AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Ranking: ನೂತನ ಟೆಸ್ಟ್ ರ್‍ಯಾಂಕಿಂಗ್​ನಲ್ಲಿ 14 ಸ್ಥಾನ ಮುಂಬಡ್ತಿ ಪಡೆದ ಯಶಸ್ವಿ ಜೈಸ್ವಾಲ್..!

ICC Test Ranking: ಇಂದು ಬಿಡುಗಡೆಯಾಗಿರುವ ಐಸಿಸಿ ಟೆಸ್ಟ್ ರ್ಯಾಂಕಿಂಗ್ಸ್​ನಲ್ಲಿ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ಮುಂಬಡ್ತಿ ಪಡೆದಿದ್ದಾರೆ. ಟೆಸ್ಟ್ ಸರಣಿಯಲ್ಲಿ ಸತತ ಎರಡನೇ ದ್ವಿಶತಕ ಸಿಡಿಸಿರುವ ಜೈಸ್ವಾಲ್, 699 ರೇಟಿಂಗ್‌ನೊಂದಿಗೆ 15 ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಪೃಥ್ವಿಶಂಕರ
|

Updated on:Feb 21, 2024 | 3:26 PM

Share
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಇಂದು ಬಿಡುಗಡೆಯಾಗಿರುವ ಐಸಿಸಿ ಟೆಸ್ಟ್ ರ್ಯಾಂಕಿಂಗ್ಸ್​ನಲ್ಲಿ ಭರ್ಜರಿ ಮುಂಬಡ್ತಿ ಪಡೆದಿದ್ದಾರೆ.

1 / 9
ರಾಜ್​ಕೋಟ್​ನಲ್ಲಿ ನಡೆದ ಮೂರನೇ ಟೆಸ್ಟ್​ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಅಜೇಯ ದ್ವಿಶತಕ ಸಿಡಿಸಿದ್ದ ಜೈಸ್ವಾಲ್ ಟೀಂ ಇಂಡಿಯಾದ ದಾಖಲೆಯ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಶ್ರಮಕ್ಕೆ ತಕ್ಕ ಪ್ರತಿಫಲವೆಂಬಂತೆ ತನ್ನ ದ್ವಿಶತಕದಾಟಕ್ಕೆ ಐಸಿಸಿಯಿಂದ ಭರ್ಜರಿ ಮನ್ನಣೆ ಗಳಿಸಿರುವ ಜೈಸ್ವಾಲ್ ನೂತನ ಟೆಸ್ಟ್ ರ್ಯಾಂಕಿಂಗ್​ನಲ್ಲಿ 14 ಸ್ಥಾನ ಮುಂಬಡ್ತಿ ಪಡೆದು, ಪ್ರಸ್ತುತ 15ನೇ ಸ್ಥಾನವನ್ನು ಅಲಂಕರಿಸಿದ್ದಾರೆ.

2 / 9
ಇಂಗ್ಲೆಂಡ್‌ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸತತ ಎರಡನೇ ದ್ವಿಶತಕ ಸಿಡಿಸಿರುವ ಜೈಸ್ವಾಲ್, 699 ರೇಟಿಂಗ್‌ನೊಂದಿಗೆ 15 ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ 29ನೇ ಸ್ಥಾನದಲ್ಲಿದ್ದ ಜೈಸ್ವಾಲ್, ಮೂರನೇ ಟೆಸ್ಟ್​ನಲ್ಲಿ ಸಿಡಿಸಿದ ಅಜೇಯ ಶತಕಕ್ಕೆ ಭರ್ಜರಿ ಬಹುಮಾನ ಪಡೆದಿದ್ದಾರೆ.

3 / 9
ಉಳಿದಂತೆ ಇಂದು ಬಿಡುಗಡೆಯಾಗಿರುವ ಟೆಸ್ಟ್ ರ್ಯಾಂಕಿಂಗ್​ನಲ್ಲಿ ಪ್ರಸ್ತುತ 893 ರೇಟಿಂಗ್ಸ್ ಹೊಂದಿರುವ ನ್ಯೂಜಿಲೆಂಡ್​ನ ಕೇನ್ ವಿಲಿಯಮ್ಸನ್ ಎಂದಿನಂತೆ ಮೊದಲ ಸ್ಥಾನದಲ್ಲಿ ಮುಂದುವರೆದಿದ್ದಾರೆ.

4 / 9
ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 818 ರೇಟಿಂಗ್‌ನೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಒಂದು ಸ್ಥಾನ ಮುಂಬಡ್ತಿ ಪಡೆದಿರುವ ನ್ಯೂಜಿಲೆಂಡ್​ನ ಡೇರೆಲ್ ಮಿಚೆಲ್ ಮೂರನೇ ಸ್ಥಾನದಲ್ಲಿದ್ದರೆ, ನಾಲ್ಕನೇ ಸ್ಥಾನದಲ್ಲಿ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಇದ್ದಾರೆ.

5 / 9
ಟೀಂ ಇಂಡಿಯಾ ವಿರುದ್ಧ ಸತತ ವೈಫಲ್ಯ ಅನುಭವಿಸಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಜೋ ರೂಟ್ ಎರಡು ಸ್ಥಾನ ಕುಸಿತ ಕಂಡಿದ್ದು, 766 ರೇಟಿಂಗ್‌ನೊಂದಿಗೆ ಇದೀಗ 5ನೇ ಸ್ಥಾನಕ್ಕೆ ಜಾರಿದ್ದಾರೆ.

6 / 9
ಆಸ್ಟ್ರೇಲಿಯಾದ ಉಸ್ಮಾನ್ ಖವಾಜಾ 765 ರೇಟಿಂಗ್‌ನೊಂದಿಗೆ 6ನೇ ಸ್ಥಾನದಲ್ಲಿದ್ದರೆ, ತಂದೆಯಾದ ಸಂತಸದಲ್ಲಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಯಾವುದೇ ಟೆಸ್ಟ್ ಪಂದ್ಯವನ್ನು ಆಡದ ಹೊರತಾಗಿಯೂ 752 ರ ರೇಟಿಂಗ್‌ನೊಂದಿಗೆ ಇನ್ನೂ 7 ನೇ ಸ್ಥಾನದಲ್ಲಿ ಮುಂದುವರೆದ್ದಾರೆ.

7 / 9
ಶ್ರೀಲಂಕಾದ ದಮುತ್ ಕರುಣರತ್ನೆ ಒಂದು ಸ್ಥಾನ ಮುಂಬಡ್ತಿ ಪಡೆದು ಇದೀಗ 750 ರೇಟಿಂಗ್‌ನೊಂದಿಗೆ ಎಂಟನೇ ಸ್ಥಾನದಲ್ಲಿದ್ದರೆ, ಹ್ಯಾರಿ ಬ್ರೂಕ್ 9ನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಆಸ್ಟ್ರೇಲಿಯಾದ ಮಾರ್ನಸ್ ಲಬುಶೇನ್ 746 ರೇಟಿಂಗ್‌ನೊಂದಿಗೆ ಹತ್ತನೇ ಸ್ಥಾನದಲ್ಲಿದ್ದಾರೆ.

8 / 9
ಇಂಗ್ಲೆಂಡ್‌ ವಿರುದ್ಧ ರಾಜ್​ಕೋಟ್​ನಲ್ಲಿ ನಡೆದ ಮೂರನೇ ಟೆಸ್ಟ್​ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 732 ರ ರೇಟಿಂಗ್‌ನೊಂದಿಗೆ 12 ನೇ ಸ್ಥಾನದಲ್ಲಿದ್ದಾರೆ. ಮುಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತೊಂದು ದೊಡ್ಡ ಇನ್ನಿಂಗ್ಸ್ ಆಡಿದರೆ ಅಗ್ರ 10 ರೊಳಗೆ ಸ್ಥಾನ ಪಡೆಯುವ ಸಾಧ್ಯತೆಗಳಿವೆ.

9 / 9

Published On - 2:45 pm, Wed, 21 February 24

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?

ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್

8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ