ICC Test Rankings: ಐತಿಹಾಸಿಕ ಕೇಪ್ಟೌನ್ ಟೆಸ್ಟ್ ಗೆದ್ದರೂ ನಂ.1 ಪಟ್ಟದಿಂದ ಕೆಳಗಿಳಿದ ಭಾರತ..!
ICC Test Rankings: ಆಫ್ರಿಕಾ ಪ್ರವಾಸದಲ್ಲಿ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1 ರಿಂದ ಡ್ರಾ ಮಾಡಿಕೊಂಡು ಕ್ರಿಕೆಟ್ನ ಮೂರು ಮಾದರಿಯಲ್ಲೂ ನಂಬರ್ 1 ಸ್ಥಾನವನ್ನು ಅಲಂಕರಿಸಿದ್ದ ಟೀಂ ಇಂಡಿಯಾ ಇದೀಗ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ತನ್ನ ಅಗ್ರಸ್ಥಾನವನ್ನು ಕಳೆದುಕೊಂಡಿದೆ.
1 / 8
ಆಫ್ರಿಕಾ ಪ್ರವಾಸದಲ್ಲಿ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1 ರಿಂದ ಡ್ರಾ ಮಾಡಿಕೊಂಡು ಕ್ರಿಕೆಟ್ನ ಮೂರು ಮಾದರಿಯಲ್ಲೂ ನಂಬರ್ 1 ಸ್ಥಾನವನ್ನು ಅಲಂಕರಿಸಿದ್ದ ಟೀಂ ಇಂಡಿಯಾ ಇದೀಗ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ತನ್ನ ಅಗ್ರಸ್ಥಾನವನ್ನು ಕಳೆದುಕೊಂಡಿದೆ.
2 / 8
ವಾಸ್ತವವಾಗಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಕೇಪ್ಟೌನ್ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ವಿಕೆಟ್‌ಗಳಿಂದ ಸೋಲಿಸಿದ್ದ ಭಾರತ ಆಫ್ರಿಕಾ ನೆಲದಲ್ಲಿ ಐತಿಹಾಸಿಕ ಸಾಧನೆ ಮಾಡಿತ್ತು. ಆದರೀಗ ಕೇವಲ ಒಂದೇ ದಿನದಲ್ಲಿ ತನ್ನ ನಂಬರ್ 1 ಸ್ಥಾನವನ್ನು ಆಸ್ಟ್ರೇಲಿಯಾಕ್ಕೆ ಬಿಟ್ಟುಕೊಟ್ಟಿದೆ.
3 / 8
ಒಂದೆಡೆ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ ಡ್ರಾದಲ್ಲಿ ಅಂತ್ಯಗೊಳಿಸಿದರೆ, ಮತ್ತೊಂದೆಡೆ ಪಾಕಿಸ್ತಾನ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಅಜೇಯ 2-0 ಮುನ್ನಡೆ ಸಾಧಿಸಿದೆ. ಇದರೊಂದಿಗೆ ವಿಶ್ವದ ನಂಬರ್ ಒನ್ ಟೆಸ್ಟ್ ತಂಡ ಎನಿಸಿಕೊಂಡಿದ್ದು, ಟೀಂ ಇಂಡಿಯಾ ಎರಡನೇ ಸ್ಥಾನಕ್ಕೆ ಕುಸಿದಿದೆ.
4 / 8
ಪ್ಯಾಟ್ ಕಮ್ಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ಸಿಡ್ನಿಯಲ್ಲಿ ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯವನ್ನು ಆಡುತ್ತಿದೆ. ಈ ತಂಡವು ಈಗಾಗಲೇ ಈ ಸರಣಿಯ ಎರಡು ಪಂದ್ಯಗಳನ್ನು ಗೆದ್ದಿದೆ ಮತ್ತು ಮೂರನೇ ಪಂದ್ಯದ ಫಲಿತಾಂಶ ಇನ್ನೂ ಬರಬೇಕಿದೆ, ಆದರೆ ಅದಕ್ಕೂ ಮೊದಲು ಈ ತಂಡವು ನಂಬರ್ ಒನ್ ಟೆಸ್ಟ್ ತಂಡವಾಗಿ ಹೊರಹೊಮ್ಮಿದೆ.
5 / 8
ವಾಸ್ತವವಾಗಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಟೆಸ್ಟ್ ಅಂಕಗಳ ನಡುವೆ ಹೆಚ್ಚಿನ ವ್ಯತ್ಯಾಸವಿಲ್ಲ. ಸದ್ಯ ಕಾಂಗರೂ ತಂಡ 118 ಅಂಕ ಹೊಂದಿದ್ದರೆ ಭಾರತ 117 ಅಂಕ ಹೊಂದಿದೆ.
6 / 8
ಇತ್ತೀಚಿನ ಟೆಸ್ಟ್ ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡವು ಪ್ರಸ್ತುತ ಒಟ್ಟು 115 ಅಂಕಗಳನ್ನು ಹೊಂದಿದ್ದರೆ, ನಾಲ್ಕನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ತಂಡವು 106 ಅಂಕಗಳನ್ನು ಹೊಂದಿದೆ. ನ್ಯೂಜಿಲೆಂಡ್ ತಂಡ 95 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ.
7 / 8
ಆಸ್ಟ್ರೇಲಿಯಾ ವಿರುದ್ಧ ಆಡಿರುವ ಎರಡೂ ಟೆಸ್ಟ್ ಪಂದ್ಯಗಳನ್ನು ಸೋತಿರುವ ಪಾಕಿಸ್ತಾನ ತಂಡ 92 ಅಂಕಗಳೊಂದಿಗೆ ರ್ಯಾಂಕಿಂಗ್‌ನಲ್ಲಿ ಆರನೇ ಸ್ಥಾನದಲ್ಲಿದೆ.
8 / 8
ಸದ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಆಡಿ ಮುಗಿಸಿರುವ ಭಾರತ ಈಗ ತಾಯ್ನಾಡಿನಲ್ಲಿ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಟಿ 20 ಸರಣಿಯನ್ನು ಆಡಬೇಕಾಗಿದೆ. ಆ ಬಳಿಕ ತವರಿನಲ್ಲೇ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಬೇಕಾಗಿದೆ. ಈ ಸರಣಿಯಲ್ಲಿ ಆಂಗ್ಲರನ್ನು ಮಣಿಸುವಲ್ಲಿ ಭಾರತ ಯಶಸ್ವಿಯಾದರೆ ಮತ್ತೊಮ್ಮೆ ನಂಬರ್ 1 ಪಟ್ಟಕ್ಕೇರಲಿದೆ.