
ಮುಂದಿನ ವರ್ಷ ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿರುವ ಅಂಡರ್-19 ವಿಶ್ವಕಪ್ಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಯಶ್ ಧುಲ್ ಮುನ್ನಡೆಸಲಿದ್ದು, ಟೀಮ್ನಲ್ಲಿ ಒಟ್ಟು 17 ಸದಸ್ಯರಿಗೆ ಸ್ಥಾನ ನೀಡಲಾಗಿದೆ.

ಜನವರಿ 14 ರಿಂದ ವೆಸ್ಟ್ ಇಂಡೀಸ್‌ನಲ್ಲಿ ಟೂರ್ನಿ ಆರಂಭವಾಗಲಿದ್ದು, ಭಾರತದ ಮೊದಲ ಪಂದ್ಯವನ್ನು ಜನವರಿ 15 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಟೀಮ್ ಇಂಡಿಯಾ ಅಂಡರ್-19 ತಂಡವು ಇದುವರೆಗೆ 4 ಬಾರಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಮೊದಲ ಬಾರಿ 2000ರಲ್ಲಿ ಮೊಹಮ್ಮದ್ ಕೈಫ್ ನೇತೃತ್ವದಲ್ಲಿ ಭಾರತ ತಂಡವು ಕಿರಿಯರ ವಿಶ್ವಕಪ್ ಗೆದ್ದರೆ, ಆ ಬಳಿಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2008 ರಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ 2012 ರಲ್ಲಿ ಉನ್ಮುಕ್ತ್ ಚಂದ್ ನಾಯಕತ್ವದಲ್ಲಿ ಭಾರತ ತಂಡವು ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಇನ್ನು 2018 ರಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ ಅಂಡರ್-19 ವಿಶ್ವಕಪ್ ಚಾಂಪಿಯನ್ ಆಗಿತ್ತು. ಇದಾಗ್ಯೂ 2020 ರಲ್ಲಿ ಪ್ರಿಯಮ್ ಗಾರ್ಗ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್ ತಲುಪಿದರೂ ಬಾಂಗ್ಲಾದೇಶ ವಿರುದ್ದ ಸೋಲನುಭವಿಸಿತು. ಇದೀಗ ನಾಲ್ಕು ಬಾರಿಯ ಚಾಂಪಿಯನ್ ಭಾರತ ತನ್ನ ಐದನೇ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ವಿಶ್ವಾಸದಲ್ಲಿದೆ.

U-19 ವಿಶ್ವಕಪ್ಗಾಗಿ ಭಾರತ ತಂಡ ಹೀಗಿದೆ: ಯಶ್ ಧುಲ್ (ನಾಯಕ), ಹರ್ನೂರ್ ಸಿಂಗ್, ಅಂಗ್‌ಕ್ರಿಶ್ ರಘುವಂಶಿ, ಎಸ್‌ಕೆ ರಶೀದ್ (ಉಪನಾಯಕ), ನಿಶಾಂತ್ ಸಿಂಧು, ಸಿದ್ಧಾರ್ಥ್ ಯಾದವ್, ಅನೀಶ್ವರ್ ಗೌತಮ್, ದಿನೇಶ್ ಬಾನಾ (WK), ಆರಾಧ್ಯ ಯಾದವ್ (WK), ರಾಜ್ ಅಂಗದ್ ಬಾವಾ, ಮಾನವ್ ಪರಾಖ್, ಕೌಶಲ್ ತಾಂಬೆ , ಆರ್ ಎಸ್ ಹಂಗರ್ಗೆಕರ್, ವಾಸು ವತ್ಸ್, ವಿಕ್ಕಿ ಓಸ್ತ್ವಾಲ್, ರವಿಕುಮಾರ್, ಗರ್ವ್ ಸಾಂಗ್ವಾನ್.