ICC Rankings: ನಂ.1 ಸ್ಥಾನಕ್ಕೇರಲು ಜೈಸ್ವಾಲ್ ಸನಿಹ; ಬರೋಬ್ಬರಿ 9 ಸ್ಥಾನ ಮೇಲೇರಿದ ಕಿಂಗ್ ಕೊಹ್ಲಿ..!

ICC Rankings: ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಗೆಲುವಿನೊಂದಿಗೆ, ಯಶಸ್ವಿ ಜೈಸ್ವಾಲ್ ಮತ್ತು ವಿರಾಟ್ ಕೊಹ್ಲಿ ಅವರು ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಗಮನಾರ್ಹ ಏರಿಕೆ ಕಂಡಿದ್ದಾರೆ. ಪರ್ತ್ ಟೆಸ್ಟ್‌ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಜೈಸ್ವಾಲ್ 2ನೇ ಸ್ಥಾನಕ್ಕೆ ಏರಿದರೆ, ಕೊಹ್ಲಿ 9 ಸ್ಥಾನಗಳ ಏರಿಕೆಯೊಂದಿಗೆ 13ನೇ ಸ್ಥಾನಕ್ಕೆ ತಲುಪಿದ್ದಾರೆ.

ಪೃಥ್ವಿಶಂಕರ
|

Updated on: Nov 27, 2024 | 3:59 PM

ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಮೊದಲ ಟೆಸ್ಟ್ ಪಂದ್ಯವನ್ನು ಗೆಲ್ಲುವುದರೊಂದಿಗೆ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇದರ ಜೊತೆಗೆ ಪರ್ತ್​ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ತಮ್ಮ ಬ್ಯಾಟ್‌ನಿಂದ ಸಂಚಲನ ಮೂಡಿಸಿದ್ದ ಯಶಸ್ವಿ ಜೈಸ್ವಾಲ್ ಹಾಗೂ ವಿರಾಟ್ ಕೊಹ್ಲಿ ಐಸಿಸಿ ಪ್ರಕಟಿಸಿರುವ ನೂತನ ಟೆಸ್ಟ್ ಶ್ರೇಯಾಂಕದಲ್ಲಿ ಭರ್ಜರಿ ಮುಂಬಡ್ತಿ ಪಡೆದಿದ್ದಾರೆ.

1 / 6
ಪರ್ತ್​ ಟೆಸ್​ನ ಎರಡನೇ ಇನ್ನಿಂಗ್ಸ್​ನಲ್ಲಿ 161 ರನ್​ಗಳ ಇನ್ನಿಂಗ್ಸ್ ಆಡಿದ್ದ ಯಶಸ್ವಿ ತಮ್ಮ ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕವನ್ನು ಸಾಧಿಸಿದ್ದು, ಇದೀಗ 2ನೇ ಸ್ಥಾನಕ್ಕೆ ತಲುಪಿದ್ದಾರೆ. ಈ ಟೆಸ್ಟ್​ಗೂ ಮುನ್ನ ನಾಲ್ಕನೇ ಸ್ಥಾನದಲ್ಲಿದ್ದ ಯಶಸ್ವಿ, ಕೇನ್ ವಿಲಿಯಮ್ಸನ್ ಮತ್ತು ಹ್ಯಾರಿ ಬ್ರೂಕ್ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

2 / 6
ಪರ್ತ್ ಟೆಸ್ಟ್‌ನಲ್ಲಿ ಯಶಸ್ವಿ ಜೈಸ್ವಾಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟಾಗಿದ್ದ ಜೈಸ್ವಾಲ್, ಎರಡನೇ ಇನ್ನಿಂಗ್ಸ್‌ನಲ್ಲಿ ಈ ಆಟಗಾರ 161 ರನ್ ಗಳಿಸಿದರು. ಆಸ್ಟ್ರೇಲಿಯಾದಲ್ಲಿ ಮೊದಲ ಬಾರಿಗೆ ಟೆಸ್ಟ್ ಆಡುತ್ತಿರುವ ಯಶಸ್ವಿ ಜೈಸ್ವಾಲ್, ಪರ್ತ್‌ನಲ್ಲಿ ನೀಡಿದ ಪ್ರದರ್ಶನ ವಿಶ್ವ ಕ್ರಿಕೆಟ್​ನಲ್ಲಿ ಸಾಕಷ್ಟು ಮನ್ನಣೆ ಪಡೆಯುತ್ತಿದೆ.

3 / 6
ಅಲ್ಲದೆ 2023-25 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನಲ್ಲಿಭಾರತದಿಂದ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆಯೂ ಯಶಸ್ವಿ ಪಾಲಾಗಿದೆ. ಇದುವರೆಗೆ 15 ಪಂದ್ಯಗಳನ್ನಾಡಿರುವ ಜೈಸ್ವಾಲ್, 8 ಅರ್ಧ ಶತಕ ಮತ್ತು 4 ಶತಕಗಳೊಂದಿಗೆ 1568 ರನ್ ಗಳಿಸಿದ್ದಾರೆ. ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಗರಿಷ್ಠ 38 ಸಿಕ್ಸರ್‌ಗಳನ್ನು ಬಾರಿಸಿರುವ ಜೈಸ್ವಾಲ್ ಅಧಿಕ ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

4 / 6
ಮತ್ತೊಂದೆಡೆ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ವಿರಾಟ್ ಕೊಹ್ಲಿ ಕೂಡ ಭಾರೀ ಸಾಧನೆ ಮಾಡಿದ್ದಾರೆ. ವಿರಾಟ್ ಕೊಹ್ಲಿ ಕೂಡ ಬರೋಬ್ಬರು 9 ಸ್ಥಾನಗಳ ಮುಂಬಡ್ತಿ ಪಡೆಯುವ ಮೂಲಕ 13 ನೇ ಸ್ಥಾನಕ್ಕೆ ತಲುಪಿದ್ದಾರೆ. ಈ ವೇಳೆ ವಿರಾಟ್ ಶುಭ್‌ಮನ್ ಗಿಲ್, ಮೊಹಮ್ಮದ್ ರಿಜ್ವಾನ್, ಮಾರ್ನಸ್ ಲಬುಶೇನ್ ಅವರಂತಹ ಆಟಗಾರರನ್ನು ಹಿಂದಿಕ್ಕಿದ್ದಾರೆ. ಪರ್ತ್ ಟೆಸ್ಟ್ ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ಕೊಹ್ಲಿಗೆ ಐಸಿಸಿ ಬಂಪರ್ ಗಿಫ್ಟ್ ನೀಡಿದೆ.

5 / 6
ಪರ್ತ್​ ಟೆಸ್ಟ್​ನ ಎರಡನೇ ಇನ್ನಿಂಗ್ಸ್‌ನಲ್ಲಿ 100 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ್ದ ಕೊಹ್ಲಿ, ಇದು ಅವರ ಟೆಸ್ಟ್ ವೃತ್ತಿಜೀವನದ 30 ನೇ ಶತಕವಾಗಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಇನ್ನೂ 4 ಟೆಸ್ಟ್ ಪಂದ್ಯಗಳನ್ನು ಆಡಬೇಕಿರುವ ಕಾರಣ ವಿರಾಟ್ ಅವರ ಶ್ರೇಯಾಂಕವನ್ನು ಸುಧಾರಿಸಲು ಇನ್ನೂ ಅವಕಾಶವಿದೆ.

6 / 6
Follow us
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ