AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಕೌಟ್ ಪಂದ್ಯಕ್ಕೆ ವೇದಿಕೆ ಸಜ್ಜು: ಗೆದ್ದವರು ಫೈನಲ್​​ಗೆ..!

ICC Womens World Cup 2025 Semi Finals: ಭಾರತೀಯ ಕ್ರಿಕೆಟ್ ಮಂಡಳಿ ಆಯೋಜಿಸಿದ ಈ ಬಾರಿಯ ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿದ್ದವು. ಆ ತಂಡಗಳೆಂದರೆ... ಭಾರತ, ಪಾಕಿಸ್ತಾನ್, ಬಾಂಗ್ಲಾದೇಶ್, ಶ್ರೀಲಂಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್.

ಝಾಹಿರ್ ಯೂಸುಫ್
|

Updated on: Oct 29, 2025 | 8:54 AM

Share
ICC Womens World Cup 2025: ಐಸಿಸಿ ಮಹಿಳಾ ಏಕದಿನ ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯವು ಇಂದು (ಅ.29) ನಡೆಯಲಿದೆ. ಗುವಾಹಟಿಯಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ.

1 / 5
ಈ ಬಾರಿಯ ವಿಶ್ವಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿದ್ದವು. ಈ ಎಂಟು ತಂಡಗಳಲ್ಲಿ ಅತ್ಯಧಿಕ ಗೆಲುವು ದಾಖಲಿಸಿ ಆಸ್ಟ್ರೇಲಿಯಾ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ಮೂಲಕ ಸೆಮಿಫೈನಲ್​ಗೆ ಪ್ರವೇಶಿಸಿದೆ. ಇನ್ನು ಸೌತ್ ಆಫ್ರಿಕಾ ತಂಡವು ದ್ವಿತೀಯ ಸ್ಥಾನದೊಂದಿಗೆ ನಾಕೌಟ್ ಹಂತಕ್ಕೇರಿದೆ. ಹಾಗೆಯೇ ಇಂಗ್ಲೆಂಡ್ ತಂಡವು ಮೂರನೇ ಸ್ಥಾನ ಪಡೆದರೆ, ಭಾರತ ನಾಲ್ಕನೇ ಸ್ಥಾನದೊಂದಿಗೆ ಸೆಮಿಫೈನಲ್​ಗೇರಿದೆ.

2 / 5
ಅದರಂತೆ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಅಕ್ಟೋಬರ್ 29 ರಂದು ನಡೆಯಲಿರುವ ಈ ಪಂದ್ಯವು ಗುವಾಹಟಿಯ ಬರ್ಸಾಪಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

3 / 5
ಇನ್ನು ಅಕ್ಟೋಬರ್ 30 ರಂದು ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಈ ನಿರ್ಣಾಯಕ ಪಂದ್ಯವು ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಜರುಗಲಿದೆ. 

4 / 5
ಈ ಎರಡು ಪಂದ್ಯಗಳಲ್ಲಿ ಜಯ ಸಾಧಿಸುವ ತಂಡ ನವೆಂಬರ್ 2 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೂ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ. 

5 / 5