
ಕ್ರಿಕೆಟ್ ಅಂಗಳದ ಮಹಾ ಸಮರ ಏಕದಿನ ವಿಶ್ವಕಪ್ (ICC World Cup 2023) ಆರಂಭಕ್ಕೆ ಉಳಿದಿರುವುದು ಕೇವಲ ದಿನಗಳು ಮಾತ್ರ. ಅಕ್ಟೋಬರ್ 5 ರಿಂದ ಭಾರತದಲ್ಲಿ ಶುರುವಾಗಲಿರುವ ಈ ಬಾರಿಯ ವಿಶ್ವಕಪ್ಗಾಗಿ ಈಗಾಗಲೇ ಎಲ್ಲಾ ತಂಡಗಳು ಬಂದಿಳಿದಿವೆ. ಅಷ್ಟೇ ಅಲ್ಲದೆ ಭರ್ಜರಿ ಅಭ್ಯಾಸವನ್ನು ಆರಂಭಿಸಿದೆ.

ಈ ವಿಶ್ವಕಪ್ನಲ್ಲಿ ಕಣಕ್ಕಿಳಿಯುವ 10 ತಂಡಗಳಲ್ಲಿ ಐದು ತಂಡಗಳ ಆಟಗಾರರು ಐಸಿಸಿ ವಿಶೇಷ ಫೋಟೋ ಶೂಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ 5 ತಂಡಗಳು ಏಕದಿನ ವಿಶ್ವಕಪ್ನಲ್ಲಿ ಧರಿಸುವ ಜೆರ್ಸಿ ವಿನ್ಯಾಸ ಅನಾವರಣಗೊಂಡಂತಾಗಿದೆ. ಈ ಫೋಟೋ ಶೂಟ್ನ ಝಲಕ್ ಇಲ್ಲಿದೆ..

ಶ್ರೀಲಂಕಾ ತಂಡ: ದಸುನ್ ಶಾನಕ (ನಾಯಕ), ಕುಸಾಲ್ ಮೆಂಡಿಸ್ (ಉಪನಾಯಕ), ಪಾತುಮ್ ನಿಸ್ಸಾಂಕ, ಕುಸಾಲ್ ಪೆರೆರಾ (ವಿಕೆಟ್ ಕೀಪರ್), ದಿಮುತ್ ಕರುಣಾರತ್ನೆ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ಸದೀರ ಸಮರವಿಕ್ರಮ (ವಿಕೆಟ್ ಕೀಪರ್), ದುಶನ್ ಹೇಮಂತ, ಮಹೀಶ್ ತೀಕ್ಷಣ , ದುನಿತ್ ವೆಲ್ಲಲಾಗೆ, ಕಸುನ್ ರಜಿತ, ದಿಲ್ಶನ್ ಮಧುಶಂಕ, ಮತೀಶ ಪತಿರಾಣ, ಲಹಿರು ಕುಮಾರ.

ಬಾಂಗ್ಲಾದೇಶ್ ತಂಡ: ಶಾಕಿಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೋ, ತಂಝಿದ್ ಹಸನ್, ತೌಹಿದ್ ಹೃದೋಯ್, ಮಹಮ್ಮದುಲ್ಲಾ ರಿಯಾದ್, ಮುಶ್ಫಿಕರ್ ರಹೀಮ್, ಮೆಹಿದಿ ಹಸನ್ ಮಿರಾಝ್, ಮಹೇದಿ ಹಸನ್, ತಂಝಿಮ್ ಸಾಕಿಬ್, ನಸುಮ್ ಅಹ್ಮದ್, ಶೋರಿಫುಲ್ ಇಸ್ಲಾಂ, ಹಸನ್ ಮಹದೂದ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರೆಹಮಾನ್.

ನ್ಯೂಝಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್.

ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಝಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ರಾಸ್ಸೀ ವ್ಯಾನ್ ಡೆರ್ ಡಸ್ಸೆನ್, ತಬ್ರೇಝ್ ಶಂಸಿ, ಕಗಿಸೊ ರಬಾಡ, ಆಂಡಿಲೆ ಫೆಹ್ಲುಕ್ವಾಯೊ ಮತ್ತು ಲಿಝಾಡ್ ವಿಲಿಯಮ್ಸ್.

ಇನ್ನು ಪಾಕಿಸ್ತಾನ್, ಆಸ್ಟ್ರೇಲಿಯಾ ತಂಡಗಳು ನೂತನ ಜೆರ್ಸಿಯನ್ನು ಅನಾವರಣಗೊಳಿಸಿದ್ದು, ಇದಾಗ್ಯೂ ಐಸಿಸಿ ಅಧಿಕೃತವಾಗಿ ಪ್ರಕಟಿಸಿಲ್ಲ. ಹೀಗಾಗಿ ಭಾರತ ಸೇರಿದಂತೆ ಉಳಿದ 5 ತಂಡಗಳ ಹೊಸ ಜೆರ್ಸಿ ವಿನ್ಯಾಸದ ಅನಾವರಣವನ್ನು ಶೀಘ್ರದಲ್ಲೇ ನಿರೀಕ್ಷಿಸಬಹುದು.