ಐಸಿಸಿ ಮಂಗಳವಾರ ಮಹಿಳಾ ಏಕದಿನ ಕ್ರಿಕೆಟ್ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ, ಇದರಲ್ಲಿ ಭಾರತಕ್ಕೆ ಹೆಚ್ಚು ಒಳ್ಳೆಯ ಸುದ್ದಿ ಇಲ್ಲ. ಬ್ಯಾಟಿಂಗ್, ಬೌಲಿಂಗ್ ಮತ್ತು ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ ಭಾರತ ಹೆಚ್ಚು ನಷ್ಟ ಅನುಭವಿಸಿದೆ. ಆದಾಗ್ಯೂ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ನ ಆಟಗಾರರು ಈ ಶ್ರೇಯಾಂಕವನ್ನು ನೋಡಿ ಖಂಡಿತ ಸಂತೋಷಪಡುತ್ತಾರೆ.
1 / 5
ಭಾರತದ ಸ್ಟಾರ್ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಹೊಸ ಏಕದಿನ ರ್ಯಾಂಕಿಂಗ್‌ನಲ್ಲಿ ಬ್ಯಾಟರ್ಗಳ ಪಟ್ಟಿಯಲ್ಲಿ ಎಂಟನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. 25ರ ಹರೆಯದ ಮಂಧಾನ ಈ ವರ್ಷ ಒಂಬತ್ತು ಏಕದಿನ ಪಂದ್ಯಗಳಲ್ಲಿ 411 ರನ್ ಗಳಿಸಿದ್ದು, ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಅಗ್ರ 10ರಲ್ಲಿರುವ ಏಕೈಕ ಭಾರತೀಯ ಆಟಗಾರ್ತಿಯಾಗಿದ್ದಾರೆ. ಮಂಧಾನಾ ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶತಕ ಬಾರಿಸಿದ್ದರು. ಬ್ಯಾಟಿಂಗ್ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾದ ಅಲಿಸ್ಸಾ ಹೀಲಿ ಅಗ್ರಸ್ಥಾನದಲ್ಲಿದ್ದು, ಇಂಗ್ಲೆಂಡ್‌ನ ನಟಾಲಿ ಸ್ಕಿವರ್ ನಂತರದ ಸ್ಥಾನದಲ್ಲಿದ್ದಾರೆ.
2 / 5
ಭಾರತದ ಅನುಭವಿ ವೇಗಿ ಜೂಲನ್ ಗೋಸ್ವಾಮಿ ಬೌಲರ್‌ಗಳ ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ. ಜೂಲನ್ ಈ ವರ್ಷ ಇದುವರೆಗೆ ಒಂಬತ್ತು ಏಕದಿನ ಪಂದ್ಯಗಳಲ್ಲಿ 12 ವಿಕೆಟ್ ಪಡೆದಿದ್ದಾರೆ.
3 / 5
ಐರ್ಲೆಂಡ್ ವಿರುದ್ಧ ತನ್ನ ತಂಡದ ಕ್ಲೀನ್ ಸ್ವೀಪ್ ಸಮಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾದ ವೇಗಿ ಅಯಾಬೊಂಗಾ ಖಾಕಾ ಅವರು ಜೂಲನ್ ಅವರನ್ನು ಹಿಂದಿಕ್ಕಿದರು. ಬೌಲರ್‌ಗಳ ಪಟ್ಟಿಯಲ್ಲಿ ಇಂಗ್ಲೆಂಡ್‌ನ ಸೋಫಿ ಎಕ್ಲೆಸ್ಟೋನ್ ಮತ್ತು ದಕ್ಷಿಣ ಆಫ್ರಿಕಾದ ಜೇನ್ ಜೊನಾಸೆನ್ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
4 / 5
ಭಾರತದ ದೀಪ್ತಿ ಶರ್ಮಾ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಈ ಪಟ್ಟಿಯಲ್ಲಿ ಭಾರತದ ಮತ್ತೊಬ್ಬ ಆಟಗಾರ್ತಿ ಇಲ್ಲ. ಇಂಗ್ಲೆಂಡಿನ ನಟಾಲಿ ಸ್ಕಿವರ್ ನಂಬರ್ ಒನ್ ಸ್ಥಾನದಲ್ಲಿದ್ದಾರೆ.