- Kannada News Photo gallery Cricket photos ICC Test Rankings Virat Kohli returns to top 10 Rohit Sharma slips to 14
ICC Test Rankings: ಟಾಪ್ 10 ರೊಳಗೆ ಕಿಂಗ್ ಕೊಹ್ಲಿ; 4 ಸ್ಥಾನ ಕುಸಿದ ರೋಹಿತ್..! ಪಂತ್ಗೆ ಯಾವ ಸ್ಥಾನ ಗೊತ್ತಾ?
ICC Test Rankings: ನೂತನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಮುಂಬಡ್ತಿ ಪಡೆದಿದ್ದರೆ, ನಾಯಕ ರೋಹಿತ್ ಶರ್ಮಾಗೆ ಹಿನ್ನಡೆಯುಂಟಾಗಿದೆ.
Updated on:Jan 03, 2024 | 3:58 PM

ಪ್ರಸ್ತುತ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಆಡುತ್ತಿದೆ. ಮೊದಲ ಟೆಸ್ಟ್ನಲ್ಲಿ ಹೀನಾಯ ಸೋಲು ಕಂಡ ರೋಹಿತ್ ಪಡೆ 2ನೇ ಟೆಸ್ಟ್ನಲ್ಲಿ ಭರ್ಜರಿ ಪುನರಾಗಮನ ಮಾಡಿದೆ. ಈ ನಡುವೆ ನೂತನ ಐಸಿಸಿ ಟೆಸ್ಟ್ ಶ್ರೇಯಾಂಕ ಬಿಡುಗಡೆಯಾಗಿದ್ದು, ಮಾಜಿ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಮುಂಬಡ್ತಿ ಪಡೆದಿದ್ದರೆ, ನಾಯಕ ರೋಹಿತ್ ಶರ್ಮಾಗೆ ಹಿನ್ನಡೆಯುಂಟಾಗಿದೆ.

ನೂತನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ 864 ರೇಟಿಂಗ್‌ನೊಂದಿಗೆ ಪ್ರಸ್ತುತ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡದ ಜೋ ರೂಟ್ 859 ರೇಟಿಂಗ್ ಹೊಂದಿದ್ದಾರೆ.

ಆಸ್ಟ್ರೇಲಿಯಾ ತಂಡದ ಮಾಜಿ ನಾಯತಕ ಸ್ಟೀವ್ ಸ್ಮಿತ್ 820 ರೇಟಿಂಗ್‌ನೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಅಂದರೆ ಮೊದಲ ಮೂರು ಸ್ಥಾನಗಳಲ್ಲಿ ಯಾವುದೇ ಮಹತ್ವದ ಬದಲಾವಣೆಯಾಗಿಲ್ಲ.

ಇದಾದ ಬಳಿಕ ನ್ಯೂಜಿಲೆಂಡ್‌ನ ಡ್ಯಾರಿಲ್ ಮಿಚೆಲ್ ಮೂರು ಸ್ಥಾನಗಳ ಬೃಹತ್ ಜಿಗಿತವನ್ನು ಮಾಡಿದ್ದು, 786 ರೇಟಿಂಗ್‌ನೊಂದಿಗೆ ನಾಲ್ಕನೇ ಸ್ಥಾನಕ್ಕೆ ಬಂದಿದ್ದಾರೆ.

ಆಸ್ಟ್ರೇಲಿಯಾದ ಬ್ಯಾಟರ್ ಉಸ್ಮಾನ್ ಖವಾಜ 785 ರೇಟಿಂಗ್‌ನೊಂದಿಗೆ ಒಂದು ಸ್ಥಾನ ಕುಸಿದು ಐದನೇ ಸ್ಥಾನಕ್ಕೆ ಜಾರಿದ್ದಾರೆ. ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಕೂಡ ಒಂದು ಸ್ಥಾನ ಕುಸಿದಿದ್ದು, 782 ರೇಟಿಂಗ್‌ನೊಂದಿಗೆ 6ನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾದ ಮಾರ್ನಸ್ ಲಬುಶೇನ್ 777 ರೇಟಿಂಗ್‌ನೊಂದಿಗೆ ಏಳನೇ ಸ್ಥಾನಕ್ಕೆ ಏರಿದ್ದರೆ, ಇಂಗ್ಲೆಂಡ್‌ನ ಹ್ಯಾರಿ ಬ್ರೂಕ್ 773 ರೇಟಿಂಗ್‌ನೊಂದಿಗೆ ಎಂಟನೇ ಸ್ಥಾನದಲ್ಲಿದ್ದಾರೆ.

ಈ ನಡುವೆ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ನಾಲ್ಕು ಸ್ಥಾನಗಳ ಜಿಗಿತ ಕಂಡಿದ್ದು, 761 ರೇಟಿಂಗ್‌ನೊಂದಿಗೆ ನೇರವಾಗಿ ಒಂಬತ್ತನೇ ಸ್ಥಾನಕ್ಕೆ ಏರಿದ್ದಾರೆ. ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಸರಣಿಯ ಮೊದಲ ಇನ್ನಿಂಗ್ಸ್‌ನಲ್ಲಿ 64 ಎಸೆತಗಳಲ್ಲಿ 38 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 82 ಎಸೆತಗಳಲ್ಲಿ 76 ರನ್ ಬಾರಿಸಿದ್ದರು. ಹೀಗಾಗಿ ಶ್ರೇಯಾಂಕದಲ್ಲಿ ಅವರು ಇದರಿಂದ ಲಾಭ ಪಡೆದಿದ್ದಾರೆ.

ಭಾರತ ತಂಡದ ನಾಯಕ ರೋಹಿತ್ ಶರ್ಮಾ ನಾಲ್ಕು ಸ್ಥಾನಗಳನ್ನು ಕಳೆದುಕೊಂಡಿದ್ದಾರೆ. ಈ ಹಿಂದೆ ಟಾಪ್ 10ರಲ್ಲಿ ಸ್ಥಾನ ಕಾಯ್ದುಕೊಂಡಿದ್ದ ಅವರು ಇದೀಗ ನೇರವಾಗಿ 14ನೇ ಸ್ಥಾನಕ್ಕೆ ಬಂದಿದ್ದಾರೆ. ಅವರ ರೇಟಿಂಗ್ ಪ್ರಸ್ತುತ 719 ಆಗಿದೆ.

ಆದರೆ ಕಾರು ಅಪಘಾತದಲ್ಲಿ ಗಾಯಗೊಂಡು ಒಂದು ವರ್ಷಕ್ಕೂ ಹೆಚ್ಚು ಕಾಲ ಆಟದಿಂದ ಹೊರಗುಳಿದಿರುವ ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಇನ್ನೂ 12 ನೇ ಸ್ಥಾನದಲ್ಲಿದ್ದಾರೆ. ಅವರ ರೇಟಿಂಗ್ ಪ್ರಸ್ತುತ 735 ಆಗಿದೆ.
Published On - 3:55 pm, Wed, 3 January 24









