AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test rankings: ಟೆಸ್ಟ್ ರ‍್ಯಾಂಕಿಂಗ್​ನಲ್ಲಿ ಅಶ್ವಿನ್​- ಅಯ್ಯರ್​ಗೆ ಭರ್ಜರಿ ಮುಂಬಡ್ತಿ; ಜಾರಿದ ಪೂಜಾರ- ಕೊಹ್ಲಿ!

ICC Test rankings: ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದ ಚೇತೇಶ್ವರ ಪೂಜಾರ ತನ್ನ ಶ್ರೇಯಾಂಕದಲ್ಲಿ ಮೂರು ಸ್ಥಾನ ಕುಸಿದು 19ನೇ ಸ್ಥಾನಕ್ಕೆ ತಲುಪಿದರೆ, ವಿರಾಟ್ ಕೊಹ್ಲಿ ಎರಡು ಸ್ಥಾನ ಕುಸಿದು 14ನೇ ಸ್ಥಾನಕ್ಕೆ ತಲುಪಿದ್ದಾರೆ.

TV9 Web
| Edited By: |

Updated on: Dec 28, 2022 | 5:54 PM

Share
ಐಸಿಸಿ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದ್ದು ಅದರಲ್ಲಿ ಟೀಂ ಇಂಡಿಯಾದ ಆರ್ ಅಶ್ವಿನ್ ಮತ್ತು ಶ್ರೇಯಸ್ ಅಯ್ಯರ್ ಭರ್ಜರಿ ಮುಂಬಡ್ತಿ ಪಡೆದಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವಲ್ಲಿ, ಅದರಲ್ಲೂ ಎರಡನೇ ಟೆಸ್ಟ್‌ ಗೆಲುವಲ್ಲಿ ಈ ಇಬ್ಬರ ಆಟವೇ ನಿರ್ಣಾಯಕವಾಗಿತ್ತು.

1 / 5
ಮೀರ್​ಪುರದಲ್ಲಿ ನಡೆದ ಎರಡನೇ ಟೆಸ್ಟ್​ ಪಂದ್ಯದಲ್ಲಿ ಆರು ವಿಕೆಟ್ ಪಡೆದಿದ್ದ ಅಶ್ವಿನ್, ಟೆಸ್ಟ್ ಶ್ರೇಯಾಂಕದಲ್ಲಿ ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಬೌಲರ್‌ಗಳ ವಿಭಾಗದಲ್ಲಿ ಜಂಟಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಹಾಗೆಯೇ ಅದೇ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ 42 ರನ್​ಗಳ ಅಜೇಯ ಇನ್ನಿಂಗ್ಸ್ ಆಡಿದ್ದ ಅಶ್ವಿನ್, ಬ್ಯಾಟ್ಸ್​ಮನ್​ಗಳ ಶ್ರೇಯಾಂಕದಲ್ಲೂ ಲಾಭ ಗಳಿಸಿದ್ದು, ಮೂರು ಸ್ಥಾನಗಳ ಏರಿಕೆಯೊಂದಿಗೆ 84 ನೇ ಸ್ಥಾನವನ್ನು ತಲುಪಿದ್ದಾರೆ.

2 / 5
ಅಶ್ವಿನ್ ಅವರೊಂದಿಗೆ ಮುರಿಯದ 71 ರನ್ ಜೊತೆಯಾಟವನ್ನು ಹಂಚಿಕೊಂಡ ಅಯ್ಯರ್ ಅವರು ವೃತ್ತಿಜೀವನದ ಅತ್ಯುತ್ತಮ 16 ನೇ ಶ್ರೇಯಾಂಕವನ್ನು ತಲುಪಿದ್ದಾರೆ. ಮೊದಲ ಟೆಸ್ಟ್‌ನಲ್ಲಿ 86 ರನ್‌ಗಳ ಮಹತ್ವದ ಇನ್ನಿಂಗ್ಸ್ ಆಡಿದ್ದ ಅಯ್ಯರ್ ಈ ವರ್ಷ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆಯನ್ನೂ ಬರೆದಿದ್ದಾರೆ..

3 / 5
ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದ ಚೇತೇಶ್ವರ ಪೂಜಾರ ತನ್ನ ಶ್ರೇಯಾಂಕದಲ್ಲಿ ಮೂರು ಸ್ಥಾನ ಕುಸಿದು 19ನೇ ಸ್ಥಾನಕ್ಕೆ ತಲುಪಿದರೆ, ವಿರಾಟ್ ಕೊಹ್ಲಿ ಎರಡು ಸ್ಥಾನ ಕುಸಿದು 14ನೇ ಸ್ಥಾನಕ್ಕೆ ತಲುಪಿದ್ದಾರೆ. ಈ ಇಬ್ಬರನ್ನೂ ಹೊರತುಪಡಿಸಿದರೆ ಬ್ಯಾಟ್ಸ್‌ಮನ್‌ಗಳಲ್ಲಿ ರಿಷಬ್ ಪಂತ್ ಆರನೇ ಸ್ಥಾನದಲ್ಲಿದ್ದರೆ, ಬೌಲರ್‌ಗಳಲ್ಲಿ ಉಮೇಶ್ ಯಾದವ್ 33 ನೇ ಸ್ಥಾನದಲ್ಲಿದ್ದಾರೆ.

4 / 5
ಬಾಂಗ್ಲಾದೇಶದ ಬ್ಯಾಟ್ಸ್‌ಮನ್ ಲಿಟನ್ ದಾಸ್ ಅವರು ವೃತ್ತಿಜೀವನದ ಅತ್ಯುತ್ತಮ 12 ನೇ ಶ್ರೇಯಾಂಕವನ್ನು ತಲುಪಿದ್ದರೆ, ಮೊಮಿನುಲ್ ಹಕ್ 68 ನೇ, ಜಾಕಿರ್ ಹಸನ್ 70 ನೇ ಮತ್ತು ನೂರುಲ್ ಹಸನ್ 93 ನೇ ಸ್ಥಾನದಲ್ಲಿದ್ದಾರೆ. ಸ್ಪಿನ್ನರ್‌ಗಳಾದ ತೈಜುಲ್ ಇಸ್ಲಾಂ ಮತ್ತು ಮೆಹದಿ ಹಸನ್ ಮಿರಾಜ್ ತಲಾ ಎರಡು ಸ್ಥಾನಗಳನ್ನು ಹೆಚ್ಚಿಸಿಕೊಂಡು 28 ಮತ್ತು 29ನೇ ಸ್ಥಾನದಲ್ಲಿದ್ದಾರೆ.

5 / 5
TV9 Web
TV9 Web

TV9 Kannada

Read More
Follow Us
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು

‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ

ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು

ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?

ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ

ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ

ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್