ICC Test Rankings: ನೂತನ ಟೆಸ್ಟ್‌ ರ್‍ಯಾಂಕಿಂಗ್​ನಲ್ಲಿ 37 ಸ್ಥಾನ ಜಿಗಿದ ಯಶಸ್ವಿ ಜೈಸ್ವಾಲ್..!

ICC Test Rankings, Yashasvi Jaiswal: ಇಂಗ್ಲೆಂಡ್ ವಿರುದ್ಧ ದ್ವಿಶತಕದ ಇನ್ನಿಂಗ್ಸ್ ಆಡಿ ಟೀಂ ಇಂಡಿಯಾದ ಗೆಲುವಿಗೆ ಮುನ್ನುಡಿ ಬರೆದಿದ್ದ ಭಾರತದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಇದೀಗ ಟೆಸ್ಟ್ ಶ್ರೇಯಾಂಕದಲ್ಲೂ ಭರ್ಜರಿ ಮುಂಬ್ತಡಿ ಪಡೆದಿದ್ದಾರೆ. ಈ ಎಡಗೈ ದಾಂಡಿಗ ಇದೀಗ 632 ರೇಟಿಂಗ್ಸ್​ನೊಂದಿಗೆ 29ನೇ ಸ್ಥಾನವನ್ನು ಅಲಂಕರಿಸಿದ್ದಾರೆ.

ಪೃಥ್ವಿಶಂಕರ
|

Updated on: Feb 07, 2024 | 3:18 PM

ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಬ್ಯಾಟ್ಸ್‌ಮನ್​ಗಳ ರ್‍ಯಾಂಕಿಂಗ್​ನಲ್ಲಿ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಬರೋಬ್ಬರಿ 37 ಸ್ಥಾನ ಮುಂಬಡ್ತಿ ಪಡೆದು 29ನೇ ಸ್ಥಾನಕ್ಕೆ ಬಂದು ತಲುಪಿದ್ದಾರೆ. ಇದಕ್ಕೂ ಮುನ್ನ ಜೈಸ್ವಾಲ್ 66ನೇ ಸ್ಥಾನದಲ್ಲಿದ್ದರು.

1 / 7
ಟೆಸ್ಟ್ ವೃತ್ತಿಜೀವನದಲ್ಲಿ ಕೇವಲ 6 ಟೆಸ್ಟ್ ಪಂದ್ಯಗಳನ್ನಾಡಿರುವ ಜೈಸ್ವಾಲ್‌, ಇತ್ತೀಚೆಗೆ ಮುಕ್ತಾಯವಾದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 207 ರನ್​ಗಳ ದಾಖಲೆಯ ಇನ್ನಿಂಗ್ಸ್ ಆಡಿದ್ದರು. ಇದು ಜೈಸ್ವಾಲ್​ರ ಮೊದಲ ದ್ವಿಶತಕವೂ ಆಗಿತ್ತು.

2 / 7
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ 88 ರನ್ ಕಲೆಹಾಕಿದ್ದ ಜೈಸ್ವಾಲ್, ಎರಡನೇ ಇನ್ನಿಂಗ್ಸ್​ನಲ್ಲಿ 15 ರನ್​ಗಳಿಗೆ ಸುಸ್ತಾಗಿದ್ದರು. ಆದರೆ ಎರಡನೇ ಟೆಸ್ಟ್​ ಪಂದ್ಯದಲ್ಲಿ ಸ್ಮರಣೀಯ ಇನ್ನಿಂಗ್ಸ್ ಆಡಿದ್ದ ಜೈಸ್ವಾಲ್ ಭರ್ಜರಿ ದ್ವಿಶತಕ ಸಿಡಿಸಿ ಮಿಂಚಿದ್ದರು. ಜೈಸ್ವಾಲ್ ಸಿಡಿಸಿದ ಈ ದ್ವಿಶತಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತ್ತು.

3 / 7
ಉಳಿದಂತೆ ಟೆಸ್ಟ್ ಬ್ಯಾಟ್ಸ್‌ಮನ್​ಗಳ ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿರುವ ನ್ಯೂಜಿಲೆಂಡ್​ನ ಕೇನ್ ವಿಲಿಯಮ್ಸನ್ 864 ರೇಟಿಂಗ್ ಹೊಂದಿದ್ದರೆ, ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 818 ರೇಟಿಂಗ್​ ಹೊಂದಿದ್ದಾರೆ.

4 / 7
ಟೀಂ ಇಂಡಿಯಾ ಬ್ಯಾಟ್ಸ್‌ಮನ್​ಗಳ ಪೈಕಿ 7ನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಒಬ್ಬರೇ ಟಾಪ್ 10ರೊಳಗೆ ಸ್ಥಾನ ಪಡೆದಿದ್ದಾರೆ. ಪ್ರಸ್ತುತ ಟೀಂ ಇಂಡಿಯಾದಿಂದ ದೂರವಿರುವ ವಿರಾಟ್ ಕೊಹ್ಲಿ 760 ರೇಟಿಂಗ್ ಪಾಯಿಂಟ್ ಹೊಂದಿದ್ದಾರೆ.

5 / 7
ಟೀಂ ಇಂಡಿಯಾದ ವಿಕೆಟ್​ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ 714 ರೇಟಿಂಗ್​ನೊಂದಿಗೆ 12 ಸ್ಥಾನದಲ್ಲಿದ್ದರೆ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 702 ರೇಟಿಂಗ್​ನೊಂದಿಗೆ 13ನೇ ಸ್ಥಾನದಲ್ಲಿದ್ದಾರೆ.

6 / 7
ಹಾಗೆಯೇ ಟೆಸ್ಟ್ ಆಲ್​ರೌಂಡರ್​ಗಳ ಪಟ್ಟಿಯ ಮೊದಲೆರಡು ಸ್ಥಾನಗಳಲ್ಲಿ ರವೀಂದ್ರ ಜಡೇಜಾ ಹಾಗೂ ಆರ್ ಅಶ್ವಿನ್ ಇದ್ದಾರೆ. ಪ್ರಸ್ತುತ ಜಡೇಜಾ 416 ರೇಟಿಂಗ್ಸ್​ನೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿರುವ ಆರ್​ ಅಶ್ವಿನ್ 326 ರೇಟಿಂಗ್ಸ್ ಹೊಂದಿದ್ದಾರೆ.

7 / 7
Follow us
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ

ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ

ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ

ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ

ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್

ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು

ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು

ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ

ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!

ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!