AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Ranking: ಟೆಸ್ಟ್​ ರ‍್ಯಾಂಕಿಂಗ್ ಪ್ರಕಟ: ಅಗ್ರ ಹತ್ತರಲ್ಲಿ 4 ಭಾರತೀಯರು

ICC Test Rankings: ಐಸಿಸಿ ಪ್ರಕಟಿಸಿರುವ ಹೊಸ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ತಂಡದ ನಾಲ್ವರು ಆಟಗಾರರು ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಇಬ್ಬರು ಸ್ಥಾನ ಪಡೆದರೆ, ಬೌಲಿಂಗ್ ಶ್ರೇಯಾಂಕದಲ್ಲಿ ಓರ್ವ ವೇಗಿ ಮಾತ್ರ ಕಾಣಿಸಿಕೊಂಡಿದ್ದಾರೆ. ಇನ್ನು ಆಲ್​ರೌಂಡರ್ ವಿಭಾಗದಲ್ಲಿ ಭಾರತೀಯ ಆಟಗಾರ ಸ್ಥಾನ ಪಡೆದಿದ್ದಾರೆ.

ಝಾಹಿರ್ ಯೂಸುಫ್
|

Updated on:Jun 26, 2025 | 8:32 AM

Share
ಐಸಿಸಿ ಟೆಸ್ಟ್ ಆಟಗಾರರ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಟಾಪ್-10 ನಲ್ಲಿ ಸ್ಥಾನ ಪಡೆದಿದ್ದಾರೆ. ಇಲ್ಲಿ ಬ್ಯಾಟರ್​ಗಳ ಪಟ್ಟಿಯಲ್ಲಿ ಇಬ್ಬರು ಕಾಣಿಸಿಕೊಂಡರೆ, ಬೌಲರ್​ಗಳ ಪಟ್ಟಿಯಲ್ಲಿ ಓರ್ವ ಸ್ಥಾನ ಪಡೆದಿದ್ದಾರೆ. ಇನ್ನು ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಟೀಮ್ ಇಂಡಿಯಾ ಆಟಗಾರನಿರುವುದು ವಿಶೇಷ. ಹಾಗಿದ್ರೆ ಯಾರು ಯಾವ ಸ್ಥಾನದಲ್ಲಿದ್ದಾರೆ ಎಂದು ನೋಡೋಣ...

1 / 5
ಐಸಿಸಿ ಟೆಸ್ಟ್ ಬ್ಯಾಟರ್​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ 4ನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 101 ರನ್​ಗಳ ಭರ್ಜರಿ ಶತಕ ಸಿಡಿಸಿದ ಜೈಸ್ವಾಲ್ ಇದೀಗ 851 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

2 / 5
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿ ಮಿಂಚಿದ್ದ ರಿಷಭ್ ಪಂತ್ 801 ಅಂಕಗಳೊಂದಿಗೆ ಟೆಸ್ಟ್ ಬ್ಯಾಟರ್​ಗಳ ಪಟ್ಟಿಯಲ್ಲಿ 7ನೇ ಸ್ಥಾನ ಅಲಂಕರಿಸಿದ್ದಾರೆ. ಇದು ಭಾರತೀಯ ವಿಕೆಟ್ ಕೀಪರ್​ನ ಸರ್ವಶ್ರೇಷ್ಠ ಸಾಧನೆ ಎಂಬುದು ವಿಶೇಷ. ಅಂದರೆ ಟೀಮ್ ಇಂಡಿಯಾದ ಯಾವುದೇ ವಿಕೆಟ್ ಕೀಪರ್ ಟೆಸ್ಟ್​​ ರ್ಯಾಂಕಿಂಗ್​ನಲ್ಲಿ 800 ಕ್ಕಿಂತ ಅಧಿಕ ಅಂಕಗಳನ್ನು ಪಡೆದಿರಲಿಲ್ಲ. ಇದೀಗ 801 ರೇಟಿಂಗ್​ನೊಂದಿಗೆ ಪಂತ್ ಏಳನೇ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.

3 / 5
ಇನ್ನು ಐಸಿಸಿ ಟೆಸ್ಟ್ ಬೌಲರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ. ಹೆಡಿಂಗ್ಲೆಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಮಿಂಚಿದ್ದ ಬುಮ್ರಾ 907 ಅಂಕಗಳೊಂದಿಗೆ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಬುಮ್ರಾ ಅವರನ್ನು ಹೊರತುಪಡಿಸಿ ಟೀಮ್ ಇಂಡಿಯಾದ ಯಾವುದೇ ಬೌಲರ್ ಅಗ್ರ ಹತ್ತರಲ್ಲಿ ಸ್ಥಾನ ಪಡೆದಿಲ್ಲ.

4 / 5
ಹಾಗೆಯೇ ಐಸಿಸಿ ಟೆಸ್ಟ್ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಮೊದಲ ಸ್ಥಾನದಲ್ಲಿದ್ದಾರೆ. 376 ಅಂಕಗಳನ್ನು ಹೊಂದಿರುವ ಜಡೇಜಾ ಕಳೆದ ಕೆಲ ತಿಂಗಳಿಂದ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದು, ಇಂಗ್ಲೆಂಡ್​ ವಿರುದ್ಧ ಉಳಿದ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಅವರ ರೇಟಿಂಗ್ 400 ದಾಟುವ ಸಾಧ್ಯತೆಯಿದೆ.

5 / 5

Published On - 8:31 am, Thu, 26 June 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ

ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ