ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನೂತನ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕ ಪಟ್ಟಿಯನ್ನು (ICC Test Rankings) ಪ್ರಕಟಿಸಿದೆ. ಭಾರತ-ಇಂಗ್ಲೆಂಡ್ (India vs England) ನಡುವಣ 3ನೇ ಟೆಸ್ಟ್ ಫಲಿತಾಂಶದ ಬೆನ್ನಲ್ಲೇ ಹೊಸ ಟೆಸ್ಟ್ ಬ್ಯಾಟಿಂಗ್ ಪಟ್ಟಿ ಪ್ರಕಟಗೊಂಡಿರುವುದು ಈ ಬಾರಿಯ ವಿಶೇಷ.
ಇನ್ನು ಕಳೆದ ಬಾರಿ ಕೂಡ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಈ ಸಲ 891 ಅಂಕ ಪಡೆದು ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.
ಟೀಮ್ ಇಂಡಿಯಾ ವಿರುದ್ದ ಭರ್ಜರಿ ಶತಕ ಸಿಡಿಸಿದ್ದ ಇಂಗ್ಲೆಂಡ್ ನಾಯಕ ಜೋ ರೂಟ್ ಈ ಬಾರಿ ಅಗ್ರಸ್ಥಾನ ಅಲಂಕರಿಸಿದ್ದು, ಅದರಂತೆ 916 ಅಂಕಗಳೊಂದಿಗೆ ಪ್ರಥಮ ಸ್ಥಾನಕ್ಕೇರಿದ್ದಾರೆ.
ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ 891 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ಮತ್ತೋರ್ವ ಆಸೀಸ್ ಬ್ಯಾಟ್ಸ್ಮನ್ ಮಾರ್ನಸ್ ಲಾಬುಶೇನ್ 878 ಅಂಕಗಳೊಂದಿಗೆ 4ನೇ ಸ್ಥಾನ ಅಂಕರಿಸಿದ್ದಾರೆ.
ಕಳೆದ ಸಲ 5ನೇ ಸ್ಥಾನದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 10 ಅಂಕಗಳನ್ನು ಕಳೆದುಕೊಂಡಿದ್ದು, ಅದರಂತೆ 766 ಅಂಕಗಳೊಂದಿಗೆ 6ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಹೀಗಾಗಿ ಇನ್ನೆರಡು ದಿನಗಳಲ್ಲಿ ಹಿಟ್ಮ್ಯಾನ್ ಚೇತರಿಸಿಕೊಂಡರೆ ಮಾತ್ರ ಫೈನಲ್ ಟೆಸ್ಟ್ ಪಂದ್ಯವನ್ನಾಡಲಿದ್ದಾರೆ. ಒಂದು ವೇಳೆ ರೋಹಿತ್ ಶರ್ಮಾ ಅಂತಿಮ ಟೆಸ್ಟ್ಗೆ ಅಲಭ್ಯರಾದರೆ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಒಟ್ಟಿನಲ್ಲಿ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಡ್ರಾ ಸಾಧಿಸಿದರೂ ಸರಣಿ ಭಾರತ ಪಾಲಾಗಲಿದೆ. ಈ ಮೂಲಕ ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿ ಜಯಿಸುವ ವಿಶ್ವಾಸದಲ್ಲಿದೆ ಭಾರತ ತಂಡ.
7ನೇ ಸ್ಥಾನದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಇದ್ದಾರೆ. ಪಂತ್ ಈ ಬಾರಿ 736 ಅಂಕ ಪಡೆದುಕೊಂಡಿದ್ದಾರೆ.
7ನೇ ಸ್ಥಾನದಲ್ಲಿ 749 ಅಂಕಗಳೊಂದಿಗೆ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ ಇದ್ದಾರೆ.
8ನೇ ಸ್ಥಾನವನ್ನು 724 ಅಂಕ ಪಡೆದಿರುವ ಆಸ್ಟ್ರೇಲಿಯಾ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅಲಂಕರಿಸಿದ್ದಾರೆ.
9ನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ ತಂಡದ ಆರಂಭಿಕ ಬ್ಯಾಟ್ಸ್ಮನ್ ಕ್ವಿಂಟನ್ ಡಿ ಕಾಕ್ ಇದ್ದು, ಎಡಗೈ ದಾಂಡಿಗ ಒಟ್ಟು 717 ಅಂಕಗಳಿಸಿದ್ದಾರೆ.