Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ರ‍್ಯಾಂಕಿಂಗ್ ಪ್ರಕಟ: 27 ತಿಂಗಳಲ್ಲೇ ಅಗ್ರಸ್ಥಾನ ಅಲಂಕರಿಸಿದ ಹ್ಯಾರಿ ಬ್ರೂಕ್

ICC Test Rankings: ಹ್ಯಾರಿ ಬ್ರೂಕ್ ಇಂಗ್ಲೆಂಡ್ ಪರ ಈವರೆಗೆ 38 ಟೆಸ್ಟ್ ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ 8 ಭರ್ಜರಿ ಶತಕಗಳು ಹಾಗೂ 10 ಅರ್ಧಶತಕಗಳು ಮೂಡಿಬಂದಿವೆ. ಈ ಮೂಲಕ 61.62 ಸರಾಸರಿಯಲ್ಲಿ ರನ್ ಕಲೆಹಾಕಿರುವ 25 ವರ್ಷದ ಹ್ಯಾರಿ ಬ್ರೂಕ್ ಇದೀಗ ವಿಶ್ವದ ನಂಬರ್ 1 ಟೆಸ್ಟ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:Dec 11, 2024 | 2:47 PM

ಐಸಿಸಿ ಟೆಸ್ಟ್ ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ದಿಗ್ಗಜರನ್ನೇ ಹಿಂದಿಕ್ಕಿ ಇಂಗ್ಲೆಂಡ್ ತಂಡದ ಯುವ ದಾಂಡಿಗ ಹ್ಯಾರಿ ಬ್ರೂಕ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅದು ಕೂಡ ಕೇವಲ 27 ತಿಂಗಳಲ್ಲಿ ಎಂಬುದು ವಿಶೇಷ.

1 / 7
ಅಂದರೆ 2022 ರಲ್ಲಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಹ್ಯಾರಿ ಬ್ರೂಕ್ ಕೇವಲ 23 ಪಂದ್ಯಗಳ ಮೂಲಕ 2280 ರನ್ ಗಳಿಸಿದ್ದಾರೆ. ಈ ವೇಳೆ 8 ಶತಕ ಹಾಗೂ 10 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಭರ್ಜರಿ ಪ್ರದರ್ಶನದೊಂದಿಗೆ 898 ಅಂಕಗಳನ್ನು ಕಲೆಹಾಕಿರುವ ಬ್ರೂಕ್ ಟೆಸ್ಟ್ ಕ್ರಿಕೆಟ್​ನ ನಂಬರ್ 1 ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 7
ಇನ್ನು ಈ ಪಟ್ಟಿಯಲ್ಲಿ ಇಂಗ್ಲೆಂಡ್​ನ ಜೋ ರೂಟ್ ದ್ವಿತೀಯ ಸ್ಥಾನದಲ್ಲಿದ್ದು, ಒಟ್ಟು 897 ಅಂಕಗಳನ್ನು ಪಡೆದಿದ್ದಾರೆ. ಹಾಗೆಯೇ 812 ಅಂಕಗಳನ್ನು ಹೊಂದಿರುವ ನ್ಯೂಝಿಲೆಂಡ್ ತಂಡದ ಕೇನ್ ವಿಲಿಯಮ್ಸನ್ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

3 / 7
4ನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದಾರೆ. ಒಟ್ಟು 811 ಅಂಕಗಳನ್ನು ಹೊಂದಿರುವ ಜೈಸ್ವಾಲ್, ಟಾಪ್-5 ನಲ್ಲಿ ಕಾಣಿಸಿಕೊಂಡ ಏಕೈಕ ಭಾರತೀಯ ಬ್ಯಾಟ್ಸ್​ಮನ್ ಎಂಬುದು ವಿಶೇಷ.

4 / 7
ಇನ್ನು ಅಡಿಲೇಡ್​ ಟೆಸ್ಟ್​​ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ಟ್ರಾವಿಸ್ ಹೆಡ್ ಈ ಬಾರಿ 6 ಸ್ಥಾನ ಮೇಲೇರಿದ್ದಾರೆ. ಅದರಂತೆ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ 781 ಅಂಕಗಳೊಂದಿಗೆ 5ನೇ ಸ್ಥಾನ ಅಲಂಕರಿಸಿದ್ದಾರೆ.

5 / 7
ಆರನೇ ಸ್ಥಾನದಲ್ಲಿ ಶ್ರೀಲಂಕಾದ ಕಮಿಂದು ಮೆಂಡಿಸ್ (759) ಇದ್ದರೆ, ಏಳನೇ ಸ್ಥಾನದಲ್ಲಿ ಸೌತ್ ಆಫ್ರಿಕಾದ ಟೆಂಬಾ ಬವುಮಾ (753) ಕಾಣಿಸಿಕೊಂಡಿದ್ದಾರೆ. ಇನ್ನು ನ್ಯೂಝಿಲೆಂಡ್​​ನ ಡೇರಿಲ್ ಮಿಚೆಲ್ (729) ಎಂಟನೇ ಸ್ಥಾನದಲ್ಲಿದ್ದಾರೆ.

6 / 7
ಒಂಬತ್ತನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕಾಣಿಸಿಕೊಂಡಿದ್ದಾರೆ. ಒಟ್ಟು 724 ಅಂಕಗಳನ್ನು ಹೊಂದಿರುವ ಪಂತ್ ಟಾಪ್-10 ನಲ್ಲಿ ಕಾಣಿಸಿಕೊಂಡ ಎರಡನೇ ಭಾರತೀಯ ಆಟಗಾರ. ಇನ್ನು ಹತ್ತನೇ ಸ್ಥಾನ ಅಲಂಕರಿಸುವಲ್ಲಿ ಪಾಕಿಸ್ತಾನದ ಸೌದ್ ಶಕೀಲ್ (724) ಯಶಸ್ವಿಯಾಗಿದ್ದಾರೆ.

7 / 7

Published On - 2:41 pm, Wed, 11 December 24

Follow us
ಸಾಲ ಮಾಡಿದ್ದೇನೆ, ಎಲ್ಲ ಅಡ ಇಟ್ಟಿದ್ದೇನೆ: ಪರಿಸ್ಥಿತಿ ತಿಳಿಸಿದ ಅಜಯ್ ರಾವ್

ಜಿಲ್ಲಾಧಿಕಾರಿ ಕಚೇರಿಯೆದುರು ನಮಾಜ್ ಮಾಡಿದ ವೃದ್ಧೆ; ಸೆಕ್ಯುರಿಟಿ ಸಸ್ಪೆಂಡ್

ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ

ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ

‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು

ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ

ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು

ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ

ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ