ICC Test rankings: ನೂತನ ಟೆಸ್ಟ್‌ ರ‍್ಯಾಂಕಿಂಗ್‌ ಪ್ರಕಟ; ಬೌಲಿಂಗ್ ವಿಭಾಗದಲ್ಲಿ ಭಾರತೀಯರದ್ದೇ ಪಾರುಪತ್ಯ

ICC Test rankings: ಐಸಿಸಿ ನೂತನ ಟೆಸ್ಟ್ ಕ್ರಿಕೆಟ್‌ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ವೆಸ್ಟ್ ಇಂಡೀಸ್​ನ ಜೇಡನ್ ಸೀಲ್ಸ್ ಮತ್ತು ಜೇಸನ್ ಹೋಲ್ಡರ್ ಭರ್ಜರಿ ಲಾಭ ಗಳಿಸಿದ್ದಾರೆ. ಹಾಗೆಯೇ ಟೀಂ ಇಂಡಿಯಾ ಆಟಗಾರರ ಪಾರುಪತ್ಯವೂ ಮುಂದುವರೆದಿದೆ.

ಪೃಥ್ವಿಶಂಕರ
|

Updated on:Aug 21, 2024 | 4:11 PM

ಐಸಿಸಿ ನೂತನ ಟೆಸ್ಟ್ ಕ್ರಿಕೆಟ್‌ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ವೆಸ್ಟ್ ಇಂಡೀಸ್​ನ ಜೇಡನ್ ಸೀಲ್ಸ್ ಮತ್ತು ಜೇಸನ್ ಹೋಲ್ಡರ್ ಭರ್ಜರಿ ಲಾಭ ಗಳಿಸಿದ್ದಾರೆ. ಹಾಗೆಯೇ ಟೀಂ ಇಂಡಿಯಾ ಆಟಗಾರರ ಪಾರುಪತ್ಯವೂ ಮುಂದುವರೆದಿದೆ.

1 / 10
ವೆಸ್ಟ್ ಇಂಡೀಸ್ ಬೌಲರ್ ಜೇಡನ್ ಸೀಲ್ಸ್ ಇತ್ತೀಚೆಗೆ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 9 ವಿಕೆಟ್ ಕಬಳಿಸಿದ್ದರು. ಇದರ ಲಾಭ ಪಡೆದಿರುವ ಸೀಲ್ಸ್, ಮೂತನ ರ್ಯಾಂಕಿಂಗ್‌ನಲ್ಲಿ 13 ಸ್ಥಾನಗಳ ಬೃಹತ್ ಜಿಗಿತ ಕಂಡಿದ್ದು, 13 ನೇ ಸ್ಥಾನವನ್ನು ತಲುಪಿದ್ದಾರೆ. ಇದು ಇಲ್ಲಿಯವರೆಗಿನ ಅವರ ಅತ್ಯುತ್ತಮ ಶ್ರೇಯಾಂಕವಾಗಿದೆ.

2 / 10
 ಉಳಿದಂತೆ ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 870 ರೇಟಿಂಗ್‌ನೊಂದಿಗೆ ನಂಬರ್-1 ಬೌಲರ್ ಆಗಿ ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಬೌಲರ್ ಜೋಶ್ ಹೇಜಲ್‌ವುಡ್ 847 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

3 / 10
ಈ ಪಟ್ಟಿಯಲ್ಲಿ ಭಾರತದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಮೂರನೇ ಸ್ಥಾನದಲ್ಲಿದ್ದು, 847 ರೇಟಿಂಗ್ ಪಾಯಿಂಟ್ ಹೊಂದಿದ್ದಾರೆ. ಪ್ಯಾಟ್ ಕಮ್ಮಿನ್ಸ್ 820 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ಕಗಿಸೊ ರಬಾಡೊ 820 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

4 / 10
ಇನ್ನು  ಅತ್ಯುತ್ತಮ ಆಲ್‌ರೌಂಡರ್​ಗಳ ಶ್ರೇಯಾಂಕದಲ್ಲಿ ರವೀಂದ್ರ ಜಡೇಜಾ, 444 ರೇಟಿಂಗ್ ಅಂಕಗಳೊಂದಿಗೆ ನಂಬರ್-1 ಸ್ಥಾನದಲ್ಲಿ ಮುಂದುವರಿದಿದ್ದಾರೆ. ಎರಡನೇ ಸ್ಥಾನದಲ್ಲಿರುವ ರವಿಚಂದ್ರನ್ ಅಶ್ವಿನ್ 322 ರೇಟಿಂಗ್ ಪಾಯಿಂಟ್ ಹೊಂದಿದ್ದಾರೆ.

5 / 10
ಬಾಂಗ್ಲಾದೇಶದ ಆಲ್‌ರೌಂಡರ್ ಶಕೀಬ್ ಅಲ್ ಹಸನ್ 310 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್‌ನ ಜೋ ರೂಟ್ 284 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿ ಮತ್ತು ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ 270 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

6 / 10
ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಇಂಗ್ಲೆಂಡ್‌ನ ದಿಗ್ಗಜ ಆಟಗಾರ ಜೋ ರೂಟ್ 872 ರೇಟಿಂಗ್ ಅಂಕಗಳೊಂದಿಗೆ ನಂಬರ್-1 ಸ್ಥಾನದಲ್ಲಿ ಮುಂದುವರಿದಿದ್ದಾರೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ 859 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

7 / 10
ಅದೇ ಸಮಯದಲ್ಲಿ, ಪಾಕಿಸ್ತಾನದ ಬಾಬರ್ ಆಝಂ 768 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‌ನ ಡ್ರೆಲ್ ಮಿಚೆಲ್ 768 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿ ಮತ್ತು ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 757 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಐದನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

8 / 10
ತಂಡಗಳ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾ 124 ರೇಟಿಂಗ್ ಅಂಕಗಳೊಂದಿಗೆ ವಿಶ್ವದ ನಂಬರ್ ಒನ್ ತಂಡ ಎನಿಸಿಕೊಂಡಿದ್ದರೆ,, ಭಾರತ ತಂಡ 120 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

9 / 10
ಇಂಗ್ಲೆಂಡ್ 108 ರೇಟಿಂಗ್‌ನೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ 104 ರೇಟಿಂಗ್‌ನೊಂದಿಗೆ ನಾಲ್ಕನೇ ಮತ್ತು ನ್ಯೂಜಿಲೆಂಡ್ 96 ರೇಟಿಂಗ್ ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ.

10 / 10

Published On - 4:08 pm, Wed, 21 August 24

Follow us