ICC Rankings: 1965ರ ನಂತರ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಪಾತಾಳಕ್ಕೆ ಕುಸಿದ ಪಾಕಿಸ್ತಾನ ತಂಡ
ICC Rankings: ಐಸಿಸಿ, ನೂತನ ಟೆಸ್ಟ್ ರ್ಯಾಂಕಿಂಗ್ ಪ್ರಕಟಿಸಿದ್ದು, ಬಾಂಗ್ಲಾದೇಶ ವಿರುದ್ಧ ತವರಿನಲ್ಲೇ 2-0 ಅಂತರದ ಹೀನಾಯ ಸೋಲು ಅನುಭವಿಸಿರುವ ಪಾಕಿಸ್ತಾನ ತಂಡ ಭಾರಿ ಹಿನ್ನಡೆ ಅನುಭವಿಸಿದೆ. ತವರಿನಲ್ಲಿ ಬಾಂಗ್ಲಾದೇಶ ತಂಡವನ್ನು ಸುಲಭವಾಗಿ ಮಣಿಸುವ ಇರಾದೆಯಲ್ಲಿದ್ದ ಪಾಕ್ ತಂಡಕ್ಕೆ ಸರಣಿ ಸೋಲಿನ ಶಾಕ್ ಒಂದೆಡೆಯಾದರೆ, ಇನ್ನೊಂದೆಡೆ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ 8ನೇ ಸ್ಥಾನಕ್ಕೆ ಕುಸಿದಿದೆ.
1 / 6
ಐಸಿಸಿ, ನೂತನ ಟೆಸ್ಟ್ ರ್ಯಾಂಕಿಂಗ್ ಪ್ರಕಟಿಸಿದ್ದು, ಬಾಂಗ್ಲಾದೇಶ ವಿರುದ್ಧ ತವರಿನಲ್ಲೇ 2-0 ಅಂತರದ ಹೀನಾಯ ಸೋಲು ಅನುಭವಿಸಿರುವ ಪಾಕಿಸ್ತಾನ ತಂಡ ಭಾರಿ ಹಿನ್ನಡೆ ಅನುಭವಿಸಿದೆ. ತವರಿನಲ್ಲಿ ಬಾಂಗ್ಲಾದೇಶ ತಂಡವನ್ನು ಸುಲಭವಾಗಿ ಮಣಿಸುವ ಇರಾದೆಯಲ್ಲಿದ್ದ ಪಾಕ್ ತಂಡಕ್ಕೆ ಸರಣಿ ಸೋಲಿನ ಶಾಕ್ ಒಂದೆಡೆಯಾದರೆ, ಇನ್ನೊಂದೆಡೆ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ 8ನೇ ಸ್ಥಾನಕ್ಕೆ ಕುಸಿದಿದೆ.
2 / 6
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿ ಸೋಲಿನ ನಂತರ ಇದೀಗ ಪಾಕಿಸ್ತಾನ ರ‍್ಯಾಂಕಿಂಗ್‌ನಲ್ಲಿ ಎರಡು ಸ್ಥಾನ ಕೆಳಕ್ಕೆ ಜಾರಿದ್ದು, ಎಂಟನೇ ಸ್ಥಾನಕ್ಕೆ ತಲುಪಿದೆ. ಬಾಂಗ್ಲಾದೇಶದೊಂದಿಗಿನ ಟೆಸ್ಟ್ ಸರಣಿಗೂ ಮೊದಲು, ಪಾಕಿಸ್ತಾನ ತಂಡವು ಶ್ರೇಯಾಂಕದಲ್ಲಿ ಆರನೇ ಸ್ಥಾನದಲ್ಲಿತ್ತು. ಆದರೆ ಈ ಸರಣಿಯಲ್ಲಿ ತಂಡ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರಿಂದ ತಂಡ ರ‍್ಯಾಂಕಿಂಗ್‌ನಲ್ಲೂ ಕುಸಿತಕಂಡಿದೆ.
3 / 6
ಇದೀಗ ರ‍್ಯಾಂಕಿಂಗ್‌ನಲ್ಲಿ 8ನೇ ಸ್ಥಾನ ಪಡೆಯುವ ಮೂಲಕ ಪಾಕಿಸ್ತಾನ ತಂಡ 1965 ರ ನಂತರ ಈ ಕಳಪೆ ಸಾಧನೆಗೆ ಕೊರಳೊಡ್ಡಿದೆ. ಅಂದರೆ 1965ರ ನಂತರ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಪಾಕಿಸ್ತಾನ ತಂಡ ಇಷ್ಟೊಂದು ಕೆಟ್ಟ ಸ್ಥಿತಿಯಲ್ಲಿರುವುದು ಇದೇ ಮೊದಲು. ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಪಾಕಿಸ್ತಾನ ತಂಡ ಈಗ ವೆಸ್ಟ್ ಇಂಡೀಸ್‌ಗಿಂತ ಕೆಳಕ್ಕೆ ಕುಸಿದಿದೆ.
4 / 6
76 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಪಾಕಿಸ್ತಾನ ತಂಡ ಇದೀಗ 8ನೇ ಸ್ಥಾನದಲ್ಲಿದ್ದರೆ, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಲಾಭ ಪಡೆದಿವೆ. ಶ್ರೀಲಂಕಾ ತಂಡ ಆರನೇ ಸ್ಥಾನಕ್ಕೆ ಹಾಗೂ ವೆಸ್ಟ್ ಇಂಡೀಸ್ ತಂಡ ಏಳನೇ ಸ್ಥಾನಕ್ಕೆ ಬಡ್ತಿ ಪಡೆದುಕೊಂಡಿವೆ.
5 / 6
ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಪಾಕಿಸ್ತಾನ ಪ್ರವಾಸ ಮಾಡಿದ್ದ ಬಾಂಗ್ಲಾದೇಶ ತಂಡ ಮೊದಲ ಟೆಸ್ಟ್‌ನಲ್ಲಿ ಪಾಕಿಸ್ತಾನ ತಂಡವನ್ನು 10 ವಿಕೆಟ್‌ಗಳಿಂದ ಮಣಿಸಿದರೆ, ಎರಡನೇ ಪಂದ್ಯವನ್ನು 6 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಎರಡೂ ಪಂದ್ಯಗಳಲ್ಲಿ ಪಾಕಿಸ್ತಾನದ ಬ್ಯಾಟಿಂಗ್ ಮತ್ತು ಬೌಲಿಂಗ್ ತೀರ ಕಳಪೆಯಾಗಿತ್ತು.
6 / 6
ಪಾಕಿಸ್ತಾನವನ್ನು ಅವರದ್ದೇ ನೆಲದಲ್ಲಿ ಸೋಲಿಸಿ ದಾಖಲೆ ನಿರ್ಮಿಸಿರುವ ಬಾಂಗ್ಲಾದೇಶ ತಂಡ 66 ರೇಟಿಂಗ್ ಅಂಕಗಳೊಂದಿಗೆ ಪ್ರಸ್ತುತ 9 ನೇ ಸ್ಥಾನದಲ್ಲಿದೆ. ಸದ್ಯ 124 ಅಂಕಗಳೊಂದಿಗೆ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದ್ದು, 120 ಅಂಕಗಳೊಂದಿಗೆ ಟೀಂ ಇಂಡಿಯಾ ಎರಡನೇ ಸ್ಥಾನದಲ್ಲಿದೆ.