ನ್ಯೂಜಿಲೆಂಡ್​ಗೆ ಮತ್ತೊಂದು ಬಿಗ್ ಶಾಕ್; ವಿಶ್ವಕಪ್​ನಿಂದ ಹೊರಬಿದ್ದ ತಂಡದ ಸ್ಟಾರ್ ವೇಗಿ..!

Updated on: Nov 03, 2023 | 4:18 PM

ICC World Cup 2023: ಕಳೆದ ವರ್ಷದ ರನ್ನರ್ ಅಪ್ ತಂಡವಾದ ನ್ಯೂಜಿಲೆಂಡ್‌ಗೆ ಈ ವಿಶ್ವಕಪ್​ನಲ್ಲಿ ಬ್ಯಾಕ್ ಟು ಬ್ಯಾಕ್ ಆಘಾತಗಳು ಎದುರಾಗುತ್ತಿವೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಗಾಯದ ಸಮಸ್ಯೆಯಿಂದ ಈಗಾಗಲೇ ಕೆಲವು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇದೀಗ ವೇಗಿ ಮ್ಯಾಟ್ ಹೆನ್ರಿ ಕೂಡ ಇಂಜುರಿಯಿಂದಾಗಿ ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ.

1 / 8
ಕಳೆದ ವರ್ಷದ ರನ್ನರ್ ಅಪ್ ತಂಡವಾದ ನ್ಯೂಜಿಲೆಂಡ್‌ಗೆ ಈ ವಿಶ್ವಕಪ್​ನಲ್ಲಿ ಬ್ಯಾಕ್ ಟು ಬ್ಯಾಕ್ ಆಘಾತಗಳು ಎದುರಾಗುತ್ತಿವೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಗಾಯದ ಸಮಸ್ಯೆಯಿಂದ ಈಗಾಗಲೇ ಕೆಲವು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇದೀಗ ವೇಗಿ ಮ್ಯಾಟ್ ಹೆನ್ರಿ ಕೂಡ ಇಂಜುರಿಯಿಂದಾಗಿ ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ.

ಕಳೆದ ವರ್ಷದ ರನ್ನರ್ ಅಪ್ ತಂಡವಾದ ನ್ಯೂಜಿಲೆಂಡ್‌ಗೆ ಈ ವಿಶ್ವಕಪ್​ನಲ್ಲಿ ಬ್ಯಾಕ್ ಟು ಬ್ಯಾಕ್ ಆಘಾತಗಳು ಎದುರಾಗುತ್ತಿವೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಗಾಯದ ಸಮಸ್ಯೆಯಿಂದ ಈಗಾಗಲೇ ಕೆಲವು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇದೀಗ ವೇಗಿ ಮ್ಯಾಟ್ ಹೆನ್ರಿ ಕೂಡ ಇಂಜುರಿಯಿಂದಾಗಿ ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ.

2 / 8

ಗಾಯಗೊಂಡಿರುವ ಹೆನ್ರಿ ಬದಲಿಗೆ ಕೈಲ್ ಜೇಮಿಸನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಶುಕ್ರವಾರ ಟ್ವೀಟ್ ಮಾಡಿದೆ. ಹಾಗೆಯೇ ವಿಶ್ವಕಪ್ ತಾಂತ್ರಿಕ ಸಮಿತಿಯು ತಂಡದಲ್ಲಿನ ಬದಲಾವಣೆಯನ್ನು ಅನುಮೋದಿಸಿದೆ ಎಂದು ಟ್ವೀಟ್​ನಲ್ಲಿ ಹೇಳಿದೆ.

3 / 8

ಹೀಗಾಗಿ ಪಾಕಿಸ್ತಾನ ವಿರುದ್ಧ ಶನಿವಾರ ನಡೆಯಲಿರುವ ಪಂದ್ಯಕ್ಕೂ ಮುನ್ನ ಜೆಮಿಸನ್ ಗುರುವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ.

4 / 8

ನವೆಂಬರ್ 1 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಬೌಲಿಂಗ್ ಮಾಡುವಾಗ ಹೆನ್ರಿ ಗಾಯಗೊಂಡರು. ದಕ್ಷಿಣ ಆಫ್ರಿಕಾ ಇನಿಂಗ್ಸ್‌ನ 27ನೇ ಓವರ್‌ನ ಮೂರನೇ ಎಸೆತದಲ್ಲಿ ವೇಗದ ಬೌಲರ್ ಸ್ನಾಯು ಸೆಳೆತಕ್ಕೆ ಒಳಗಾದರು. ಆ ನಂತರ ಅವರು ಮೈದಾನ ತೊರೆದಿದ್ದರು.

5 / 8

ಇದೇ ವೇಳೆ ನ್ಯೂಜಿಲೆಂಡ್ ತಂಡದಲ್ಲಿರುವ ಇನ್ನೂ ಮೂವರು ಆಟಗಾರರು ಈಗಾಗಲೇ ಗಾಯಗೊಂಡಿದ್ದಾರೆ. ಕೇನ್ ವಿಲಿಯಮ್ಸನ್, ಲಾಕಿ ಫರ್ಗುಸನ್, ಮಾರ್ಕ್ ಚಾಪ್ಮನ್ ಕೂಡ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದಾರೆ.

6 / 8

ಅಕ್ಟೋಬರ್ 13 ರಂದು ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಗಾಯಗೊಂಡಿದ್ದರು. ಅವರ ಹೆಬ್ಬೆರಳು ಮುರಿತವಾಗಿತ್ತು. ಗಾಯದಿಂದಾಗಿ ಕೊನೆಯ ನಾಲ್ಕು ಪಂದ್ಯಗಳನ್ನು ಆಡಲಾಗಲಿಲ್ಲ. ಅವರ ಬದಲಿಗೆ ಟಾಮ್ ಲ್ಯಾಥಮ್ ಅವರನ್ನು ನಾಯಕರನ್ನಾಗಿ ನೇಮಿಸಲಾಯಿತು. ಆದರೆ ಕಳೆದ ಕೆಲ ದಿನಗಳಿಂದ ನೆಟ್ಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸ ಆರಂಭಿಸಿರುವುದು ಸಮಾಧಾನದ ಸಂಗತಿ.

7 / 8

ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಗಳಿಸಿದೆ. ನ್ಯೂಜಿಲೆಂಡ್ ತಂಡ ಮೊದಲ ನಾಲ್ಕು ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿತ್ತು. ಆದರೆ ಕಳೆದ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಬೇಕಾಯಿತು. 7 ಪಂದ್ಯಗಳಿಂದ 4 ಗೆಲುವು ಮತ್ತು 3 ಸೋಲಿನೊಂದಿಗೆ 8 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

8 / 8

ನ್ಯೂಜಿಲೆಂಡ್ ಲೀಗ್ ಹಂತದಲ್ಲಿ ಇನ್ನೂ ಎರಡು ಪಂದ್ಯಗಳು ಬಾಕಿ ಇವೆ. ನವೆಂಬರ್ 4 ರಂದು ಪಾಕಿಸ್ತಾನ ಮತ್ತು ನವೆಂಬರ್ 9 ರಂದು ಶ್ರೀಲಂಕಾ ತಂಡವನ್ನು ಎದುರಿಸಲಿದೆ.

ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us