
ಮೊದಲ ಮಹಿಳಾ ವಿಶ್ವಕಪ್ 1973 ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆಯಿತು. ಇಂಗ್ಲೆಂಡ್ ಅತಿ ಹೆಚ್ಚು 5 ಪಂದ್ಯಗಳನ್ನು ಗೆದ್ದು 10 ಅಂಕಗಳನ್ನು ಗಳಿಸಿ ವಿಜೇತರಾದರು.

ಮುಂದಿನ ವಿಶ್ವಕಪ್ 1978 ರಲ್ಲಿ ಭಾರತದಲ್ಲಿ ನಡೆಯಿತು. ಆಸ್ಟ್ರೇಲಿಯಾ ತನ್ನ ಎಲ್ಲಾ ಪಂದ್ಯಗಳನ್ನು ಗೆದ್ದು 6 ಅಂಕಗಳೊಂದಿಗೆ ತನ್ನ ಮೊದಲ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಭಾರತ ಒಂದೇ ಒಂದು ಗೆಲುವು ಸಾಧಿಸಲಿಲ್ಲ.

ಮೂರನೇ ವಿಶ್ವಕಪ್ 1982 ರಲ್ಲಿ ನ್ಯೂಜಿಲೆಂಡ್‌ನಲ್ಲಿ ನಡೆಯಿತು. ಆಸ್ಟ್ರೇಲಿಯಾ ತನ್ನ ಮೂರನೇ ಪ್ರಶಸ್ತಿಯನ್ನು ಗೆದ್ದುಕೊಂಡಿತು.

1988ರ ನಾಲ್ಕನೇ ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ನಡೆದಿತ್ತು. ಈ ವಿಶ್ವಕಪ್ ಕೂಡ ಆಸ್ಟ್ರೇಲಿಯಾ ಪಾಲಾಯಿತು. ಇದರೊಂದಿಗೆ ಆಸ್ಟ್ರೇಲಿಯಾ ಹ್ಯಾಟ್ರಿಕ್ ಪ್ರಶಸ್ತಿ ಗೆದ್ದುಕೊಂಡಿತು.

1993 ರ ವಿಶ್ವಕಪ್ ಅನ್ನು ಇಂಗ್ಲೆಂಡ್‌ನಲ್ಲಿ ಮತ್ತೆ ನಡೆಸಲಾಯಿತು. ಇದರೊಂದಿಗೆ ಇಂಗ್ಲೆಂಡ್ ಎರಡನೇ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಭಾರತ 7 ಪಂದ್ಯಗಳಲ್ಲಿ 4ರಲ್ಲಿ ಗೆದ್ದು ನಾಲ್ಕನೇ ಸ್ಥಾನ ಗಳಿಸಿತು.
Published On - 4:46 pm, Wed, 2 March 22