Updated on:Feb 22, 2023 | 2:41 PM
ನೂತನ ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕ ಬಿಡುಗಡೆಯಾಗಿದ್ದು, ಇಂಗ್ಲೆಂಡ್‌ನ ಅನುಭವಿ ವೇಗಿ ಜೇಮ್ಸ್ ಆಂಡರ್ಸನ್, ಆಸ್ಟ್ರೇಲಿಯದ ನಾಯಕ ಪ್ಯಾಟ್ ಕಮಿನ್ಸ್ ಅವರನ್ನು ಅಗ್ರಸ್ಥಾನದಿಂದ ಕೆಳಗಿಳಿಸಿ ನಂ.1 ಟೆಸ್ಟ್ ಬೌಲರ್ ಎನಿಸಿಕೊಂಡಿದ್ದಾರೆ.
ಕಳೆದ ವಾರ ಮೌಂಟ್ ಮೌಂಗನುಯಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಮಾರಕ ಬೌಲಿಂಗ್ ಮಾಡಿದ್ದ ಆಂಡರ್ಸನ್ ಇಂಗ್ಲೆಂಡ್ ಪರ ಏಳು ವಿಕೆಟ್ ಪಡೆದು ಮಿಂಚಿದ್ದರು. ಈಗ ನಂ.1 ಸ್ಥಾನಕ್ಕೇರುವ ಮೂಲಕ ಆಂಡರ್ಸನ್ ಟೆಸ್ಟ್ ಶ್ರೇಯಾಂಕದಲ್ಲಿ ಆರನೇ ಬಾರಿಗೆ ಅಗ್ರಸ್ಥಾನಕ್ಕೇರಿದ ಬೌಲರ್ ಎನಿಸಿಕೊಂಡಿದ್ದಾರೆ.
ಆಂಡರ್ಸನ್ ನಂತರ ಟೀಂ ಇಂಡಿಯಾದ ಆರ್. ಅಶ್ವಿನ್ ಇದ್ದು, ಒಟ್ಟು 864 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಆಂಡರ್ಸನ್ಗಿಂತ ಕೇವಲ ಎರಡು ರೇಟಿಂಗ್ ಪಾಯಿಂಟ್‌ಗಳ ಹಿಂದೆ ಉಳಿದಿರುವ ಅಶ್ವಿನ್ಗೆ ನಂ.1 ಸ್ಥಾನಕ್ಕೇರುವ ಎಲ್ಲಾ ಅವಕಾಶಗಳಿವೆ.
ಇದುವರೆಗೆ ನಂ.1 ಪಟ್ಟದಲ್ಲಿ ಕುಳಿತಿದ್ದ ಕಮಿನ್ಸ್ 858 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಭಾರತ ವಿರುದ್ಧ ಉಳಿದಿರುವ 2 ಪಂದ್ಯಗಳಲ್ಲಿ ಆಸೀಸ್ ನಾಯಕ ಮಿಂಚಿದರೆ, ಮತ್ತೆ ನಂ.1 ಸ್ಥಾನಕ್ಕೇರುವ ಅವಕಾಶ ಪಡೆಯಲಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನದ ಪ್ರಯೋಜನ ಪಡೆದಿರುವ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ, ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ಬರೋಬ್ಬರಿ 7 ಸ್ಥಾನ ಮೇಲೇರಿ ಒಂಬತ್ತನೇ ಸ್ಥಾನವನ್ನು ತಲುಪಿದ್ದಾರೆ.
ಹಾಗೆಯೇ ಆಸೀಸ್ ವಿರುದ್ಧ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿರುವ ಮತ್ತೊಬ್ಬ ಭಾರತೀಯ ಆಲ್‌ರೌಂಡರ್ ಅಕ್ಷರ್ ಪಟೇಲ್ ಕೂಡ ಇತ್ತೀಚಿನ ಟೆಸ್ಟ್ ಆಲ್-ರೌಂಡರ್ ಶ್ರೇಯಾಂಕದಲ್ಲಿ ಐದನೇ ಸ್ಥಾನಕ್ಕೆ ಏರಿದ್ದಾರೆ.
Published On - 2:41 pm, Wed, 22 February 23