ನಾಕೌಟ್ ಪಂದ್ಯಕ್ಕೆ ವೇದಿಕೆ ಸಜ್ಜು: ಗೆದ್ದವರು ಫೈನಲ್ಗೆ..!
ICC Womens World Cup 2025 Semi Finals: ಭಾರತೀಯ ಕ್ರಿಕೆಟ್ ಮಂಡಳಿ ಆಯೋಜಿಸಿದ ಈ ಬಾರಿಯ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿದ್ದವು. ಆ ತಂಡಗಳೆಂದರೆ... ಭಾರತ, ಪಾಕಿಸ್ತಾನ್, ಬಾಂಗ್ಲಾದೇಶ್, ಶ್ರೀಲಂಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್.
Updated on: Oct 29, 2025 | 8:54 AM

ICC Womens World Cup 2025: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯವು ಇಂದು (ಅ.29) ನಡೆಯಲಿದೆ. ಗುವಾಹಟಿಯಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್ನಲ್ಲಿ ಗೆಲ್ಲುವ ತಂಡ ಫೈನಲ್ಗೆ ಎಂಟ್ರಿ ಕೊಡಲಿದೆ.

ಈ ಬಾರಿಯ ವಿಶ್ವಕಪ್ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿದ್ದವು. ಈ ಎಂಟು ತಂಡಗಳಲ್ಲಿ ಅತ್ಯಧಿಕ ಗೆಲುವು ದಾಖಲಿಸಿ ಆಸ್ಟ್ರೇಲಿಯಾ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ಮೂಲಕ ಸೆಮಿಫೈನಲ್ಗೆ ಪ್ರವೇಶಿಸಿದೆ. ಇನ್ನು ಸೌತ್ ಆಫ್ರಿಕಾ ತಂಡವು ದ್ವಿತೀಯ ಸ್ಥಾನದೊಂದಿಗೆ ನಾಕೌಟ್ ಹಂತಕ್ಕೇರಿದೆ. ಹಾಗೆಯೇ ಇಂಗ್ಲೆಂಡ್ ತಂಡವು ಮೂರನೇ ಸ್ಥಾನ ಪಡೆದರೆ, ಭಾರತ ನಾಲ್ಕನೇ ಸ್ಥಾನದೊಂದಿಗೆ ಸೆಮಿಫೈನಲ್ಗೇರಿದೆ.

ಅದರಂತೆ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಅಕ್ಟೋಬರ್ 29 ರಂದು ನಡೆಯಲಿರುವ ಈ ಪಂದ್ಯವು ಗುವಾಹಟಿಯ ಬರ್ಸಾಪಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಇನ್ನು ಅಕ್ಟೋಬರ್ 30 ರಂದು ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಈ ನಿರ್ಣಾಯಕ ಪಂದ್ಯವು ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಜರುಗಲಿದೆ.

ಈ ಎರಡು ಪಂದ್ಯಗಳಲ್ಲಿ ಜಯ ಸಾಧಿಸುವ ತಂಡ ನವೆಂಬರ್ 2 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೂ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ.




