Team India: ಒಟ್ಟು 47 ಪ್ಲೇಯರ್ಸ್​: ಟೀಮ್ ಇಂಡಿಯಾದಿಂದ 32 ಆಟಗಾರರು ಔಟ್..!

ICC World Cup 2023: ಏಕದಿನ ವಿಶ್ವಕಪ್ 2023 ಅಕ್ಟೋಬರ್ 5 ರಿಂದ ಶುರುವಾಗಲಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Jul 18, 2023 | 8:31 PM

ಏಕದಿನ ವಿಶ್ವಕಪ್​ಗೆ ಕೌಂಟ್ ಡೌನ್ ಶುರುವಾಗಿದೆ. ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಕ್ರಿಕೆಟ್ ಮಹಾಕದನಕ್ಕಾಗಿ ಸಿದ್ಧತೆಗಳು ಆರಂಭವಾಗಿದೆ. ಇತ್ತ ಟೀಮ್ ಇಂಡಿಯಾ ಆಯ್ಕೆ ಸಮಿತಿ ಕೂಡ ತವರಿನಲ್ಲಿ ಬಲಿಷ್ಠ ಪಡೆಯನ್ನು ಕಣಕ್ಕಿಳಿಸಲು ತಯಾರಿಗಳನ್ನು ಆರಂಭಿಸಿದ್ದಾರೆ.

1 / 9
ಇದರ ಮೊದಲ ಭಾಗವಾಗಿ ಇದೀಗ ಕಳೆದ ಕೆಲ ವರ್ಷಗಳಲ್ಲಿ ಏಕದಿನ ಕ್ರಿಕೆಟ್​​ನಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿರುವ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಈ ಪಟ್ಟಿಯಲ್ಲಿ ಒಟ್ಟು 47 ಆಟಗಾರರು ಕಾಣಿಸಿಕೊಂಡಿದ್ದಾರೆ.

2 / 9
ಅಂದರೆ 2019 ರ ಏಕದಿನ ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಪರ ಇದುವರೆಗೆ ಒಟ್ಟು 47 ಆಟಗಾರರು ಕಣಕ್ಕಿಳಿದಿದ್ದಾರೆ. ಈ ಆಟಗಾರರಲ್ಲಿ ಎಲ್ಲಾ ರೀತಿಯಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದವರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ.

3 / 9
ಅಂದರೆ ಒಟ್ಟು 47 ಆಟಗಾರರಲ್ಲಿ ಅಂತಿಮವಾಗಿ ಏಕದಿನ ವಿಶ್ವಕಪ್​ಗೆ ಆಯ್ಕೆಯಾಗುವುದು ಕೇವಲ 15 ಸದಸ್ಯರು ಮಾತ್ರ. ಉಳಿದ 32 ಆಟಗಾರರಿಗೆ ಅವಕಾಶ ಸಿಗುವುದಿಲ್ಲ. ಹೀಗಾಗಿಯೇ ಮುಂಬರುವ ಏಕದಿನ ಸರಣಿಗಳ ಮೇಲೆ ಕಣ್ಣಿಡಲು ಆಯ್ಕೆ ಸಮಿತಿ ನಿರ್ಧರಿಸಿದೆ.

4 / 9
ಇದಕ್ಕಾಗಿ ಈಗಾಗಲೇ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವೆಸ್ಟ್ ಇಂಡೀಸ್​ಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಅಲ್ಲಿ ರಾಹುಲ್ ದ್ರಾವಿಡ್ ಅವರೊಂದಿಗೆ ಚರ್ಚೆ ನಡೆಸಿ ಏಕದಿನ ವಿಶ್ವಕಪ್​ಗಾಗಿ 20 ಆಟಗಾರರ ಶಾರ್ಟ್ ಲೀಸ್ಟ್ ಮಾಡುವ ಸಾಧ್ಯತೆಯಿದೆ.

5 / 9
ಈ ಶಾರ್ಟ್​ ಲೀಸ್ಟ್​ನಿಂದ ಅಂತಿಮವಾಗಿ 15 ಆಟಗಾರರನ್ನು ಏಕದಿನ ವಿಶ್ವಕಪ್​ಗಾಗಿ ಆಯ್ಕೆ ಮಾಡಲಾಗುತ್ತದೆ. ಹೀಗಾಗಿಯೇ ಮುಂಬರುವ ಏಕದಿನ ಸರಣಿಗಳು ಟೀಮ್ ಇಂಡಿಯಾ ಆಟಗಾರರ ಪಾಲಿಗೆ ತುಂಬಾ ಮಹತ್ವದ್ದಾಗಿದೆ. ಅದರಂತೆ ಅಂತಿಮ 15 ರ ಬಳಗದಲ್ಲಿ ಯಾರಿಗೆಲ್ಲಾ ಸ್ಥಾನ ಸಿಗಲಿದೆ ಕಾದು ನೋಡಬೇಕಿದೆ.

6 / 9
ಆಯ್ಕೆಯೇ ದೊಡ್ಡ ಸವಾಲು: ಕಳೆದ ನಾಲ್ಕು ವರ್ಷಗಳಲ್ಲಿ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಏಕದಿನ ಪಂದ್ಯಗಳನ್ನಾಡಿದ್ದು ವಿರಾಟ್ ಕೊಹ್ಲಿ. 38 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಕೊಹ್ಲಿ 5 ಶತಕ ಹಾಗೂ 11 ಅರ್ಧಶತಕಗಳೊಂದಿಗೆ ಒಟ್ಟು 1612 ರನ್ ಬಾರಿಸಿದ್ದಾರೆ. ಇಲ್ಲಿ ಕೊಹ್ಲಿಗೆ ಸ್ಥಾನ ಖಚಿತ ಎನ್ನಬಹುದು.

7 / 9
ಆದರೆ ಮತ್ತೊಂದೆಡೆ ಕಳೆದ 4 ವರ್ಷಗಳಲ್ಲಿ ಶಿಖರ್ ಧವನ್ 37 ಏಕದಿನ ಪಂದ್ಯಗಳಲ್ಲಿ 1313 ರನ್​ಗಳಿಸಿ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಹೀಗಾಗಿ ಏಕದಿನ ವಿಶ್ವಕಪ್​ಗೆ ಶಿಖರ್​ ಧವನ್​ಗೆ ಮಣೆ ಹಾಕಲಿದೆಯಾ ಎಂಬುದೇ ದೊಡ್ಡ ಪ್ರಶ್ನೆ.

8 / 9
ಈ ಎಲ್ಲಾ ಕಾರಣಗಳಿಂದಾಗಿ 47 ಆಟಗಾರರಿಂದ ಕೇವಲ 15 ಆಟಗಾರರನ್ನು ಆಯ್ಕೆ ಮಾಡುವುದೇ ಈಗ ಟೀಮ್ ಇಂಡಿಯಾ ಆಯ್ಕೆ ಸಮಿತಿ ಮುಂದಿರುವ ದೊಡ್ಡ ಸವಾಲು.

9 / 9

Published On - 8:30 pm, Tue, 18 July 23

Follow us
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್