AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20I World Cup: ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟಿಸಲು ದಿನಾಂಕ ನಿಗದಿ: ಯಾವಾಗ ನೋಡಿ

India Squad for ICC T20I World Cup 2024: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಹತ್ತಿರವಾಗುತ್ತಿದೆ. ಇದೀಗ ಈ ಮಹತ್ವದ ಟೂರ್ನಿಗೆ ತಂಡವನ್ನು ಪ್ರಕಟಿಸಲು ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಇದೀಗ ಬಿಸಿಸಿಐ ಭಾರತೀಯ ತಂಡವನ್ನು ಯಾವಾಗ ಪ್ರಕಟಿಸಬಹುದು ಎಂಬ ಸುದ್ದಿ ಹೊರಬಿದ್ದಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Vinay Bhat
|

Updated on: Mar 02, 2024 | 7:02 AM

Share
ಜೂನ್ 1 ರಿಂದ ಯುಎಸ್​ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ 2024 ಶುರುವಾಗಲಿದೆ. 11 ವರ್ಷಗಳ ನಂತರ ಐಸಿಸಿ ICC ಟ್ರೋಫಿಗಾಗಿ ಹುಡುಕಾಟ ನಡೆಸುತ್ತಿರುವ ಟೀಮ್ ಇಂಡಿಯಾ ಮೇಲೆ ಎಲ್ಲರ ಕಣ್ಣಿದೆ. ಈ ಈವೆಂಟ್​ನಲ್ಲಿ ಭಾರತೀಯ ತಂಡದಲ್ಲಿ ಯಾವ ಆಟಗಾರರು ಸ್ಥಾನ ಪಡೆಯುತ್ತಾರೆ ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

1 / 6
ಇದೀಗ ಭಾರತೀಯ ತಂಡವನ್ನು ಯಾವಾಗ ಪ್ರಕಟಿಸಬಹುದು ಎಂಬ ಸುದ್ದಿ ಹೊರಬಿದ್ದಿದೆ. ಸ್ಪೋರ್ಟ್ಸ್ ಟಾಕ್‌ನ ವರದಿಯ ಪ್ರಕಾರ, ಭಾರತ ಸೇರಿದಂತೆ ಎಲ್ಲಾ ತಂಡಗಳಿಗೆ ಐಸಿಸಿ ಟಿ20 ವಿಶ್ವಕಪ್​ಗೆ ತಮ್ಮ ಆಟಗಾರರನ್ನು ಘೋಷಣೆ ಮಾಡಲು ಮೇ 1 ಬುಧವಾರದ ವರೆಗೆ ಗಡುವು ನೀಡಲಾಗಿದೆ. ಇದರ ಜೊತೆಗೆ ಕೆಲ ನಿಯಮಗಳು ಕೂಡ ಇವೆ.

2 / 6
ಒಂದು ತಂಡವು ಪಂದ್ಯಾವಳಿಗೆ 15 ಆಟಗಾರರ ತಂಡವನ್ನು ಪ್ರಕಟಿಸಬಹುದು ಎಂದು ವರದಿಯಲ್ಲಿ ಹೇಳಲಾಗಿದೆ. ಆದಾಗ್ಯೂ, ತಂಡಗಳು ಮೇ 25 ರೊಳಗೆ ತಂಡದಲ್ಲಿ ಬದಲಾವಣೆಗಳನ್ನು ಮಾಡಬಹುದು. ಆದರೆ ಈ ಬದಲಾವಣೆಯನ್ನು ಐಸಿಸಿ ತಾಂತ್ರಿಕ ಸಮಿತಿಯು ಅನುಮೋದಿಸಬೇಕಾಗಿದೆ. ಇದರ ನಡುವೆ ಐಪಿಎಲ್ 2024 ರ ಫೈನಲ್ ಮೇ 27 ರಂದು ನಡೆಯಲಿದೆ ಎಂದು ಹೇಳಲಾಗಿದೆ.

3 / 6
ಐಸಿಸಿ ಟಿ20 ವಿಶ್ವಕಪ್​ಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮೇ 1 ರಂದು ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ. ಯಾಕೆಂದರೆ ಬಿಸಿಸಿಐ ವಿಶ್ವಕಪ್​ಗೆ ಆಟಗಾರರ ಆಯ್ಕೆಯನ್ನು ಐಪಿಎಲ್ ಪ್ರದರ್ಶನದ ಮೇಲೆ ನಿರ್ಧಾರ ಮಾಡುವ ಸಾಧ್ಯತೆ ಇದೆ. ಹೀಗಾಗಿ ಕೊನೆಯ ಕ್ಷಣದವರೆಗೆ ಕಾದು ಮೇ 1 ರಂದು ಹೆಸರಿಸಬಹುದು.

4 / 6
ಭಾರತವು ಜೂನ್ 5 ರಂದು ಐರ್ಲೆಂಡ್ ವಿರುದ್ಧ ನ್ಯೂಯಾರ್ಕ್‌ನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ಬ್ಲಾಕ್‌ಬಸ್ಟರ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.

5 / 6
ಇನ್ನು ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನು ಇತ್ತೀಚೆಗೆ ಬಿಸಿಸಿಐಯ ಕೇಂದ್ರ ಗುತ್ತಿಗೆ ಪಟ್ಟಿಯಿಂದ ತೆಗೆದುಹಾಕಲಾಗಿದೆ. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಇಬ್ಬರು ಸ್ಟಾರ್ ಬ್ಯಾಟರ್ಸ್ 2024 ರ ಟಿ 20 ವಿಶ್ವಕಪ್ ತಂಡಕ್ಕೆ ಆಯ್ಕೆ ಆಗುವುದು ಅನುಮಾನ ಎನ್ನಲಾಗಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ