AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ನಡುವೆಯೂ ಗುರು ದ್ರಾವಿಡ್ ದಾಖಲೆ ಮುರಿದ ಕನ್ನಡಿಗ ಕೆಎಲ್ ರಾಹುಲ್

KL Rahul, ICC World Cup 2023: 2023ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‌ಗಳ ಸೋಲನ್ನು ಎದುರಿಸಬೇಕಾಯಿತು. ಆದರೆ ಅಂತಿಮ ಪಂದ್ಯದಲ್ಲಿ ಸೋತ ನಂತರವೂ ಭಾರತದ ವಿಕೆಟ್ ಕೀಪರ್ ಕೆಎಲ್ ರಾಹುಲ್ ಈ ವಿಶ್ವಕಪ್​ನಲ್ಲಿ ಅಮೋಘ ಸಾಧನೆ ಮಾಡಿದರು.

ಪೃಥ್ವಿಶಂಕರ
|

Updated on: Nov 20, 2023 | 12:58 PM

Share
2023ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‌ಗಳ ಸೋಲನ್ನು ಎದುರಿಸಬೇಕಾಯಿತು. ಆದರೆ ಅಂತಿಮ ಪಂದ್ಯದಲ್ಲಿ ಸೋತ ನಂತರವೂ ಭಾರತದ ವಿಕೆಟ್ ಕೀಪರ್ ಕೆಎಲ್ ರಾಹುಲ್ ಈ ವಿಶ್ವಕಪ್​ನಲ್ಲಿ ಅಮೋಘ ಸಾಧನೆ ಮಾಡಿದರು.

1 / 8
ಇಂಜುರಿಯಿಂದ ಚೇತರಿಸಿಕೊಂಡು ಬಹಳ ದಿನಗಳ ನಂತರ 2023 ರ ಏಷ್ಯಾಕಪ್ ಮೂಲಕ ತಂಡಕ್ಕೆ ಪುನರಾಗಮನ ಮಾಡಿದ ರಾಹುಲ್, ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಅದ್ಭುತ ಶತಕ ಸಿಡಿಸಿ ಮಿಂಚಿದರು. ಇದರ ಜೊತೆಗೆ ಇಡೀ ಏಷ್ಯಾಕಪ್​ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದರು.

2 / 8
ಇದರ ನಂತರ ಏಕದಿನ ವಿಶ್ವಕಪ್‌ನಲ್ಲೂ ಅದೇ ಫಾರ್ಮ್ ಮುಂದುವರೆಸಿದ ರಾಹುಲ್, ಆಸ್ಟ್ರೇಲಿಯಾ ವಿರುದ್ಧದ ಗುಂಪು ಹಂತದ ಪಂದ್ಯದಲ್ಲಿ 97 ರನ್​ಗಳ ಇನ್ನಿಂಗ್ಸ್ ಆಡಿ ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

3 / 8
ಇದಾದ ಬಳಿಕ ರಾಹುಲ್ ನೆದರ್ಲೆಂಡ್ ವಿರುದ್ಧ ಶತಕ ಸಿಡಿಸಿದರು. ಪ್ರಸಕ್ತ ವಿಶ್ವಕಪ್‌ನ 11 ಪಂದ್ಯಗಳಲ್ಲಿ ಅವರು ಬರೋಬ್ಬರಿ 452 ರನ್ ಗಳಿಸಿದ್ದಾರೆ. ಈ ಮೂಲಕ ಏಕದಿನ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮೊದಲ ಭಾರತೀಯ ವಿಕೆಟ್‌ಕೀಪರ್ ಎನಿಸಿಕೊಂಡಿದ್ದಾರೆ.

4 / 8
ಇದಲ್ಲದೆ ಈ ವಿಶ್ವಕಪ್‌ನಲ್ಲಿ ಭಾರತದ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ರಾಹುಲ್, ಈ ಅವಧಿಯಲ್ಲಿ ವಿಕೆಟ್ ಹಿಂದೆ 17 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಏಕದಿನ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಉರುಳಿಸಿದ ಭಾರತೀಯ ವಿಕೆಟ್‌ಕೀಪರ್ ಎನಿಸಿಕೊಂಡಿದ್ದಾರೆ.

5 / 8
ರಾಹುಲ್​ಗೂ ಮುನ್ನ ಈ ದಾಖಲೆ ಟೀಂ ಇಂಡಿಯಾದ ಹಾಲಿ ಕೋಚ್ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿತ್ತು. 2003ರ ಏಕದಿನ ವಿಶ್ವಕಪ್‌ನಲ್ಲಿ ದ್ರಾವಿಡ್ ವಿಕೆಟ್ ಕೀಪರ್ ಆಗಿ 16 ವಿಕೆಟ್ ಕಬಳಿಸಿದ್ದರು.

6 / 8
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2015ರ ಏಕದಿನ ವಿಶ್ವಕಪ್‌ನಲ್ಲಿ 15 ವಿಕೆಟ್ ಉರುಳಿಸಿ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರು. ಇದೀಗ ಧೋನಿ ಕೂಡ ಮಾಡದ ಸಾಧನೆಯನ್ನು ಕೆಎಲ್ ರಾಹುಲ್ ಮಾಡಿದ್ದು, ಮೊದಲ ಸ್ಥಾನವನ್ನು ಅಲಂಕರಿಸಿದ್ದಾರೆ.

7 / 8
ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲೂ ನಿರ್ಣಾಯಕ ಇನ್ನಿಂಗ್ಸ್ ಆಡಿದ ಕೆಎಲ್ ರಾಹುಲ್ 107 ಎಸೆತಗಳಲ್ಲಿ 66 ರನ್ ಕಲೆಹಾಕಿದರು. ಆದರೆ ರಾಹುಲ್​ಗೆ ತಮ್ಮ ಅರ್ಧಶತಕವನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ.

8 / 8
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ

‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ