2 ಸ್ಥಾನಗಳಿಗಾಗಿ 6 ತಂಡಗಳ ನಡುವೆ ಫೈಟ್; ಇಲ್ಲಿದೆ ಸೆಮಿಫೈನಲ್‌ ಲೆಕ್ಕಾಚಾರ

ICC World Cup 2023: ಸೆಮಿಫೈನಲ್‌ನಲ್ಲಿ ಉಳಿದ ಎರಡು ಸ್ಥಾನಗಳಿಗೆ 6 ತಂಡಗಳು ರೇಸ್‌ನಲ್ಲಿವೆ. ಶನಿವಾರ ಆಸ್ಟ್ರೇಲಿಯ ಮತ್ತು ಪಾಕಿಸ್ತಾನದ ಗೆಲುವಿನ ನಂತರ ಈ ರೇಸ್ ಮತ್ತಷ್ಟು ಕುತೂಹಲ ಮೂಡಿಸಿದೆ. ಹೀಗಾಗಿ ಸೆಮಿಫೈನಲ್​ಗೇರುವ ಅವಕಾಶ ಯಾವ ತಂಡಕ್ಕೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on: Nov 06, 2023 | 4:13 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಈ ಬಾರಿಯ ವಿಶ್ವಕಪ್​ನ ಸೆಮಿಫೈನಲ್‌ಗೆ ಟಿಕೆಟ್ ಖಚಿತಪಡಿಸಿಕೊಂಡಿವೆ. ಅದರಂತೆ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು ರೇಸ್‌ನಿಂದ ಹೊರಬಿದ್ದಿವೆ. ಇದೀಗ ಸೆಮಿಫೈನಲ್‌ನಲ್ಲಿ ಉಳಿದ ಎರಡು ಸ್ಥಾನಗಳಿಗೆ 6 ತಂಡಗಳು ರೇಸ್‌ನಲ್ಲಿವೆ. ಶನಿವಾರ ಆಸ್ಟ್ರೇಲಿಯ ಮತ್ತು ಪಾಕಿಸ್ತಾನದ ಗೆಲುವಿನ ನಂತರ ಈ ರೇಸ್ ಮತ್ತಷ್ಟು ಕುತೂಹಲ ಮೂಡಿಸಿದೆ. ಹೀಗಾಗಿ ಸೆಮಿಫೈನಲ್​ಗೇರುವ ಅವಕಾಶ ಯಾವ ತಂಡಕ್ಕೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

1 / 7
ಆಸ್ಟ್ರೇಲಿಯಾ (10 ಅಂಕ) : ಆಸ್ಟ್ರೇಲಿಯ ತಂಡಕ್ಕೆ ಇನ್ನು ಎರಡು ಪಂದ್ಯಗಳು ಬಾಕಿ ಉಳಿದಿದ್ದು, ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಸೆಮಿಫೈನಲ್‌ನಲ್ಲಿ ಸ್ಥಾನ ಪಡೆಯಲು ಆಸ್ಟ್ರೇಲಿಯಾಕ್ಕೆ ಇನ್ನೂ ಒಂದು ಜಯದ ಅಗತ್ಯವಿದೆ. ಮುಂಬರುವ ಎರಡು ಪಂದ್ಯಗಳಲ್ಲಿ ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶವನ್ನು  ಆಸೀಸ್ ಎದುರಿಸಬೇಕಾಗಿದೆ. ಎರಡೂ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಸೋತರೆ ಉಳಿದ ತಂಡಗಳ ಪಂದ್ಯಗಳ ಫಲಿತಾಂಶವನ್ನು ಅವಲಂಬಿಸಬೇಕಾಗುತ್ತದೆ.

2 / 7
ನ್ಯೂಜಿಲೆಂಡ್ (8 ಅಂಕ) : ನ್ಯೂಜಿಲೆಂಡ್ ಪ್ರಸ್ತುತ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು, ಶ್ರೀಲಂಕಾ ವಿರುದ್ಧದ ತನ್ನ ಕೊನೆಯ ಪಂದ್ಯವನ್ನು ಗೆಲ್ಲಬೇಕಾಗಿದೆ. ಆದಾಗ್ಯೂ, ಈ ಪಂದ್ಯದಲ್ಲಿ ಕಿವೀಸ್ ತಂಡ ಭಾರಿ ಜಯ ಸಾಧಿಸಬೇಕಾಗಿದೆ. ಒಂದು ವೇಳೆ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಸೋತರೆ, ಪಾಕಿಸ್ತಾನ, ಅಫ್ಘಾನಿಸ್ತಾನ, ಶ್ರೀಲಂಕಾ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ತಮ್ಮ ಉಳಿದ ಪಂದ್ಯಗಳನ್ನು ದೊಡ್ಡ ಅಂತರದಿಂದ ಸೋತರೆ ಮಾತ್ರ ಕಿವೀಸ್​ಗೆ ಕೊನೆಯ ಅವಕಾಶ ಸಿಗಲಿದೆ.

3 / 7
ಪಾಕಿಸ್ತಾನ (8 ಅಂಕ) : ಪಾಕಿಸ್ತಾನ ತಂಡ ಪ್ರಸ್ತುತ ಐದನೇ ಸ್ಥಾನದಲ್ಲಿದೆ. ಹೀಗಾಗಿ ಕಿವೀಸ್ ತಂಡವನ್ನು ಹಿಂದಿಕ್ಕಬೇಕೆಂದರೆ ಪಾಕಿಸ್ತಾನ ತನ್ನ ಮುಂದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯವನ್ನು ದೊಡ್ಡ ಅಂತರದಿಂದ ಗೆಲ್ಲಬೇಕಾಗಿದೆ. ಒಂದು ವೇಳೆ ಪಾಕ್ ತಂಡ ಇಂಗ್ಲೆಂಡ್ ವಿರುದ್ಧ ಸೋತರೆ, ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಶ್ರೀಲಂಕಾ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ದೊಡ್ಡ ಅಂತರದಿಂದ ಸೋತರೆ ಮಾತ್ರ ಅವರಿಗೂ ಕೊನೆಯ ಅವಕಾಶ ಸಿಗಲಿದೆ.

4 / 7
ಅಫ್ಘಾನಿಸ್ತಾನ (8 ಅಂಕಗಳು) : ಅಫ್ಘಾನಿಸ್ತಾನವು ಪ್ರಸ್ತುತ ಆರನೇ ಸ್ಥಾನದಲ್ಲಿದ್ದು, ಮುಂದಿನ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾವನ್ನು ಮಣಿಸಿದರೆ ಸೆಮಿಫೈನಲ್‌ನಲ್ಲಿ ಸ್ಥಾನ ಪಡೆಯಲ್ಲಿದೆ. ಆದರೆ ಅಫ್ಘಾನಿಸ್ತಾನ ತನ್ನ ಒಂದು ಅಥವಾ ಎರಡರ ಪಂದ್ಯಗಳಲ್ಲಿ ಸೋತರೆ, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಮುಂದಿನ ಪಂದ್ಯಗಳನ್ನು ಭಾರೀ ಅಂತರದಿಂದ ಸೋಲಬೇಕು.

5 / 7
ಶ್ರೀಲಂಕಾ (4 ಅಂಕ) : ಶ್ರೀಲಂಕಾ ಪ್ರಸ್ತುತ ಏಳನೇ ಸ್ಥಾನದಲ್ಲಿದ್ದು ಮುಂದಿನ ಪಂದ್ಯಗಳಲ್ಲಿ ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ವಿರುದ್ಧ ಆಡಬೇಕಾಗಿದೆ. ಶ್ರೀಲಂಕಾ ತನ್ನ ಉಳಿದ ಎರಡೂ ಪಂದ್ಯಗಳನ್ನು ದೊಡ್ಡ ಅಂತರದಿಂದ ಗೆಲ್ಲುವುದು ಮಾತ್ರವಲ್ಲದೆ ಮೇಲಿನ ಎಲ್ಲಾ ತಂಡಗಳು ತಮ್ಮ ಉಳಿದ ಪಂದ್ಯಗಳನ್ನು ದೊಡ್ಡ ಅಂತರದಿಂದ ಸೋಲಬೇಕು. ಆಗ ಮಾತ್ರ ಲಂಕಾ ತಂಡಕ್ಕೆ ಒಂದು ಅವಕಾಶ ಸಿಗಲಿದೆ.

6 / 7
ನೆದರ್ಲ್ಯಾಂಡ್ಸ್ (4 ಅಂಕ) : ನೆದರ್ಲ್ಯಾಂಡ್ಸ್ ಪ್ರಸ್ತುತ ಎಂಟನೇ ಸ್ಥಾನದಲ್ಲಿದೆ. ಈ ತಂಡ ಮುಂದಿನ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ಮತ್ತು ಭಾರತವನ್ನು ಎದುರಿಸಲಿದೆ. ಸೆಮಿಸ್​ಗೇರಬೇಕೆಂದರೆ ನೆದರ್ಲ್ಯಾಂಡ್ಸ್ ತಂಡ ತನ್ನ ಉಳಿದ ಪಂದ್ಯಗಳನ್ನು ದೊಡ್ಡ ಅಂತರದಿಂದ ಗೆಲ್ಲಬೇಕು.

7 / 7
Follow us
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್