕೊಂಡಿದ್ದಾರೆ.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us